Bengaluru Mysuru Expressway Toll: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ವೇ ಟೋಲ್ ಸಂಗ್ರಹದ ಕುರಿತು ಮಹತ್ವದ ನಿರ್ಧಾರ ಪ್ರಕಟ

ಹೆದ್ದಾರಿ (ಸಾಂದರ್ಭಿಕ ಚಿತ್ರ

ಹೆದ್ದಾರಿ (ಸಾಂದರ್ಭಿಕ ಚಿತ್ರ

Bangalore Latest News: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಬೆಂಗಳೂರು-ನಿಡಘಟ್ಟ ಮಾರ್ಗದಲ್ಲಿ ಫೆಬ್ರವರಿ 15 ರೊಳಗೆ ಟೋಲ್ ವಿಧಿಸಲು ಪ್ರಾರಂಭಿಸಲಿದೆ.

  • News18 Kannada
  • 5-MIN READ
  • Last Updated :
  • Bangalore [Bangalore], India
  • Share this:

    ಬೆಂಗಳೂರು: ಅತ್ಯಂತ ನಿರೀಕ್ಷೆ ಹುಟ್ಟಿಸಿರುವ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ (Bengaluru Mysuru Expressway) ಕುರಿತು ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಈ ಮಾರ್ಗದ ಪ್ರಯಾಣಿಕರಂತೂ ಈ ಸುದ್ದಿಯನ್ನು ಮಿಸ್ ಮಾಡ್ಲೇಬಾರದು!  118 ಕಿಲೋ ಮೀಟರ್​ನ 10 ಪಥಗಳ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇಯಲ್ಲಿ ಟೋಲ್ ಸಂಗ್ರಹದ (Bengaluru Mysuru Expressway Toll) ಮೊದಲ ಹಂತವು ಫೆಬ್ರವರಿ 15 ರೊಳಗೆ ಆರಂಭವಾಗಲಿದೆ. ಈ ಟೋಲ್ ಬೆಂಗಳೂರು-ನಿಡಘಟ್ಟ ಮಾರ್ಗದಲ್ಲಿ ಪ್ರಾರಂಭವಾಗಲಿದೆ.


    ಈ ಎಕ್ಸ್‌ಪ್ರೆಸ್‌ವೇ ಕಾಮಗಾರಿಯು ಎರಡು ಹಂತಗಳಲ್ಲಿ ನಡೆದಿತ್ತು. ಬೆಂಗಳೂರಿನಿಂದ ಮದ್ದೂರು ತಾಲೂಕಿನ ನಿಡಘಟ್ಟಕ್ಕೆ ಸುಮಾರು 56 ಕಿ.ಮೀ ಕಾಮಗಾರಿ ಮೊದಲ ಹಂತದಲ್ಲಿ ನಡೆದರೆ, 61 ಕಿ. ಮೀ ಉದ್ದದ ಎರಡನೇ ಪ್ಯಾಕೇಜ್, ನಿಡಘಟ್ಟದಿಂದ ಮೈಸೂರಿಗೆ ಸಂಪರ್ಕಿಸಿದೆ.


    ಸಂಸದ ಪ್ರತಾಪ್ ಸಿಂಹ ಹೇಳಿದ್ದೇನು?
    ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಬೆಂಗಳೂರು-ನಿಡಘಟ್ಟ ಮಾರ್ಗದಲ್ಲಿ ಫೆಬ್ರವರಿ 15 ರೊಳಗೆ ಟೋಲ್ ವಿಧಿಸಲು ಪ್ರಾರಂಭಿಸಲಿದೆ. ಅದೇ ರೀತಿ ನಿಡಘಟ್ಟ ಮತ್ತು ಮೈಸೂರು ನಡುವಿನ ಟೋಲ್‌ನ ಹಂತ -2 ನ್ನು ಮುಂದಿನ ದಿನಗಳಲ್ಲಿ ಜಾರಿಗೆ ತರಲಾಗುವುದು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.


    ಮಂಡ್ಯ ಬೈಪಾಸ್ ಸಾರ್ವಜನಿಕರ ಸಂಚಾರಕ್ಕೆ ಮುಕ್ತ
    ಅತ್ಯಂತ ನಿರೀಕ್ಷೆ ಹುಟ್ಟಿಸಿದ್ದ ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಮಂಡ್ಯ ಬೈಪಾಸ್ (Mandya Bypass) ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಿದೆ. ಈ ಕುರಿತು ಸಂಸದ ಪ್ರತಾಪ್ ಸಿಂಹ (MP Pratap Simha) ಇತ್ತೀಚಿಗಷ್ಟೇ ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ.




    ಈ ಕುರಿತು ಟ್ವೀಟ್ ಮಾಡಿರುವ ಸಂಸದ ಪ್ರತಾಪ್ ಸಿಂಹ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಮಂಡ್ಯ ಬೈಪಾಸ್ ಸಂಚಾರಕ್ಕೆ ಮುಕ್ತವಾಗಿದೆ. ಖುಷಿಯಿಂದ ಪ್ರಯಾಣಿಸಿ, ಆದರೆ ವೇಗವಾಗಿ ಚಲಿಸದೇ ಸುರಕ್ಷಿತವಾಗಿ ಚಲಿಸಿ ಎಂದು ಮನವಿ ಮಾಡಿದ್ದಾರೆ.


    ಪ್ರಧಾನಿ ನರೇಂದ್ರ ಮೋದಿಯಿಂದ ಲೋಕಾರ್ಪಣೆ ಸಾಧ್ಯತೆ
    ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕುರಿತು ಪ್ರಧಾನಿ ನರೇಂದ್ರ ಮೋದಿಯವರೇ ಘೋಷಣೆ ಮಾಡಿದ್ದರು. ಹೀಗಾಗಿ ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಈ 10 ಪಥದ ಹೆದ್ದಾರಿಯನ್ನು ಉದ್ಘಾಟಿಸಲಿದ್ದಾರೆ ಎಂದು ಹೇಳಲಾಗಿದೆ.


    ಗ್ರೀನ್‌ಫೀಲ್ಡ್ ಕಾರಿಡಾರ್​ನ ಭಾಗ ಈ ಹೆದ್ದಾರಿ
    ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ನೀಡಿರುವ ಮಾಹಿತಿಯ ಪ್ರಕಾರ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 275 ಗ್ರೀನ್‌ಫೀಲ್ಡ್ ಕಾರಿಡಾರ್ ಯೋಜನೆಯ ಭಾಗವಾಗಿದೆ. ಈ 10 ಪಥದ ಹೆದ್ದಾರಿಯ ಕುರಿತು ಈಗಾಗಲೇ ಹೆಚ್ಚಿನ ನಿರೀಕ್ಷೆ ವ್ಯಕ್ತವಾಗಿದೆ.


    ಇದನ್ನೂ ಓದಿ: Bengaluru To Hubballi: ಬೆಂಗಳೂರು-ಉತ್ತರ ಕರ್ನಾಟಕ ರೈಲು ಪ್ರಯಾಣಿಕರೇ ಗಮನಿಸಿ


    ಬೈಕ್-ಆಟೋಗಳಿಗಿಲ್ಲ ಅವಕಾಶ
    ಬೆಂಗಳೂರು-ಮೈಸೂರು ನಡುವಿನ ಎಕ್ಸ್ಪ್ರೆಸ್ ಕಾರಿಡಾರ್ ಸದ್ಯದಲ್ಲೇ ಸಾರ್ವಜನಿಕರ ಓಡಾಟಕ್ಕೆ ಲಭ್ಯವಾಗುವ ಸಾಧ್ಯತೆ ದಟ್ಟವಾಗಿದೆ. ಆದರೆ ಈ ಹೆದ್ದಾರಿಯಲ್ಲಿ ಬೈಕ್​ ಮತ್ತು ಆಟೋಗಳ ಓಡಾಟಕ್ಕೆ ಅವಕಾಶವಿಲ್ಲ ಎಂದು ಈಗಾಗಲೇ ಮಾಹಿತಿ ನೀಡಲಾಗಿದೆ. ಬೆಂಗಳೂರು-ಮೈಸೂರು ನಡುವಿನ ಎಕ್ಸ್ಪ್ರೆಸ್ ಕಾರಿಡಾರ್ ಕಾಮಗಾರಿ ವೇಗದಿಂದ ನಡೆಯುತ್ತಿದ್ದು 2023 ರ ಮಾರ್ಚ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.


    ಹೆದ್ದಾರಿಯಲ್ಲಿರಲಿದೆ ಹಲವು ಸೌಲಭ್ಯ
    ಈ ಹೆದ್ದಾರಿಯು ಒಟ್ಟು 44 ಸಣ್ಣ ಸೇತುವೆಗಳನ್ನು ಹೊಂದಿದ್ದು 4 ರೈಲು ಮೇಲ್ಸೇತುವೆಗಳನ್ನು ಹೊಂದಿರಲಿದೆ. ಈ ಹೆದ್ದಾರಿಯಲ್ಲಿ ಅಲ್ಲಲ್ಲಿ ಫುಡ್​ ಕೋರ್ಟ್​ಗಳು, ವಿಶ್ರಾಂತಿಗೆ ಕೊಠಡಿಗಳು ಸಹ ನಿರ್ಮಾಣವಾಗಲಿವೆ.


    ಇದನ್ನೂ ಓದಿ: Good News: ಬೆಂಗಳೂರಿನ ಪ್ರಯಾಣಿಕರಿಗೆ ಇನ್ನೊಂದು ಫ್ಲೈ ಓವರ್! ಈ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ


    ಅತೀ ಕಡಿಮೆ ಸಮಯದಲ್ಲಿ ಬೆಂಗಳೂರು-ಮೈಸೂರು ಸಂಚಾರ
    ಅಲ್ಲದೇ, ಈ ಹೆದ್ದಾರಿ ಓಡಾಟಕ್ಕೆ ಮುಕ್ತವಾದ ನಂತರ 75ರಿಂದ 80 ನಿಮಿಷಗಳಲ್ಲಿ ಬೆಂಗಳೂರು ಮೈಸೂರು ನಗರಗಳ ನಡುವೆ ಸಂಚರಿಸಬಹುದು ಎಂದು ಸಂಸದ ಪ್ರತಾಪ್ ಸಿಂಹ ಭರವಸೆ ನೀಡಿದ್ದಾರೆ.

    Published by:ಗುರುಗಣೇಶ ಡಬ್ಗುಳಿ
    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು