Belagavi News: ಸರಕಾರಿ ಹಾಸ್ಟೆಲ್ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ; ಮುಂದಿನ ವಾರವೇ ಕೊನೆ ದಿನ

ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಪಡೆಯುತ್ತಿರುವ ಬಾಲಕ ಹಾಗೂ ಬಾಲಕಿಯರ ಹಾಸ್ಟೆಲ್ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ತಮ್ಮ ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

  • Share this:
    ಬೆಳಗಾವಿ: ಮೆಟ್ರಿಕ್ ನಂತರದ ಅಂದರೆ ಹತ್ತನೇ ತರಗತಿಯಲ್ಲಿ ಕಲಿಯುತ್ತಿರುವ ಬಾಲಕ ಹಾಗೂ ಬಾಲಕಿಯರಿಗೆ ಸರ್ಕಾರಿ ವಿದ್ಯಾರ್ಥಿ ನಿಲಯ (Hostel Facility) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಕೂಡಲೇ ತಮ್ಮ ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಅರ್ಜಿ ಆಹ್ವಾನವು ಬೆಳಗಾವಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ (ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳು) ವಿದ್ಯಾರ್ಥಿ ನಿಲಯಗಳಿಗೆ ಅನ್ವಯಿಸಲಿದೆ. ಹಾಗಾಗಿ ವಿದ್ಯಾರ್ಥಿಗಳು ತಮ್ಮ ಸವಿವರಗೊಳೊಂದಿಗೆ ಹೆಚ್ಚು ತಡಮಾಡದೇ ಕೂಡಲೇ ಅರ್ಜಿ ಸಲ್ಲಿಸಿದ್ದಲ್ಲಿ ಹಾಸ್ಟೆಲ್ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.

    ಯಾರೆಲ್ಲ ಅರ್ಹರು?

    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರವರ್ಗ -1 , 2 ಎ , 2 ಬಿ , 3 ಎ , 3 ಬಿ , ಪ.ಜಾ / ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದವರಾಗಿರಬೇಕು. ಮತ್ತು 2022-23ನೇ ಸಾಲಿನಲ್ಲಿ ವ್ಯಾಸಾಂಗ ಮಾಡುತ್ತಿರಬೇಕು.

    ಅರ್ಜಿ ಸಲ್ಲಿಕೆ ಹೇಗೆ?

    ಪ್ರವೇಶ ಬಯಸುವ ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಇಲಾಖೆಯ ವೆಬ್ ಸೈಟ್ www.bcwd.karnataka.gov.in ಮೂಲಕ ಆನ್ ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

    ಅರ್ಜಿ  ಸಲ್ಲಿಸಲು ಇರಬೇಕಾದ ಅರ್ಹತೆಗಳು

    1. 2022-23 ನೇ ಸಾಲಿನ ವಿದ್ಯಾಭ್ಯಾಸ ಮಾಡುತ್ತಿರಬೇಕು.

    2. ವಿದ್ಯಾರ್ಥಿ ಪೋಷಕರ ಆದಾಯ ಪ್ರವರ್ಗ -1 , ಎಸ್.ಸಿ ಮತ್ತು ಎಸ್.ಟಿ ₹1.00 ಲಕ್ಷ ಹಾಗೂ

    ಪ್ರವರ್ಗ -2 ಎ , 2 ಬಿ , 3 ಎ , 3 ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ . 44,500 ರೂ.ಗಳಾಗಿರಬೇಕು.

    ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು

    1. ಎಸ್‌.ಎಸ್.ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ್ದಲ್ಲಿ, ಅದರ ಸಂಖ್ಯೆ ಅವಶ್ಯಕವಾಗಿಬೇಕು.

    2. ವಿದ್ಯಾರ್ಥಿಯ ಸ್ವಂತ ಸ್ಥಳದಿಂದ ಕಾಲೇಜಿಗಿರುವ ದೂರದ ಪ್ರಮಾಣ ಪತ್ರ (ಸ್ಥಳೀಯ ಇಲಾಖೆಗಳಿಂದ ಪಡೆಯಬಹುದು).

    3. ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಶಾಲಾ ದಾಖಲಾತಿ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆ ಪತ್ರಗಳೊಂದಿಗೆ ಅರ್ಜಿ ಸಲ್ಲಿಸಬೇಕು.

    ಅರ್ಜಿ ಸಲ್ಲಿಕೆಗೆ ಕೊನೆ ದಿನ

    ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನವಾಗಿರುತ್ತದೆ.

    ಹೆಚ್ಚಿನ ಮಾಹಿತಿಗಾಗಿ

    ಅರ್ಜಿ ಸಲ್ಲಿಕೆಯಲ್ಲಿ ಯಾವುದೇ ರೀತಿಯ ತೊಂದರೆಗಳಾಗಿದ್ದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇಮೇಲ್ bcwd.hostels@karnataka.gov.in ಮುಖಾಂತರ ಸಂಪರ್ಕಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
    Published by:Soumya KN
    First published: