ಧನು ರಾಶಿ  ರಾಶಿ

Share: Facebook Twitter Linkedin

ವಾರದಲ್ಲಿ ರಾಶಿಭವಿಷ್ಯ(ಧನು ರಾಶಿ ರಾಶಿ)

Thursday, March 23, 2023

ಈ ವಾರ ನಿಮಗೆ ಉತ್ತಮ ಫಲ ದೊರೆಯಲಿದೆ. ವೈವಾಹಿಕ ಬದುಕು ಸಂತಸದಿಂದ ಕೂಡಿರಲಿದೆ. ಪರಸ್ಪರ ಪ್ರೀತಿಯ ಭಾವನೆ ನೆಲೆಸಲಿದೆ. ಇದು ನಿಮ್ಮ ಸಂಬಂಧವನ್ನು ಪೂರ್ಣಗೊಳಿಸಲಿದೆ. ಪ್ರೇಮದ ಸಂಬಂಧದಲ್ಲಿರುವವರಿಗೆ ಈ ವಾರವು ಒಳ್ಳೆಯದು. ಈಗಲೇ ಕಾಡುತ್ತಿರುವ ಸಮಸ್ಯೆಗಳು ದೂರಗೊಳ್ಳಲಿವೆ. ಪರಸ್ಪರ ಸಾಮಿಪ್ಯತೆಯೂ ಹೆಚ್ಚಲಿದೆ. ನಿಮ್ಮ ಮೇಲಿನ ಆತ್ಮವಿಶ್ವಾಸದಲ್ಲಿ ವೃದ್ಧಿಯಾಗಲಿದೆ. ಇದರಿಂದಾಗಿ ಚೆನ್ನಾಗಿ ಕೆಲಸ ಮಾಡಲು ನಿಮಗೆ ಸಾಧ್ಯವಾಗಲಿದೆ. ಉದ್ಯೋಗದಲ್ಲಿರುವವರಿಗೆ ಇದು ಉತ್ತಮ ಕಾಲ. ನಿಮ್ಮ ದಕ್ಷತೆಯ ಆಧಾರದಲ್ಲಿ ಕೆಲಸದ ಸ್ಥಳವನ್ನು ಉತ್ತಮ ಸ್ಥಳವನ್ನಾಗಿ ಪರಿವರ್ತಿಸಲಿದ್ದೀರಿ. ನಿಮಗೆ ಭಡ್ತಿ ಮತ್ತು ಸಂಬಳದಲ್ಲಿ ಹೆಚ್ಚಳ ಉಂಟಾಗಲಿದೆ. ಉದ್ಯೋಗದಲ್ಲಿ ತೊಡಗಿಸಿಕೊಂಡಿರುವ ಜನರು ಕೆಲ ಹೊಸ ಜನರ ಜೊತೆಗೆ ಒಪ್ಪಂದವನ್ನು ಮಾಡಿಕೊಂಡು ತಮ್ಮ ಕೆಲಸವನ್ನು ಮುಂದಕ್ಕೆ ಕೊಂಡೊಯ್ಯಲಿದ್ದಾರೆ. ಇದರಿಂದಾಗಿ ನಿಮಗೆ ಭವಿಷ್ಯದಲ್ಲಿ ಲಾಭವಾಗಲಿದೆ. ಈ ವಿಚಾರದಲ್ಲಿ ಯಾರನ್ನೂ ಸುಮ್ಮನೆ ನಂಬಬೇಡಿ. ಅಲ್ಲದೆ ಎಚ್ಚರಿಕೆಯಿಂದ ಕೆಲಸ ಮಾಡಿ. ವಿದ್ಯಾರ್ಥಿಗಳ ವಿಚಾರದಲ್ಲಿ ಹೇಳುವುದಾದರೆ ಅವರ ಪಾಲಿಗೆ ಸಮಯವು ಚೆನ್ನಾಗಿದೆ. ನೀವು ಕಠಿಣ ಶ್ರಮವನ್ನು ಪಡಲಿದ್ದೀರಿ. ನಿಮ್ಮ ಅಧ್ಯಯನವನ್ನು ಮುಂದುವರಿಸುವ ಮೂಲಕ ನೀವಾಗಿಯೇ ಉತ್ತಮ ಸಾಧನೆ ಮಾಡಲಿದ್ದೀರಿ. ನೀವು ಇದರಲ್ಲಿ ಯಶಸ್ಸು ಸಾಧಿಸಲಿದ್ದೀರಿ. ಆರೋಗ್ಯದ ಕುರಿತು ಹೇಳುವುದಾದರೆ, ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ನಿಮ್ಮನ್ನು ಸದ್ಯಕ್ಕೆ ಕಾಡದು. ಆದರೂ ನಿಮ್ಮ ದಿನಚರಿಯಲ್ಲಿ ನಿರಂತರತೆ ಕಾಪಾಡಿ. ಈ ವಾರವು ಪ್ರಯಾಣಿಸುವುದಕ್ಕೆ ಅನುಕೂಲಕರ.

ರಾಶಿಯಾಧಾರಿತ ವ್ಯಕ್ತಿತ್ವ

ಧನು ರಾಶಿಯ ಅಧಿಪತಿ ಗುರು ಗ್ರಹ. ಇವರು ಪ್ರಬಲ ಹಾಗೂ ಸಕಾರಾತ್ಮಕ ದೃಷ್ಠಿಕೋನವನ್ನು ಹೊಂದಿರುತ್ತಾರೆ. ಈ ರಾಶಿಯವರು ಧಾರ್ಮಿಕರಾಗಿಯು, ಬುದ್ಧಿವಂತರಾಗಿರು, ನಿಷ್ಠೆವುಳ್ಳವರಾಗಿಯೂ ಇರುತ್ತಾರೆ. ಸಾಮಾನ್ಯವಾಗಿ ಈ ರಾಶಿಯವರಿಗೆ ಫ್ಯಾಷನ್​ ಮೇಲೆ ಹೆಚ್ಚು ಆಸಕ್ತಿ ಇರುತ್ತದೆ.

ಹೆಚ್ಚಿನ ಓದಿಗಾಗಿ

ಫೋಟೋ ಗ್ಯಾಲರಿ

ಹೆಚ್ಚಿನ ಓದಿಗಾಗಿ

ಇಂದಿನ ಪಂಚಾಂಗ

ಇಂದು ಸೂರ್ಯೋದಯ:06:41

ಇಂದಿನ ತಿಥಿ:ಶುಕ್ಲ ಪಕ್ಷ ದ್ವಿತೀಯ

ಇಂದಿನ ನಕ್ಷತ್ರ:ರೇವತಿ

ಇಂದಿನ ಕರಣ: ಬಾಲವ

ಇಂದಿನ ಪಕ್ಷ:ಶುಕ್ಲ

ಇಂದಿನ ಯೋಗ:ಬ್ರಾಹ್ಮ್

ಇಂದಿನ ವಾರ:ಗುರುವಾರ

ಹೆಚ್ಚಿನ ಓದಿಗಾಗಿ

ಅಶುಭ ಸಮಯ

ರಾಹು ಕಾಲ:14:17 to 15:48

ಯಮಘಂಡ:06:41 to 08:12

ಗುಳಿಗ ಕಾಲ:09:43 to 11:15

//