Nikhil Kumaraswamy: ಮದುವೆಯ ಮೊದಲ ವಾರ್ಷಿಕೋತ್ಸವದಂತೆ ಕೋವಿಡ್ ಸೋಂಕಿಗೆ ತುತ್ತಾದ ನಟ ನಿಖಿಲ್ ಕುಮಾರಸ್ವಾಮಿ
ನಟ, ಯುವ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಇಂದು ಕೋವಿಡ್ ಪರೀಕ್ಷೆಗೆ ಒಳಗಾದಾಗ ತಮ್ಮ ವರದಿ ಪಾಸಿಟಿವ್ ಬಂದಿದೆ ಎಂದು ನಿಖಿಲ್ ಟ್ವೀಟ್ ಮೂಲಕ ದೃಢಪಡಿಸಿದ್ದಾರೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಲ್ಲಿ ತಮ್ಮ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ.