Ganesh Festival: ಗಣೇಶ ಹಬ್ಬದ ವೈಶಿಷ್ಟ್ಯತೆಗಳು ಏನು? ಹಬ್ಬದ ಮುನ್ನ ನೀವು ಇದನ್ನು ತಿಳಿದುಕೊಳ್ಳಲೇಬೇಕು

ಈ ವರ್ಷ ಗಣೇಶ ಚತುರ್ಥಿ ಆಗಸ್ಟ್ 31 ರಂದು ಬಂದಿದೆ. ಪ್ರತಿ ವರ್ಷ ಭಾದ್ರಪದ ಮಾಸದ ಶುಕ್ಲ ಪಕ್ಷ ಚತುರ್ಥಿ ತಿಥಿಯಂದು ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತದೆ. ಈ ವರ್ಷ ವಿಶೇಷ ಮುಹೂರ್ತ ಬರಲಿದೆ. ಜ್ಯೋತಿಷಿ ಶ್ರೀಪತಿ ತ್ರಿಪಾಠಿ ಮಾತನಾಡಿ, ಈ ವರ್ಷ ಗಣೇಶ ಚತುರ್ಥಿಯಂದು ಅಪರೂಪದ ಕಾಕತಾಳೀಯ ಸಂಭವಿಸಲಿದೆ. ಈ ಸಮಯದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಬೇಕು ಎಂದು ಹೇಳುತ್ತಾರೆ.

ಗಣೇಶ ಚತುರ್ಥಿ

ಗಣೇಶ ಚತುರ್ಥಿ

  • Share this:
    ಭಾರತದಲ್ಲಿ (India) ವೈಭವದಿಂದ ಆಚರಿಸಲ್ಪಡುವ ಹಬ್ಬಗಳಲ್ಲಿ ಗಣೇಶ ಹಬ್ಬವು (Ganesh Festival) ಒಂದು. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ (Silver) ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿದ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬು ಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ. ಈ ವರ್ಷ ಗಣೇಶ ಚತುರ್ಥಿ ಆಗಸ್ಟ್ 31 (August 31) ರಂದು ಬಂದಿದೆ. ಪ್ರತಿ ವರ್ಷ ಭಾದ್ರಪದ ಮಾಸದ ಶುಕ್ಲ ಪಕ್ಷ ಚತುರ್ಥಿ ತಿಥಿಯಂದು ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತದೆ. ಈ ವರ್ಷ ವಿಶೇಷ ಮುಹೂರ್ತ (Special Muhurtha) ಬರಲಿದೆ. ಜ್ಯೋತಿಷಿ ಶ್ರೀಪತಿ ತ್ರಿಪಾಠಿ ಮಾತನಾಡಿ, ಈ ವರ್ಷ ಗಣೇಶ ಚತುರ್ಥಿಯಂದು ಅಪರೂಪದ ಕಾಕತಾಳೀಯ ಸಂಭವಿಸಲಿದೆ. ಈ ಸಮಯದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಬೇಕು ಎಂದು ಹೇಳುತ್ತಾರೆ.

    ಗಣೇಶ ಹಬ್ಬದ ವೈಶಿಷ್ಟ್ಯತೆಗಳು
    ನಮ್ಮ ದೇಶದಲ್ಲಿ ಗಣಪತಿಯ ಪೂಜೆಯು ಅನಾದಿ ಕಾಲದಿಂದಲೂ ನಡೆದು ಬಂದಿದೆ. ಆನೆಗಳ ಹಿಂಡು ಹೊಲ ಗದ್ದೆಗಳಿಗೆ ನುಗ್ಗಿ ಬೆಳೆಯನ್ನು ಹಾಳು ಮಾಡುವುದನ್ನು ತಡೆಯುವ ಸಲುವಾಗಿ ರೈತಾಪಿ ಜನಗಳು ಆನೆಯ ಮುಖವುಳ್ಳ ದೇವನನ್ನು ಪೂಜಿಸುತ್ತಾರೆ. ಅಲ್ಲದೇ ಗೋದಾಮುಗಳಲ್ಲಿ ಧಾನ್ಯಗಳನ್ನು ತಿಂದು ಹಾಳು ಮಾಡುವ ಇಲಿಗಳನ್ನೂ ಪೂಜಿಸಿ ಇಬ್ಬರನ್ನೂ ಸಮಾಧಾನಿಸುವುದೂ ಹಬ್ಬದ ಒಂದು ಕಾರಣವೆಂದು ಕೆಲವರು ಹೇಳುವರು.

    ಅದಲ್ಲದೇ ಹೊಲಗಳಲ್ಲಿ ನಿಲ್ಲಿಸುವ ಬೆರ್ಚಪ್ಪನಿಗೂ ಗಣಪತಿಯಂತೆ ಡೊಳ್ಳು ಹೊಟ್ಟೆಯನ್ನು ಮಾಡಿರುತ್ತಾರೆ. ಇದಲ್ಲದೇ ಗಣಪತಿಯನ್ನು ಬರ್ಮಾ, ಮಲೇಶಿಯಾ, ಇಂಡೋನೇಶಿಯಾ, ಚೀನಾ, ಸುಮಾತ್ರಾ, ಜಾವಾ, ಜಾಪಾನ್ ಮತ್ತಿತರ ದೇಶಗಳಲ್ಲಿಯೂ ಪೂಜಿಸುತ್ತಿದ್ದರು. ವಿಜ್ಞಾನಿಗಳ ಸೃಷ್ಟಿಯ ವಿಕಾಸಕ್ಕೂ ನಮ್ಮ ಪುರಾಣಗಳಲ್ಲಿ ಹೇಳುವ ದಶಾವತಾರ ಕಥೆಗಳಿಗೂ ಹೋಲಿಕೆಯುಂಟು.

    ಇದನ್ನೂ ಓದಿ: Ganesh Festival: ಗಣೇಶ ಚತುರ್ಥಿಯ 10 ದಿನಗಳಲ್ಲಿ ನಡೆಸುವ ಪ್ರಮುಖ ಆಚರಣೆಗಳ ಬಗ್ಗೆ ಗೊತ್ತೇ? ಇಲ್ಲಿದೆ ಮಾಹಿತಿ

    ಅರ್ಧ ಪ್ರಾಣಿ ಅರ್ಧ ಮನುಷ್ಯ
    ಮೊದಲಿಗೆ ನೀರಿನಲ್ಲಿರುವ ಅವತಾರಗಳಾದರೆ, ನಂತರ ಅರ್ಧ ಪ್ರಾಣಿ ಅರ್ಧ ಮನುಷ್ಯ. ಇದರಲ್ಲಿ ಗಣಪತಿಯೂ ಒಂದಾಗಿದೆ. ಗ್ರೀಕರ ಕಲ್ಪನೆಯಲ್ಲಿಯೂ ಇಂತಹ ಉದಾಹರಣೆಗಳಿವೆ. ಗಣಪತಿಯ ಮೂರ್ತಿಯ ಪೂಜೆಗೆ ಮೊದಲು ಸಗಣಿಯಿಂದ ಮಾಡಿ ಅದರ ಮೇಲೆ ಗರಿಕೆಯನ್ನಿಟ್ಟು ಅದನ್ನು ಪಿಳ್ಳೇರಾಯನೆಂದು ಕರೆದು ಅದಕ್ಕೆ ಪೂಜಿಸುವರು. ಮಿಕ್ಕೆಲ್ಲ ದೇವರುಗಳಂತೆ ಇದಕ್ಕೂ ಷೋಡಶಾಂಗ ಪೂಜಾವಿಧಾನದ ರೀತ್ಯಾ ಪೂಜಿಸುವರು.

    10 ದಿನ ನಿತ್ಯ ಪೂಜೆ
    ಹತ್ತು ದಿನಗಳವರೆಗ ನಿತ್ಯ ಗಣೇಶನಿಗೆ ಪೂಜೆಯನ್ನು ಮಾಡಿ, 10ನೇಯ ದಿನ ಅಂದರೆ ಅನಂತ ಚತುರ್ದಶಿಯ ದಿನದಂದು ವಿಸರ್ಜನೆ ಮಾಡುವರು. ದೇಶದ ವಿವಿದೆಡೆ ವಿವಿಧ ರೀತಿಯಲ್ಲಿ ಗಣಪತಿಯ ಹಬ್ಬವನ್ನಾಚರಿಸುವರು. ದಕ್ಷಿಣ ದೇಶದಲ್ಲಿ ಮನೆ ಮನೆಗಳಲ್ಲಿ ಗಣಪತಿಯ ಮೂರ್ತಿಗೆ ಪೂಜಿಸಿದರೆ, ಮಹಾರಾಷ್ಟ್ರದಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಜನಗಳನ್ನು ಒಗ್ಗೂಡಿಸಲು ಆರಂಭಿಸಿದ ಸಾರ್ವಜನಿಕ ಗಣಪತಿ ಪೂಜೆ ಇಂದಿಗೂ ಹಾಗೆಯೇ ಮುಂದುವರೆಯುತ್ತಿದೆ.

    ಇದನ್ನೂ ಓದಿ: Ganesh Festival: ಗಣೇಶ ಚತುರ್ಥಿಯಂದು ಚಂದ್ರನ ದರ್ಶನ ಮಾಡಬಾರದು ಏಕೆ? ನೋಡಿದ್ರೆ ಶಾಪ ತಟ್ಟುತ್ತಾ?

    "ಏಕದಂತಾಯ ವಿದ್ಮಹೇ ವಕ್ರತುಂಡಾಯ ಧೀಮಹಿ ತನ್ನೋ ದಂತಿ: ಪ್ರಚೋದಯಾತ್"
    ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಅಂತ್ಯಂತ ವಿಜೃಂಭಣೆಯಿಂದ ಈ ಹಬ್ಬವನ್ನು ಆಚರಿಸುತ್ತಾರೆ. ಕರಾವಳಿ ಪ್ರದೇಶದಲ್ಲಿ ತನ್ನದೇ ಆದ ಪರಂಪರೆ ಹೊಂದಿದೆ. ಇಲ್ಲಿ ಡೊಳ್ಳು ಕುಣಿತ, ಹುಲಿವೇಷ, ಯಕ್ಷಗಾನ ಮುಂತಾದವು ಇಲ್ಲಿನ ಗಣೇಶೋತ್ಸವಕ್ಕೆ ಮೆರಗು ತರುತ್ತದೆ. ಕುಂದಾಪುರ, ಶಿರೂರು, ಮಂಗಳೂರು, ಉಡುಪಿ ಮುಂತಾದ ಕಡೆಯಲ್ಲಿ ಸುಂದರವಾದ ಸಂಭ್ರಮದ ಗಣೇಶ ಚತುರ್ಥಿ ನಡೆಯುತ್ತದೆ.
    Published by:Savitha Savitha
    First published: