ಬೆಂಗಳೂರು: ಕುತೂಹಲ ಹೆಚ್ಚಿಸಿರುವ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ (Bengaluru Mysuru Expressway) ಲೋಕಾರ್ಪಣೆಗೆ ದಿನಗಣನೆ ಆರಂಭವಾಗಿದೆ. ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಟೋಲ್ (Bengaluru Mysuru Expressway Toll) ಕುರಿತು ಸಹ ಈಗಾಗಲೇ ಚರ್ಚೆಗಳು ನಡೆದಿವೆ. ದೇಶದ ಗಮನವನ್ನೇ ಸೆಳೆದ ಈ ಹೊಸ ಹೆದ್ದಾರಿಯಲ್ಲಿ ಈಗಾಗಲೇ ಆಕರ್ಷಣೆಯ ಕೇಂದ್ರಬಿಂದುವೂ ಆಗಿದೆ. ಸದ್ಯ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಎಷ್ಟು ಲೇನ್ಗಳಿಗೆ ಎಂಬ ಕುರಿತು ಚರ್ಚೆಗಳು ನಡೆದಿದ್ದವು. ಇದೀಗ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು (Nitin Gadkari) ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ರಸ್ತೆಗಳ ಕುರಿತು ಸ್ಪಷ್ಟ ಚಿತ್ರಣ ನೀಡಿದ್ದಾರೆ.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ 6 ಮುಖ್ಯ ಪಥಗಳು ಹಾಗೂ ಎರಡು ಸರ್ವೀಸ್ ರಸ್ತೆಗಳು ಇವೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
The 118 Km long #Bengaluru_Mysuru_Expressway is featuring 6 main carriageway lanes and 2 service road lanes on either side, developed at a cost of ₹8478 Cr as part of the Bharatmala Pariyojana.#PragatiKaHighway #GatiShakti pic.twitter.com/WqKlyzmgdP
— Nitin Gadkari (@nitin_gadkari) March 7, 2023
ಮಾರ್ಚ್ 12ರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಾಹನ ನಿರ್ಬಂಧ
ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇ ಲೋಕಾರ್ಪಣೆಯ ನಡೆಯಲಿರುವ ಮಾರ್ಚ್ 12ರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಈ ಮಾರ್ಗದಲ್ಲಿ ನಿರ್ಬಂಧಿಸಲಾಗಿದೆ.
ವಾಹನ ಪ್ರಯಾಣಿಕರೇ ಗಮನಿಸಿ
ಅತ್ಯಂತ ನಿರೀಕ್ಷೆ ಹುಟ್ಟಿಸಿರುವ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇ (Bengaluru Mysuru Expressway) ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ. ಮಾರ್ಚ್ 12 ರಂದು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ (PM Narendra Modi) ಈ ದಶಪಥವನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮೈಸೂರು (Bengaluru To Mysuru Road)ಮಾರ್ಗದಲ್ಲಿಯೇ ಈ ಕಾರ್ಯಕ್ರಮ ಜರುಗಲಿರುವ ಕಾರಣ ಬೆಳಗ್ಗೆಯಿಂದ ಸಂಜೆಯವರೆಗೆ ವಾಹನ ಸಂಚಾರ ಮಾರ್ಗಗಳನ್ನು ಬದಲಾವಣೆ ಮಾಡಿ ಆದೇಶಿಸಲಾಗಿದೆ.
ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇ ಲೋಕಾರ್ಪಣೆಯ ನಡೆಯಲಿರುವ ಮಾರ್ಚ್ 12ರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಈ ಮಾರ್ಗದಲ್ಲಿ ನಿರ್ಬಂಧಿಸಲಾಗಿದೆ. ಈ ಕುರಿತು ಮಂಡ್ಯದ ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅಧಿಕೃತ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Bengaluru Airport: ವಿಶ್ವದಲ್ಲೇ ನಂಬರ್ 1 ಸ್ಥಾನಕ್ಕೆ ಲಗ್ಗೆ, ಇದು ಕನ್ನಡಿಗರಿಗೂ ಹೆಮ್ಮೆಯ ವಿಷ್ಯ ಕಣ್ರೀ!
ಈ ಮಾಹಿತಿಯನ್ನು ಮರೆಯಲೇಬೇಡಿ
ಮೈಸೂರು ನಗರದಿಂದ ಬೆಂಗಳೂರಿಗೆ ಹೋಗುವ ಮುನ್ನ ಈ ಮಾಹಿತಿಯನ್ನು ಮರೆಯಬೇಡಿ. ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳು ಮೈಸೂರು -ಬನ್ನೂರು-ಕಿರುಗಾವಲು- ಮಳವಳ್ಳಿ-ಹಲಗೂರು-ಕನಕಪುರ- ಬೆಂಗಳೂರು ಮುಖಾಂತರ ಸಂಚರಿಸಬೇಕಿದೆ.
ಇದನ್ನೂ ಓದಿ: Bengaluru Traffic ಪರಿಹಾರಕ್ಕೆ ಈ ಯೋಜನೆಯೇ ರಾಮಬಾಣ
ಮೈಸೂರು ನಗರದಿಂದ ತುಮಕೂರಿಗೆ ಪ್ರಯಾಣಿಸುವವರು ಗಮನಿಸಿ
ಮೈಸೂರು ನಗರದಿಂದ ತುಮಕೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲ ರೀತಿಯ ವಾಹನಗಳ ಪ್ರಯಾಣಿಕರು ಮೈಸೂರು-ಶ್ರೀರಂಗಪಟ್ಟಣ- ಪಾಂಡವಪುರ-ನಾಗಮಂಗಲ-ಬೆಳ್ಳೂರು ಕ್ರಾಸ್ – ತುಮಕೂರಿನ ಮೂಲಕ ಪ್ರಯಾಣಿಬಹುದಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ