Kottureshwara Jatra: ಕೊಟ್ಟೂರು ದೊರೆಯೇ, ನಿನಗಾರು ಸರಿಯೇ? ಸರಿ ಸರಿ ಅಂದವರ ಹಲ್ಲುಮುರಿವೆ!

X
ಇಲ್ಲಿ ವಿಡಿಯೋ ನೋಡಿ

"ಇಲ್ಲಿ ವಿಡಿಯೋ ನೋಡಿ"

ದಿನವಿಡಿ ಉಪವಾಸ ಇರುವ ದಲಿತ ಮಹಿಳೆ ಪಲ್ಲಕ್ಕಿಯಲ್ಲಿರುವ ಸ್ವಾಮಿಗೆ ಕಳಸದಾರತಿ, ಧೂಪದಾರತಿ ಮಾಡಿದರು.

  • News18 Kannada
  • 3-MIN READ
  • Last Updated :
  • Bellary, India
  • Share this:

    ವಿಜಯನಗರ:  ಶ್ರೀಕ್ಷೇತ್ರ ಕೊಟ್ಟೂರಿನಲ್ಲಿ ಪವಾಡ ಪುರುಷರಾಗಿರುವ ಶ್ರೀಗುರು ಕೊಟ್ಟೂರೇಶ್ವರ ರಥೋತ್ಸವಕ್ಕೆ ಲಕ್ಷಾಂತರ ಭಕ್ತರು (Kottureshwara Devotees) ಸಾಕ್ಷಿಯಾಗಿದ್ದರು. ಅತಿ ಎತ್ತರದ ತೇರನ್ನು ಲಕ್ಷಾಂತರ ಭಕ್ತರ ಸಮೂಹದಲ್ಲಿ ಎಳೆಯಲಾಯಿತು. 4-5 ಲಕ್ಷಕ್ಕೂ ಅಧಿಕ ಭಕ್ತರು ಕೊಟ್ಟೂರೇಶ್ವರನಿಗೆ (Guru Kottureshwara) ಆಗಮಿಸಿ ಪವಾಡ ಪುರುಷ ಗುರು ಕೊಟ್ಟೂರೇಶ್ವರನ ಕೃಪೆಗೆ ಪಾತ್ರರಾದರು.


    ಗುರು ಕೊಟ್ಟೂರೇಶ್ವರ ರಥೋತ್ಸವಕ್ಕೆ ರಾಜ್ಯ ವಿವಿಧ ಜಿಲ್ಲೆಗಳು ಸೇರಿದಂತೆ ನೆರೆಯ ರಾಜ್ಯಗಳಿಂದಲೂ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ರು.  ತಾವು ಬೇಡಿಕೊಳ್ಳುವ ಇಷ್ಟಾರ್ಥಗಳು ಶ್ರೀಗುರು ಕೊಟ್ಟೂರೇಶ್ವರ ಈಡೇರಿಸುತ್ತಾನೆ ಅನ್ನೋ ನಂಬಿಕೆ ಪ್ರತಿಯೊಬ್ಬ ಭಕ್ತರದ್ದಾಗಿತ್ತು.


    ಇದನ್ನೂ ಓದಿ: Vijayanagara: ವಿಜಯನಗರಕ್ಕೆ ಉದ್ದ ಕತ್ತಿನ ವಿಶೇಷ ಅತಿಥಿಯ ಆಗಮನ!


    ಸ್ವಾಮಿಯ ಮೂರ್ತಿಗೆ ಬೆಳ್ಳಿ ಪಲ್ಲಕ್ಕಿ ಮೆರವಣಿಗೆ
    ಪವಾಡಗಳ ಮೂಲಕ ಎಲ್ಲಾ ಭಕ್ತರ ಆರಾಧ್ಯ ದೈವರಾಗಿರುವ ಗುರು ಕೊಟ್ಟೂರೇಶ್ವರ ರಥೋತ್ಸವಕ್ಕಿಂತ ಮುಂಚೆಯೇ ಸ್ವಾಮಿಯ ಮೂರ್ತಿಯನ್ನ ಬೆಳ್ಳಿ ಪಲ್ಲಕ್ಕಿಯಲ್ಲಿ ಕೂಡಿಸಿ ಮೆರವಣಿಗೆ ಮಾಡಲಾಯಿತು. ದಿನವಿಡಿ ಉಪವಾಸ ಇರುವ ದಲಿತ ಮಹಿಳೆ ಪಲ್ಲಕ್ಕಿಯಲ್ಲಿರುವ ಸ್ವಾಮಿಗೆ ಕಳಸದಾರತಿ, ಧೂಪದಾರತಿ ಮಾಡಿದರು.


    ಇದನ್ನೂ ಓದಿ: Vijayanagara: ಉತ್ತರ ಕರ್ನಾಟಕದಲ್ಲಿ ಅಡಿಕೆ ತೋಟದ ನಡುವೆ ಕಾಫಿ ಕೃಷಿ!




    ಕೊಟ್ಟೂರು ದೊರೆಯೇ, ನಿನಗಾರು ಸರಿಯೇ, ಸರಿ ಸರಿ ಅಂದವರ ಹಲ್ಲುಮುರಿವೆ ಬಹುಪರಾಕ್!
    ದಲಿತ ಮಹಿಳೆ ಆರತಿ ಮಾಡಿದ ಬಳಿಕ ಪಲ್ಲಕ್ಕಿ ಉತ್ಸವ ತೇರು ಬಜಾರ್ ಮೂಲಕ ಸಾಗಿ ರಥೋತ್ಸವ ಜರುಗುವ ಸ್ಥಳಕ್ಕೆ ಆಗಮಿಸಿತು. ರಥೋತ್ಸವಕ್ಕೆ ಚಾಲನೆ ಸಿಗುತ್ತಿದ್ದಂತಿಯೇ ಭಕ್ತರು ಕೊಟ್ಟೂರು ದೊರೆಯೇ, ನಿನಗಾರು ಸರಿಯೇ, ಸರಿ ಸರಿ ಅಂದವರ ಹಲ್ಲು ಮುರಿವೆ ಬಹುಪರಾಕ್ ಅಂತ ಘೋಷಣೆ ಮುಗಿಲು ಮುಟ್ಟುವಂತೆ ಕೂಗಿ,ಬಾಳೆ,ಹಣ್ಣುಗಳನ್ನ ರಥಕ್ಕೆ ಎಸೆದು ಭಕ್ತಿ ಸಮರ್ಪಿಸಿದರು.


    ವರದಿ: ಬಸವರಾಜ ಹಾರನಹಳ್ಳಿ, ನ್ಯೂಸ್ 18,ಬಳ್ಳಾರಿ.

    Published by:ಗುರುಗಣೇಶ ಡಬ್ಗುಳಿ
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು