Temple: ಶಿವರಾತ್ರಿಯಂದು ಶಿವ-ಪಾರ್ವತಿ ಭೇಟಿಯಾಗುವ ಕಾರಿಂಜೇಶ್ವರ ದೇವಸ್ಥಾನದ ಇತಿಹಾಸ ಗೊತ್ತಾ..?
Karinjeshwara Temple: ಶಿವರಾತ್ರಿ ಇಲ್ಲಿ ಪ್ರಧಾನ ಉತ್ಸವ ನಾಲ್ಕು ದಿನ ನಡೆಯುತ್ತದೆ. ಜಾತ್ರೆ ವೇಳೆ ಗುಡ್ಡದ ಮೇಲಿನಿಂದ ಶಿವನ ವಿಗ್ರಹವನ್ನು ಪಾರ್ವತಿ ದೇವಸ್ಥಾನಕ್ಕೆ ತರುವ ಮೂಲಕ ಶಿವ-ಪಾರ್ವತಿಯರ ಭೇಟಿ ನಡೆಯುತ್ತದೆ
ಬಂಟ್ವಾಳದ (Bantawala) ವಗ್ಗ ಗ್ರಾಮದಲ್ಲಿ ಬರುವ ಪುಣ್ಯಕ್ಷೇತ್ರ ಕಾರಿಂಜೇಶ್ವರ ದೇವಸ್ಥಾನ (Karinjeshwara Temple). ಪೌರಾಣಿಕ ಶಿವ ಕ್ಷೇತ್ರಕ್ಕೆ ತನ್ನದೆ ಆದ ಐತಿಹ್ಯವಿದೆ(History). ದೂರದಿಂದ ನೋಡಿದಾಗ ಏಕಶಿಲಾ ಬೆಟ್ಟದಂತೆ ಭಾಸವಾಗುವ ಕಾರಿಂಜೇಶ್ವರ ದೇವಸ್ಥಾನಬಹಳ ಸುಂದರವಾದ ದೇವಾಲಯ(Temple). ದೇವಾಲಯದ ಸಮೀಪವಿರುವ ಬೆಟ್ಟವು ಬೃಹತ್ ಬಂಡೆಗಳಿಂದ ಮಾಡಲ್ಪಟ್ಟಿದ್ದು ಕಪಿಗಳಿಗೆ ಆಶ್ರಯವಾಗಿದೆ.ಕಾರಿಂಜ ಬೆಟ್ಟವು ಸಮುದ್ರ(Ocean) ಮಟ್ಟದಿಂದ 1500 ಅಡಿ ಎತ್ತರದಲ್ಲಿದೆ. ಶಿವನಿಗೂ(Lord Shiva), ಪಾರ್ವತಿಗೂ ಪ್ರತ್ಯೇಕ ದೇವಸ್ಥಾನವಿರುವುದು ಇಲ್ಲಿನ ವೈಶಿಷ್ಟ್ಯ. ಗುಡ್ಡದ ನಡುವೆ ಪಾರ್ವತಿ ಹಾಗೂ ಗುಡ್ಡದ ತುತ್ತ ತುದಿಯಲ್ಲಿ ಶಿವನಿಗೆ ಶಿಲಾಮಯ ಗರ್ಭಗುಡಿಯಿದೆ.
ಕಾರಿಂಜೇಶ್ವರ ದೇವಾಲಯದ ಇತಿಹಾಸ
ಎಂಟುನೂರು ವರ್ಷಗಳ ಹಿಂದೆ ಕಾರಿಂಜತ್ತಾಯ ಮತ್ತು ಇಚ್ಳತ್ತಾಯ ಎಂಬ ಇಬ್ಬರು ಬ್ರಾಹ್ಮಣ ಸಹೋದರರು ಉತ್ತರ ಕನ್ನಡ ದ ಕುಂಬಲದಿಂದ ಸನಾತನ ಸಂಸ್ಕೃತಿಯ ಪ್ರಚಾರಕಾಗಿ ಬಂದಿದ್ದರು. ಆ ಸಮಯದಲ್ಲಿ ತುಳುನಾಡಲ್ಲಿ ರಾಜ ಆಡಳಿತ ಅಸ್ಥಿತ್ವದಲ್ಲಿ ಇತ್ತು. ಭೂತಾರಾಧನೆ ಇಲ್ಲಿನ ಜನರ ಮುಖ್ಯ ಆಚರಣೆ ಆಗಿತ್ತು. ಯಾವ ಜಾಗದಲ್ಲಿ ಇಚ್ಳತ್ತಾಯ ನೆಲೆಯಾದನು ಆ ಪ್ರದೇಶ ಇಚ್ಲಂಪಾಡಿ ಎಂದು ಪ್ರಸಿದ್ಧಿಯಾಯಿತು ಹಾಗೂ ಎಲ್ಲಿ ಕಾರಿಂಜತ್ತಾಯ ನೆಲೆಯಾದನು ಆ ಜಾಗ ಕಾರಿಂಜ ಎಂದು ಪ್ರಸಿದ್ದಿಯಾಯಿತು. ಕಾರಿಂಜ ಮತ್ತು ಇಚ್ಲಂಪಾಡಿ ನಡುವೆ ಸುಂದರ ಪ್ರಕೃತಿ ದ್ರಶ್ಯ ಅಲ್ಲಿ ಒಂದು ಸುಂದರವಾದ ಶಿವ ದೇವಸ್ಥಾನ ನಿರ್ಮಾಣವಾಯಿತು. ಈ ಕ್ಷೇತ್ರ ಕಾರಿಂಜೇಶ್ವರ ಎಂದು ಪ್ರಸಿದ್ಧಿಯಾಯಿತು.
ಹಿಂದೂ ಪುರಾಣಗಳಲ್ಲಿ ನಾಲ್ಕು ಯುಗಗಳನ್ನು ಉಲ್ಲೇಖಿಸಲಾಗಿದೆ ಮತ್ತು ಕಾರಿಂಜೇಶ್ವರ ದೇವಸ್ಥಾನ ಅವೆಲ್ಲದಕ್ಕೂ ಸಾಕ್ಷಿಯಾಗಿದೆ. ಈ ದೇವಾಲಯವನ್ನು ಕ್ರುತ ಯುಗದ ಸಮಯದಲ್ಲಿ ರೌದ್ರ ಗಿರಿ, ದ್ವಾಪರಯುಗದಲ್ಲಿ ಭೀಮಾ ಶೈಲಾ, ತ್ರೇತಾ ಯುಗದಲ್ಲಿ ಗಜೇಂದ್ರ ಗಿರಿ, ಮತ್ತು ಕಲಿಯುಗದಲ್ಲಿ ಕಾರಿಂಜ ಎಂದು ಕರೆಯಲಾಗುತ್ತಿದೆ . ಇದು ನಾಲ್ಕು ಪ್ರಮುಖ ಯುಗಗಳಿಗೆ ಸಾಕ್ಷಿಯಾಗಿರುವ ಒಂದು ದೇವಾಲಯವಾಗಿದೆ.
ಶಿವರಾತ್ರಿ ದಿನ ಬೆಟ್ಟದಲ್ಲಿ ಶಿವ-ಪಾರ್ವತಿಯರ ಭೇಟಿ
ಶಿವರಾತ್ರಿ ಇಲ್ಲಿ ಪ್ರಧಾನ ಉತ್ಸವ ನಾಲ್ಕು ದಿನ ನಡೆಯುತ್ತದೆ. ಜಾತ್ರೆ ವೇಳೆ ಗುಡ್ಡದ ಮೇಲಿನಿಂದ ಶಿವನ ವಿಗ್ರಹವನ್ನು ಪಾರ್ವತಿ ದೇವಸ್ಥಾನಕ್ಕೆ ತರುವ ಮೂಲಕ ಶಿವ-ಪಾರ್ವತಿಯರ ಭೇಟಿ ನಡೆಯುತ್ತದೆ. ಪೌರಾಣಿಕ ಕಥೆಯ ಪ್ರಕಾರ ಶಿವನು ಪಾರ್ವತಿಯ ಸಂಗ ಬಯಸಿ ಮೇಲಿನ ಬೆಟ್ಟದಿಂದ ಬಹಳ ಆತುರದಿಂದ ಇಳಿದು ಬರುತ್ತಾನೆ. ಆದರೆ ಇಲ್ಲಿ ಬಂದು ತಲಪಿದಾಗ ಪಾರ್ವತಿಯು ರಜಸ್ವಲೆಯಾಗಿರುವುದು ತಿಳಿದು, ಅತೀ ವೇಗದಲ್ಲಿ ಆ ಕಡಿದಾದ ಬೆಟ್ಟವನ್ನು ಏರಿ ತನ್ನ ಸ್ಥಾನವನ್ನು ಸೇರುತ್ತಾನೆ. ಇದನ್ನು ಈಗಲೂ ಉತ್ಸವದ ಸಮಯದಲ್ಲಿ ಅರ್ಚಕರು ದೇವರ ವಿಗ್ರಹವನ್ನು ತಲೆಯಲ್ಲಿ ಹೊತ್ತುಕೊಂಡು ಕಡಿದಾದ ಬೆಟ್ಟವನ್ನು ಓಡಿಕೊಂಡೇ ಹೋಗುವುದು ನಡೆದುಕೊಂಡು ಬಂದಿದೆ.
ಬೆಟ್ಟದ ತುದಿಯ ಶಿವ ದೇವಸ್ಥಾನದಿಂದ ನಾಲ್ಲೂ ದಿಕ್ಕಿನಲ್ಲಿ ಹಚ್ಚ ಹಸಿರು ದೃಶ್ಯ ವೈಭವ. ಇಲ್ಲಿಂದ ಕೆಳಗಿನ ಬೃಹತ್ ಶಿಲಾಬೆಟ್ಟದತ್ತ ಕೂಗಿಕೊಂಡರೆ ಸ್ಪಷ್ಟ ಪ್ರತಿಧ್ವನಿ ನೀಡುವ ಪ್ರತಿಧ್ವನಿ ಕಲ್ಲು ಇದೆ. ಸತ್ಯ ಪ್ರಮಾಣ ಮಾಡುತ್ತಿದ್ದ ಸೀತಾದೇವಿ ಪ್ರಮಾಣ ಕಲ್ಲು ಇದೆ. ವಾನರ ಸೇನೆಗೆ ನಿತ್ಯ ಅನ ನೈವೇದ್ಯ ನೀಡುವುದು ಇನೊಂದು ವಿಶೇಷ. ಇಲ್ಲಿ ಒಂದು ಭಾರೀ ಗಾತ್ರದ ಮಂಗ (ಕಾರಿಂಜ ದಡ್ಡ) ಇತ್ತಂತೆ.
ದೇವರ ಪೂಜೆ ಆದ ಮೇಲೆ ದೇವರ ಪ್ರಸಾದವನ್ನು ಒಂದು ದೊಡ್ಡ ಪಾದೆ ಕಲ್ಲಿನ ಮೇಲೆ ಈ ಮಂಗ ಹಾಗೂ ಉಳಿದ ಮಂಗಗಳಿಗಾಗಿ ಹಾಕುತ್ತಿದ್ದರು. ಅನ್ನ ಬಿಸಿ ಇದ್ದರೆ ಈ ಕಾರಿಂಜದಡ್ಡ ಸಮೀಪ ಇದ್ದ ಮಂಗವನ್ನೇ ಹಿಡಿದು ಅನ್ನವನ್ನು ಕಲಸುತ್ತಿತ್ತಂತೆ. ನಿಜವೋ ಸುಳ್ಳೋ ಗೊತ್ತಿಲ್ಲ. ದೇವಸ್ಥಾನದ ಸುತ್ತಮುತ್ತ ಚಾರಣ ಕೈಗೊಳ್ಳಬಹುದಾದ ಸಾಕಷ್ಟು ತಾಣಗಳಿವೆ
Published by:ranjumbkgowda1 ranjumbkgowda1
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ