'ಅಜಾತ ಶತ್ರು' ವಾಜಪೇಯಿ ನಡೆದು ಬಂದ ಹಾದಿ...!

webtech_news18
ಡಿಸೆಂಬರ್ 25, 1924 ರಂದು ಮಧ್ಯ ಪ್ರದೇಶದ ಗ್ವಾಲಿಯರ್​ನಲ್ಲಿ ಜನನ
1939 ರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಸೇರ್ಪಡೆ


1942 ರ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿದರು. 1951 ರಲ್ಲಿ ಭಾರತೀಯ ಜನ ಸಂಘವನ್ನು ಸ್ಥಾಪಿಸಿದರು
1957 ರಲ್ಲಿ ಮೊದಲ ಬಾರಿಗೆ ಲೋಕ ಸಭೆಗೆ ಆಯ್ಕೆಯಾದರು. ಜನತಾ ಸಂಘದ ಮೊದಲ ಸರ್ಕಾರದಲ್ಲಿ ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಿಸಿದರು.
1980 ರಲ್ಲಿ ಭಾರತೀಯ ಜನತಾ ಪಾರ್ಟಿ ಸ್ಥಾಪಿಸಿ, ಪಕ್ಷದ ಮೊದಲ ರಾಷ್ಟ್ರೀಯ ಅಧ್ಯಕ್ಷರಾದರು.
1992 ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ಪಡೆದರು. ಬಳಿಕ  1993 ರಲ್ಲಿ ಕಾನ್ಪುರ ವಿಶ್ವವಿದ್ಯಾಲಯ ಇವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತು.
1996 ರಲ್ಲಿ ದೇಶದ ಪ್ರಧಾನಿಯಾಗಿ ಆಯ್ಕೆಯಾಗಿ 13 ದಿನಗಳ ಕಾಲ ಆಡಳಿತ ನಡೆಸಿದರು. ನಂತರ  1998 ರಲ್ಲಿ ಎರಡನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾಗಿ 13 ತಿಂಗಳುಗಳ ಕಾಲ ಅಧಿಕಾರ ನಡೆಸಿದರು.
1999 ರಲ್ಲಿ ಮತ್ತೆ ವಾಜಪೇಯಿ ಸರ್ಕಾರ ಅಧಿಕಾರಕ್ಕೇರಿ  5 ವರ್ಷಗಳ ಕಾಲ ಆಡಳಿತ ನಡೆಸಿತು.
2004 ರಲ್ಲಿ ಲೋಕಸಭೆಗೆ  10ನೇ ಬಾರಿಗೆ ಸಂಸತ್ ಸದಸ್ಯರಾಗಿ ಆಯ್ಕೆಯಾದರು.
2005 ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಪಡೆದರು.
ಮಾರ್ಚ್ 27, 2015 ರಂದು ಮಾಜಿ ಪ್ರಧಾನಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
2018 ರ ಆಗಸ್ಟ್​ 16 ರಂದು ಅಟಲ್ ಬಿಹಾರಿ ವಾಜಪೇಯಿ ಇಹಲೋಕ ತ್ಯಜಿಸಿದರು

Trending Now