• ಹೋಂ
  • »
  • ನ್ಯೂಸ್
  • »
  • ಬೆಂಗಳೂರು ನಗರ
  • »
  • Bengaluru Mysuru Expressway Toll: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ವೇ ಟೋಲ್ ಶುಲ್ಕದ ಬಗ್ಗೆ ಸಂಸದ ಪ್ರತಾಪ್ ಸಿಂಹ ಮಹತ್ವದ ಮಾಹಿತಿ

Bengaluru Mysuru Expressway Toll: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ವೇ ಟೋಲ್ ಶುಲ್ಕದ ಬಗ್ಗೆ ಸಂಸದ ಪ್ರತಾಪ್ ಸಿಂಹ ಮಹತ್ವದ ಮಾಹಿತಿ

ಬೆಂಗಳೂರು-ಮೈಸೂರು ಹೊಸ ಹೆದ್ದಾರಿ

ಬೆಂಗಳೂರು-ಮೈಸೂರು ಹೊಸ ಹೆದ್ದಾರಿ

ಯಾವುದೇ ಹೆದ್ದಾರಿಗೂ ವ್ಯಕ್ತಿಗಳ ಹೆಸರನ್ನು ಇಡುವ ಸಂಪ್ರದಾಯವಿಲ್ಲ. ಕಾವೇರಿ ನದಿಯನ್ನು ಎಲ್ಲರೂ ತಾಯಿಯೆಂದೇ ಭಾವಿಸುತ್ತಾರೆ. ಯಾರೂ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ವೇ ಹೆಸರಿನ ಬಗ್ಗೆ ವಿವಾದ ಮಾಡಬೇಡಿ ಎಂದು ಅವರು ಮನವಿ ಮಾಡಿದರು.

  • Share this:

    ಬೆಂಗಳೂರು: ಕರ್ನಾಟಕದ ಮೊದಲ ಎಕ್ಸ್​ಪ್ರೆಸ್​ ವೇ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇ (Bengaluru Mysuru Expressway) ಬಗ್ಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಬಹು ಜನರ ಚರ್ಚೆಯ ವಿಷಯವಾಗಿದ್ದ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇ ಟೋಲ್ (Bengaluru Mysuru Expressway Toll) ಬಗ್ಗೆ ಸಂಸದ ಪ್ರತಾಪ್ ಸಿಂಹ (MP Pratap Simha) ಮಾಹಿತಿ ನೀಡಿದ್ದಾರೆ. 


    ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ವೇಯಲ್ಲಿ 250 ರೂ. ಟೋಲ್ ಶುಲ್ಕ ಇರಲಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಮಾರ್ಚ್ ತಿಂಗಳ 2ನೇ ಅಥವಾ 3ನೇ ವಾರದಲ್ಲಿ ಈ ಹೆದ್ದಾರಿ ಸಾರ್ವಜನಿಕರ ಬಳಕೆಗೆ ಅಧಿಕೃತವಾಗಿ ಲೋಕಾರ್ಪಣೆಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.


    ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ವೇ ಹೆಸರೇನು?
    ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ವೇ ಹೆಸರಿನ ಕುರಿತೂ ಸಂಸದ ಪ್ರತಾಪ್ ಸಿಂಹ ಮಾಹಿತಿ ನೀಡಿದರು. ಯಾವುದೇ ಹೆದ್ದಾರಿಗೂ ವ್ಯಕ್ತಿಗಳ ಹೆಸರನ್ನು ಇಡುವ ಸಂಪ್ರದಾಯವಿಲ್ಲ. ಕಾವೇರಿ ನದಿಯನ್ನು ಎಲ್ಲರೂ ತಾಯಿಯೆಂದೇ ಭಾವಿಸುತ್ತಾರೆ. ಯಾರೂ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ವೇ ಹೆಸರಿನ ಬಗ್ಗೆ ವಿವಾದ ಮಾಡಬೇಡಿ ಎಂದು ಅವರು ಮನವಿ ಮಾಡಿದರು.


     ಕುಶಾಲನಗರ-ಮೈಸೂರು ಹೆದ್ದಾರಿಗೆ ಶಂಕುಸ್ಥಾಪನೆ
    ಇದೇ ವೇಳೆ ಕುಶಾಲನಗರ-ಮೈಸೂರು ಹೆದ್ದಾರಿಗೆ ಶಂಕುಸ್ಥಾಪನೆಯನ್ನೂ ಮಾಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.


    ಈಗಾಗಲೇ 2 ಟೋಲ್ ಬೂತ್ ನಿರ್ಮಾಣ
    ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇಯಲ್ಲಿ ಈಗಾಗಲೇ ಬಿಡದಿ ಮತ್ತು ಶ್ರೀರಂಗಪಟ್ಟಣದ ಬಳಿ ಟೋಲ್ ಬೂತ್​ಗಳನ್ನು ನಿರ್ಮಿಸಲಾಗಿದೆ. ಆದರೆ ಸರ್ವಿಸ್ ರಸ್ತೆ ಆರಂಭವಾಗದೇ ಟೋಲ್ ಸಂಗ್ರಹಕ್ಕೆ ಅನುವು ಮಾಡಿಕೊಡಬಾರದು ಎಂಬ ಆದೇಶವಿದೆ. ಹೀಗಾಗಿ ಇನ್ನೂ ಈ ಟೋಲ್​ ಬೂತ್ ಆರಂಭಗೊಂಡಿಲ್ಲ ಎಂದು ಹೇಳಲಾಗಿದೆ.




    ಈ ಎಕ್ಸ್‌ಪ್ರೆಸ್‌ವೇ ಕಾಮಗಾರಿಯು ಎರಡು ಹಂತಗಳಲ್ಲಿ ನಡೆದಿತ್ತು. ಬೆಂಗಳೂರಿನಿಂದ ಮದ್ದೂರು ತಾಲೂಕಿನ ನಿಡಘಟ್ಟಕ್ಕೆ ಸುಮಾರು 56 ಕಿ.ಮೀ ಕಾಮಗಾರಿ ಮೊದಲ ಹಂತದಲ್ಲಿ ನಡೆದರೆ, 61 ಕಿ. ಮೀ ಉದ್ದದ ಎರಡನೇ ಪ್ಯಾಕೇಜ್, ನಿಡಘಟ್ಟದಿಂದ ಮೈಸೂರಿಗೆ ಸಂಪರ್ಕಿಸಿದೆ.


    ಮಂಡ್ಯ ಬೈಪಾಸ್ ಸಾರ್ವಜನಿಕರ ಸಂಚಾರಕ್ಕೆ ಮುಕ್ತ
    ಅತ್ಯಂತ ನಿರೀಕ್ಷೆ ಹುಟ್ಟಿಸಿದ್ದ ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಮಂಡ್ಯ ಬೈಪಾಸ್ (Mandya Bypass) ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಿದೆ. ಈ ಕುರಿತು ಸಂಸದ ಪ್ರತಾಪ್ ಸಿಂಹ (MP Pratap Simha) ಇತ್ತೀಚಿಗಷ್ಟೇ ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ.


    ಇದನ್ನೂ ಓದಿ: ಶಿರಸಿಯಲ್ಲಿ IT ಕಂಪನಿ ಸ್ಥಾಪನೆ! ಮಲೆನಾಡು, ಕರಾವಳಿಯ ಪ್ರತಿಭೆಗಳಿಗೆ ಹೊಸ ಅವಕಾಶ


    ಗ್ರೀನ್‌ಫೀಲ್ಡ್ ಕಾರಿಡಾರ್​ನ ಭಾಗ ಈ ಹೆದ್ದಾರಿ
    ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ನೀಡಿರುವ ಮಾಹಿತಿಯ ಪ್ರಕಾರ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 275 ಗ್ರೀನ್‌ಫೀಲ್ಡ್ ಕಾರಿಡಾರ್ ಯೋಜನೆಯ ಭಾಗವಾಗಿದೆ. ಈ 10 ಪಥದ ಹೆದ್ದಾರಿಯ ಕುರಿತು ಈಗಾಗಲೇ ಹೆಚ್ಚಿನ ನಿರೀಕ್ಷೆ ವ್ಯಕ್ತವಾಗಿದೆ.


    ಇದನ್ನೂ ಓದಿ: Aero India: BMTC ವಿಶೇಷ ಬಸ್ ವ್ಯವಸ್ಥೆ, ಎಲ್ಲಿಂದ ಎಲ್ಲಿಗೆ ವಿವರ ಇಲ್ಲಿದೆ


    ಬೈಕ್-ಆಟೋಗಳಿಗಿಲ್ಲ ಅವಕಾಶ
    ಬೆಂಗಳೂರು-ಮೈಸೂರು ನಡುವಿನ ಎಕ್ಸ್ಪ್ರೆಸ್ ಕಾರಿಡಾರ್ ಸದ್ಯದಲ್ಲೇ ಸಾರ್ವಜನಿಕರ ಓಡಾಟಕ್ಕೆ ಲಭ್ಯವಾಗುವ ಸಾಧ್ಯತೆ ದಟ್ಟವಾಗಿದೆ. ಆದರೆ ಈ ಹೆದ್ದಾರಿಯಲ್ಲಿ ಬೈಕ್​ ಮತ್ತು ಆಟೋಗಳ ಓಡಾಟಕ್ಕೆ ಅವಕಾಶವಿಲ್ಲ ಎಂದು ಈಗಾಗಲೇ ಮಾಹಿತಿ ನೀಡಲಾಗಿದೆ. ಬೆಂಗಳೂರು-ಮೈಸೂರು ನಡುವಿನ ಎಕ್ಸ್ಪ್ರೆಸ್ ಕಾರಿಡಾರ್ ಕಾಮಗಾರಿ ವೇಗದಿಂದ ನಡೆಯುತ್ತಿದ್ದು 2023 ರ ಮಾರ್ಚ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

    Published by:ಗುರುಗಣೇಶ ಡಬ್ಗುಳಿ
    First published: