ಮಿಥುನ  ರಾಶಿ

Share: Facebook Twitter Linkedin

ವಾರದಲ್ಲಿ ರಾಶಿಭವಿಷ್ಯ(ಮಿಥುನ ರಾಶಿ)

Tuesday, March 28, 2023

ಈ ವಾರ ನಿಮಗೆ ಉತ್ತಮ ಫಲ ದೊರೆಯಲಿದೆ. ವಿವಾಹಿತ ವ್ಯಕ್ತಿಗಳ ಕುರಿತು ಮಾತನಾಡುವುದಾದರೆ, ಯಾವುದಾದರೂ ವಿಷಯದ ಕುರಿತು ನಿಮ್ಮ ನಡುವೆ ಒತ್ತಡ ಕಾಣಿಸಿಕೊಳ್ಳಬಹುದು. ಇಂತಹ ಸನ್ನಿವೇಶದಲ್ಲಿ ಕೌಟುಂಬಿಕ ಬದುಕಿನಲ್ಲಿ ಲವಲವಿಕೆ ತುಂಬಿ ಪ್ರೀತಿಯ ವಾತಾವರಣ ನೆಲೆಸುವಂತೆ ಮಾಡುವುದು ಒಳ್ಳೆಯದು. ಈ ವಾರವು ಪ್ರೇಮ ಜೀವನಕ್ಕೆ ಒಳ್ಳೆಯದು. ಪ್ರಣಯ ಮತ್ತು ಪ್ರೀತಿಯ ಮೂಲಕ ಎಲ್ಲಾ ರೀತಿಯಲ್ಲಿ ನಿಮ್ಮ ಪ್ರೇಮಿಯನ್ನು ಸಂತಸಪಡಿಸಲು ನೀವು ಯತ್ನಿಸಲಿದ್ದೀರಿ. ವಾರದ ಆರಂಭದಲ್ಲಿ ನೀವು ಏನಾದರೂ ಪ್ರಮುಖ ಕೆಲಸಕ್ಕಾಗಿ ಹಣ ಖರ್ಚು ಮಾಡಬಹುದು. ನಿಮ್ಮ ಆತ್ಮವಿಶ್ವಾಸವು ಚೆನ್ನಾಗಿರಲಿದೆ. ಇದರಿಂದಾಗಿ ಕೆಲಸದಲ್ಲಿ ಯಶಸ್ಸನ್ನು ಗಳಿಸಲಿದ್ದೀರಿ. ನೀವು ಮುಂದೆ ಸಾಗಲಿದ್ದು, ಹೊಸ ಹೆಜ್ಜೆಯನ್ನು ಇಡಲಿದ್ದೀರಿ. ವ್ಯವಹಾರ ಅಥವಾ ಕೆಲಸ ಯಾವುದೇ ಇರಲಿ, ಈ ಬಾರಿ ನೀವು ಉತ್ತಮ ಪ್ರಗತಿ ಸಾಧಿಸಲಿದ್ದೀರಿ. ನಿಮ್ಮ ಕಾರ್ಯಕ್ಷಮತೆಯಲ್ಲಿ ಸಾಕಷ್ಟು ಸುಧಾರಣೆ ಕಾಣಿಸಿಕೊಳ್ಳಲಿದೆ. ನಿಮ್ಮ ಕೆಲಸವನ್ನು ಜನರು ಗಮನಿಸಲಿದ್ದಾರೆ. ನಿಮ್ಮನ್ನು ಪ್ರಶಂಸಿಸಲು ಅವರು ಹಿಂದೆ ಮುಂದೆ ನೋಡುವುದಿಲ್ಲ. ನಿಮ್ಮ ಕೆಲವು ವಿರೋಧಿಗಳು ಸಹ ನಿಮ್ಮನ್ನು ಪ್ರಶಂಸಿಸಲಿದ್ದಾರೆ. ವಿದ್ಯಾರ್ಥಿಗಳ ಕುರಿತು ಹೇಳುವುದಾದರೆ ಅವರು ತಮ್ಮ ಅಧ್ಯಯನಕ್ಕೆ ಸಂಪೂರ್ಣ ಗಮನ ನೀಡಬೇಕು. ಅಡಚಣೆಯು ದೊಡ್ಡ ಸಮಸ್ಯೆ ಎನಿಸಲಿದೆ. ನಿಮ್ಮ ಆರೋಗ್ಯದ ವಿಚಾರದಲ್ಲಿ ಹೇಳುವುದಾದರೆ, ನಿಮ್ಮ ಆರೋಗ್ಯದ ಕುರಿತು ನೀವು ಕಾಳಜಿ ವಹಿಸುವುದು ಅಗತ್ಯ. ಈ ಸಂದರ್ಭದಲ್ಲಿ ಅಲರ್ಜಿ ಕಾಣಿಸಿಕೊಳ್ಳಬಹುದು. ಮೊಡವೆಗಳು ಕಾಣಿಸಿಕೊಳ್ಳಬಹುದು. ವಾರದ ಆರಂಭಿಕ ದಿನಗಳನ್ನು ಹೊರತುಪಡಿಸಿ ಉಳಿದೆಲ್ಲ ದಿನಗಳು ಪ್ರಯಾಣಿಸಲು ಉತ್ತಮ.

ರಾಶಿಯಾಧಾರಿತ ವ್ಯಕ್ತಿತ್ವ

ಮಿಥುನ ರಾಶಿಯ ಅಧಿಪತಿ ಬುಧ ಗ್ರಹ. ಈ ರಾಶಿಯಲ್ಲಿ ಜನಿಸಿದವರು ಚುರುಕು ಬುದ್ಧಿಯವರಾಗಿರುತ್ತಾರೆ. ಕುತೂಹಲಿಗಳು ಆದ ಇವರ ಬುದ್ಧಿವಂತಿಕೆಯನ್ನು ಯಾರಾದರೂ ಮೆಚ್ಚಲೇಬೇಕು. ಗುಂಪಿನಲ್ಲಿ ಸದಾ ತಮ್ಮ ಚುರುಕಿನ ನಡೆಯಿಂದ ಎಲ್ಲರನ್ನೂ ಆಕರ್ಷಿಸುತ್ತಾರೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:06:36

ಇಂದಿನ ತಿಥಿ:ಶುಕ್ಲ ಪಕ್ಷ ಸಪ್ತಮಿ

ಇಂದಿನ ನಕ್ಷತ್ರ:ಮೃಗಶಿರ

ಇಂದಿನ ಕರಣ: ಗರ

ಇಂದಿನ ಪಕ್ಷ:ಶುಕ್ಲ

ಇಂದಿನ ಯೋಗ:ಶುಭಭಾಗ್ಯ

ಇಂದಿನ ವಾರ:ಮಂಗಳವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:15:49 to 17:21

ಯಮಘಂಡ:11:12 to 12:44

ಗುಳಿಗ ಕಾಲ:12:44 to 14:17

//