Mysore Accident: 10 ಮಂದಿ ಸಾವಿಗೆ ಪ್ರಧಾನಿ ಕಂಬನಿ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಣೆ

ಮೈಸೂರಿನ ಬಳಿ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬದಲ್ಲಷ್ಟೇ ಅಲ್ಲ, ಇಡೀ ರಾಜ್ಯವೇ ದುಃಖದ ಕಡಲಿನಲ್ಲಿ ಮುಳುಗಿದೆ. ಇದೀಗ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿ, ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ.