ಬೆಂಗಳೂರು: ಬಹು ನಿರೀಕ್ಷಿತ ಬೆಂಗಳೂರು-ಮೈಸೂರು 10 ಪಥಗಳ ಹೆದ್ದಾರಿ ಉದ್ಘಾಟನೆಗೆ ಸಜ್ಜಾಗಿದೆ. ಮುಂಬರುವ ಮಾರ್ಚ್ ತಿಂಗಳಿನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು (PM Narendra Modi) ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯನ್ನು (Bengaluru Mysuru Expressway) ಉದ್ಘಾಟಿಸುವ ಸಾಧ್ಯತೆಯಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಒಟ್ಟು 117 ಕಿಲೋ ಮೀಟರ್ ವ್ಯಾಪ್ತಿ ಹೊಂದಿದೆ. ಬೆಂಗಳೂರು (Bengaluru News) ಮತ್ತು ಮೈಸೂರು ನಗರಗಳ (Mysuru News) ನಡುವಿನ ಸಂಚಾರ ಅವಧಿಯನ್ನು ಈ ಹೆದ್ದಾರಿ ಸರಾಸರಿ ಮೂರು ಗಂಟೆಗಳಿಂದ ಕೇವಲ 90 ನಿಮಿಷಗಳಿಗೆ ಕಡಿಮೆ ಮಾಡಲಿದೆ ಎಂಬ ನಿರೀಕ್ಷೆಯಿದೆ. ಸದ್ಯ ಈ ಹೆದ್ದಾರಿಯಲ್ಲಿ ಸಂಚರಿಸುತ್ತಿರುವ ಕೆಎಸ್‌ಆರ್‌ಟಿಸಿ ಬಸ್‌ಗಳು ಸೇರಿದಂತೆ ವಾಹನಗಳು ಎರಡು ಗಂಟೆಗಳ ಕಾಲ ತೆಗೆದುಕೊಳ್ಳುತ್ತಿವೆ.
ಮಾರ್ಚ್ 2014 ರಲ್ಲಿ, ಕೇಂದ್ರ ಮೇಲ್ಮೈ ಸಾರಿಗೆ ಸಚಿವಾಲಯವು ದೇಶಾದ್ಯಂತ ಕೆಲವು ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಗಳಾಗಿ ಮೇಲ್ದರ್ಜೆಗೇರಿಸುವುದಾಗಿ ಘೋಷಿಸಿತ್ತು. ಈ ಪೈಕಿ ಬೆಂಗಳೂರು-ಮೈಸೂರು ಮಾರ್ಗವು ಸಹ ಒಂದಾಗಿತ್ತು. 2014ರಲ್ಲಿ ಯೋಜನೆಯ ಅಂದಾಜು ವೆಚ್ಚ 4,100 ಕೋಟಿ ರೂ.ಗಳಾಗಿದ್ದು, ಈಗ ಅದು ದುಪ್ಪಟ್ಟಾಗಿದೆ.
ಫೆಬ್ರವರಿ 15ರ ಒಳಗೆ ಟೋಲ್ ಬೂತ್ ಓಪನ್!
118 ಕಿಲೋ ಮೀಟರ್ನ 10 ಪಥಗಳ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಟೋಲ್ ಸಂಗ್ರಹದ (Bengaluru Mysuru Expressway Toll) ಮೊದಲ ಹಂತವು ಫೆಬ್ರವರಿ 15 ರೊಳಗೆ ಆರಂಭವಾಗಲಿದೆ. ಈ ಟೋಲ್ ಬೆಂಗಳೂರು-ನಿಡಘಟ್ಟ ಮಾರ್ಗದಲ್ಲಿ ಪ್ರಾರಂಭವಾಗಲಿದೆ.
ಈ ಎಕ್ಸ್‌ಪ್ರೆಸ್‌ವೇ ಕಾಮಗಾರಿಯು ಎರಡು ಹಂತಗಳಲ್ಲಿ ನಡೆದಿತ್ತು. ಬೆಂಗಳೂರಿನಿಂದ ಮದ್ದೂರು ತಾಲೂಕಿನ ನಿಡಘಟ್ಟಕ್ಕೆ ಸುಮಾರು 56 ಕಿ.ಮೀ ಕಾಮಗಾರಿ ಮೊದಲ ಹಂತದಲ್ಲಿ ನಡೆದರೆ, 61 ಕಿ. ಮೀ ಉದ್ದದ ಎರಡನೇ ಪ್ಯಾಕೇಜ್, ನಿಡಘಟ್ಟದಿಂದ ಮೈಸೂರಿಗೆ ಸಂಪರ್ಕಿಸಿದೆ.
ಸಂಸದ ಪ್ರತಾಪ್ ಸಿಂಹ ಹೇಳಿದ್ದೇನು?
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಬೆಂಗಳೂರು-ನಿಡಘಟ್ಟ ಮಾರ್ಗದಲ್ಲಿ ಫೆಬ್ರವರಿ 15 ರೊಳಗೆ ಟೋಲ್ ವಿಧಿಸಲು ಪ್ರಾರಂಭಿಸಲಿದೆ. ಅದೇ ರೀತಿ ನಿಡಘಟ್ಟ ಮತ್ತು ಮೈಸೂರು ನಡುವಿನ ಟೋಲ್‌ನ ಹಂತ -2 ನ್ನು ಮುಂದಿನ ದಿನಗಳಲ್ಲಿ ಜಾರಿಗೆ ತರಲಾಗುವುದು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಮಂಡ್ಯ ಬೈಪಾಸ್ ಸಾರ್ವಜನಿಕರ ಸಂಚಾರಕ್ಕೆ ಮುಕ್ತ
ಅತ್ಯಂತ ನಿರೀಕ್ಷೆ ಹುಟ್ಟಿಸಿದ್ದ ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಮಂಡ್ಯ ಬೈಪಾಸ್ (Mandya Bypass) ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಿದೆ. ಈ ಕುರಿತು ಸಂಸದ ಪ್ರತಾಪ್ ಸಿಂಹ (MP Pratap Simha) ಇತ್ತೀಚಿಗಷ್ಟೇ ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: Bengaluru Police: ತೆಂಗಿನ ಮರದ ಮೇಲೆ ಪ್ರಜ್ಞೆ ತಪ್ಪಿದ ವ್ಯಕ್ತಿ! ಬೆಂಗಳೂರು ಪೊಲೀಸರ ರೋಚಕ ಕಾರ್ಯಾಚರಣೆ
ಈ ಕುರಿತು ಟ್ವೀಟ್ ಮಾಡಿರುವ ಸಂಸದ ಪ್ರತಾಪ್ ಸಿಂಹ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಮಂಡ್ಯ ಬೈಪಾಸ್ ಸಂಚಾರಕ್ಕೆ ಮುಕ್ತವಾಗಿದೆ. ಖುಷಿಯಿಂದ ಪ್ರಯಾಣಿಸಿ, ಆದರೆ ವೇಗವಾಗಿ ಚಲಿಸದೇ ಸುರಕ್ಷಿತವಾಗಿ ಚಲಿಸಿ ಎಂದು ಮನವಿ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯಿಂದ ಲೋಕಾರ್ಪಣೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕುರಿತು ಪ್ರಧಾನಿ ನರೇಂದ್ರ ಮೋದಿಯವರೇ ಘೋಷಣೆ ಮಾಡಿದ್ದರು. ಹೀಗಾಗಿ ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಈ 10 ಪಥದ ಹೆದ್ದಾರಿಯನ್ನು ಮಾರ್ಚ್ ತಿಂಗಳಿನಲ್ಲಿ ಉದ್ಘಾಟಿಸಲಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: Fish Meals In Bengaluru: ಬೆಂಗಳೂರಲ್ಲಿ ಕಡಿಮೆ ಬೆಲೆಯಲ್ಲಿ ಭರ್ಜರಿ ಮೀನೂಟ! 100 ಕ್ಯಾಂಟೀನ್ ಆರಂಭ
ಗ್ರೀನ್‌ಫೀಲ್ಡ್ ಕಾರಿಡಾರ್ನ ಭಾಗ ಈ ಹೆದ್ದಾರಿ
ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ನೀಡಿರುವ ಮಾಹಿತಿಯ ಪ್ರಕಾರ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 275 ಗ್ರೀನ್‌ಫೀಲ್ಡ್ ಕಾರಿಡಾರ್ ಯೋಜನೆಯ ಭಾಗವಾಗಿದೆ. ಈ 10 ಪಥದ ಹೆದ್ದಾರಿಯ ಕುರಿತು ಈಗಾಗಲೇ ಹೆಚ್ಚಿನ ನಿರೀಕ್ಷೆ ವ್ಯಕ್ತವಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ