ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ (Bengaluru News) ಪ್ರಮುಖ ಪ್ರದೇಶದಲ್ಲಿ ಮಾಂಸ ಮಾರಾಟ ನಿಷೇಧಿಸಿ (Meat Sale Ban In Bengaluru) ಆದೇಶಿಸಲಾಗಿದೆ. ಮುಂದಿನ 20 ದಿನಗಳ ಕಾಲ ಬೆಂಗಳೂರಿನಲ್ಲಿ ಈ ಭಾಗದಲ್ಲಿ ಮಾಂಸ ಮಾರಾಟ (Meat Sale Ban) ಮಾಡುವಂತಿಲ್ಲ. ಬಿಬಿಎಂಪಿ ಯಲಹಂಕ ಝೋನ್ನಲ್ಲಿ (Meat Sale Ban In Yelahanka) ಮಾಂಸ ಮಾರಾಟ ಬ್ಯಾನ್ ಮಾಡಲಾಗಿದೆ. ಯಲಹಂಕ ವಲಯದ ಸುತ್ತಲೂ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶ ಪ್ರಕಟಿಸಿದೆ.
ಈ ವಲಯದಲ್ಲಿ ಜನವರಿ 30 ರಿಂದ ಫೆಬ್ರವರಿ 20 ರವರೆಗೆ ಮಾಂಸ ಮಾರಾಟ ನಿಷೇಧಿಸಲಾಗಿದೆ. ಫೆಬ್ರವರಿ 13 ರಿಂದ 17 ರವರೆಗೆ ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಏರ್ ಶೋ ನಡೆಯುತ್ತಿರುವ ಕಾರಣ ಮಾಂಸ ಮಾರಾಟ ನಿಷೇಧಿಸಲಾಗಿದೆ.
ಹೋಟೆಲ್, ಡಾಬಾಗಳಲ್ಲೂ ಮಾಂಸಾಹಾರ ಇರಲ್ಲ
ಈ 20 ದಿನಗಳ ಅವಧಿಯಲ್ಲಿ ಯಲಹಂಕ ವಲಯದಲ್ಲಿ ಎಲ್ಲಾ ತರಹದ ಮಾಂಸ ಮಾರಾಟ ನಿಷೇಧಿಸಲಾಗಿದೆ. ಜೊತೆಗೆ, ಹೋಟೆಲ್ ಹಾಗೂ ಡಾಬಾಗಳಲ್ಲಿ ಮಾಂಸಾಹಾರ ತಯಾರಿಕೆ ಮತ್ತು ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಆದೇಶ ಮಾಡಿದೆ.
ಇದನ್ನೂ ಓದಿ: Bengaluru To Mysuru Expressway: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕುರಿತು ಪ್ರಯಾಣಿಕರಿಗೆ ಖುಷಿ ಸುದ್ದಿ
ಇದನ್ನೂ ಓದಿ: Bengaluru Namma Metro: ಬೆಂಗಳೂರು ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತ
ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ
ಈ ನಿಯಮವನ್ನು ಉಲ್ಲಂಘಿಸಿದರೆ ಬಿಬಿಎಂಪಿ ಕಾಯ್ದೆ 2020 ಮತ್ತು ಭಾರತೀಯ ಏರ್‌ಕ್ರಾಪ್ಟ್ ರೂಲ್ಸ್ 1937 ರ ರೂಲ್ 91 ಅಡಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಯಲಹಂಕ ವಲಯ ಜಂಟಿ ಆಯುಕ್ತರಾದ ಪೂರ್ಣಿಮಾ ಅವರು ಆದೇಶಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ