• Home
  • »
  • News
  • »
  • bengaluru-urban
  • »
  • Bengaluru: ಕೃಷಿಕರೇ ಗಮನಿಸಿ! ನಿಮ್ಮ ಸಮಸ್ಯೆಗಳಿಗೆ ಪರಿಹಾರ ಇಲ್ಲಿ ಸಿಗಲಿದೆ

Bengaluru: ಕೃಷಿಕರೇ ಗಮನಿಸಿ! ನಿಮ್ಮ ಸಮಸ್ಯೆಗಳಿಗೆ ಪರಿಹಾರ ಇಲ್ಲಿ ಸಿಗಲಿದೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಮಾರುಕಟ್ಟೆ ನೈಪುಣ್ಯತೆ, ಹವಾಮಾನ ಆಧಾರಿತ ಕೃಷಿ, ಕೃಷಿಯಲ್ಲಿ ನೂತನ ತಂತ್ರಜ್ಞಾನದ ಮಾಹಿತಿ, ಜೈವಿಕ ಹಾಗೂ ನವೀಕರಿಸಲ್ಪಡುವ ಇಂಧನ, ರೈತ ಸಮಸ್ಯೆಗಳಿಗೆ ತಜ್ಞರಿಂದ ಸಲಹೆ ಹಾಗೂ ರೈತರಿಂದ ರೈತರಿಗಾಗಿ ಚರ್ಚಾಗೋಷ್ಠಿ ಕೂಡಾ ನಡೆಯಲಿದೆ.

  • News18 Kannada
  • Last Updated :
  • Bangalore [Bangalore], India
  • Share this:

    ಬೆಂಗಳೂರು: ಪ್ರತಿವರ್ಷದಂತೆ ಈ ಬಾರಿಯೂ ಹೊಸ ಪರಿಕಲ್ಪನೆಯೊಂದಿಗೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ಕೃಷಿ ಮೇಳ ಹಮ್ಮಿಕೊಂಡಿದೆ. ಈ ಬಾರಿ ಇನ್ನೂ ಅಡ್ವಾನ್ಸ್ ಆಗಿ ಮೇಳವನ್ನು (Bengaluru Agriculture University) ಆಯೋಜಿಸುವ ನಿಟ್ಟಿನಲ್ಲಿ 'ಕೃಷಿಯಲ್ಲಿ ನವೋದ್ಯಮಗಳು' ಅನ್ನೋ ಪರಿಕಲ್ಪನೆಯಡಿ ಕೃಷಿ ಮೇಳವನ್ನು (Krishi Mela Bengaluru)ಆಯೋಜಿಸಲಾಗಿದೆ. ಈ ಬಾರಿಯ ಕೃಷಿ ಮೇಳವು ಬೆಂಗಳೂರು ಕೃಷಿ ವಿಶ್ವವಿದ್ಯಾಲಯವಲ್ಲದೇ ಕೃಷಿ ಇಲಾಖೆ, ಜಲಾನಯನ ಅಭಿವೃದ್ಧಿ, ತೋಟಗಾರಿಕೆ, ರೇಷ್ಮೆ, ಅರಣ್ಯ, ಪಶುಸಂಗೋಪನೆ, ಮೀನುಗಾರಿಕೆ, ಕೃಷಿ ಮಾರುಕಟ್ಟೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಕರ್ನಾಟಕ ಹಾಲು ಸಂಯುಕ್ತ ಮಹಾಮಂಡಳಿಗಳ ಆಶ್ರಯದಲ್ಲಿ ನಡೆಯಲಿದೆ.


    ಎಲ್ಲಿ ನಡೆಯುತ್ತೆ ಕೃಷಿ ಮೇಳ?
    ಈ ಬಾರಿಯ ಕೃಷಿ ಮೇಳವು "ಕೃಷಿಯಲ್ಲಿ ನವೋದ್ಯಮಗಳು” ಎಂಬ ಘೋಷವಾಕ್ಯದೊಂದಿಗೆ ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ ) ಆವರಣದಲ್ಲಿ ನಡೆಯಲಿದೆ.


    ಕೃಷಿ ಮೇಳ ದಿನಾಂಕ
    ಕೃಷಿ ಮೇಳವು ಜಿಕೆವಿಕೆ ಆವರಣದಲ್ಲಿ ನವೆಂಬರ್ 3, 4, 5 ಮತ್ತು 6 ನೇ ತಾರೀಕುಗಳಂದು ನಡೆಯಲಿದೆ.


    ಕೃಷಿ ಮೇಳ ವಿಶೇಷ
    ಈ ಬಾರಿಯ ಕೃಷಿ ಮೇಳವು ಹತ್ತು ಹಲವು ವಿಶೇಷತೆಗಳನ್ನು ಹೊಂದಿದೆ. ಒಂಭತ್ತು ಹೊಸ ತಳಿಗಳು ಮತ್ತು 38 ತಂತ್ರಜ್ಞಾನಗಳ ಬಿಡುಗಡೆ , ಕೃಷಿ ಸಾಧಕರಿಗೆ ಪುರಸ್ಕಾರ , ಭೌತಿಕವಾಗಿ ಆಯೋಜನೆ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.


    ಇನ್ನೂ ಏನೆಲ್ಲ ಇರಲಿದೆ?
    ಕೃಷಿ ತಂತ್ರಜ್ಞಾನಗಳ ಪ್ರಾತ್ಯಕ್ಷಿಕೆ, ಸುಧಾರಿತ ಕೃಷಿ ತಂತ್ರಜ್ಞಾನಗಳ ಪ್ರಾತ್ಯಕ್ಷಿಕೆಗಳು, ಕೃಷಿ ಬೇಸಾಯಕ್ಕೆ ಸೂಕ್ತವಾದ ಬೆಳೆ ಪದ್ಧತಿಗಳು, ನೂತನವಾಗಿ ಬಿಡುಗಡೆಯಾದ ವಿವಿಧ ಬೆಳೆ ತಳಿಗಳ ಪ್ರಾತ್ಯಕ್ಷಿಕೆ, ತೋಟಗಾರಿಕೆ ಬೆಳೆಗಳ ಮತ್ತು ನಿಖರ ಕೃಷಿ ಪ್ರಾತ್ಯಕ್ಷಿಕೆ, ಸಮಗ್ರ ಬೇಸಾಯ ಪದ್ಧತಿ ಪ್ರಾತ್ಯಕ್ಷಿಕೆ, ಸಿರಿಧಾನ್ಯಗಳು ಹಾಗೂ ಮಹತ್ವ , ಔಷಧೀಯ ಮತ್ತು ಸುಗಂಧ ದ್ರವ್ಯ ಸಸ್ಯಗಳು, ಜಲಾನಯನ ನಿರ್ವಹಣೆ, ಸಾವಯವ ಕೃಷಿ ಪದ್ಧತಿಗಳು, ಸಮಗ್ರ ಪೋಷಕಾಂಶಗಳು, ರೋಗ ಹಾಗೂ ಪೀಡೆ ನಿರ್ವಹಣೆ, ಮಣ್ಣು ಪರೀಕ್ಷೆಗನುಗುಣವಾಗಿ ಬೆಳೆ ಸ್ಪಂದನೆ ಪ್ರಾತ್ಯಕ್ಷಿಕೆ ನೀಡಲಾಗುತ್ತದೆ.


    ಇದನ್ನೂ ಓದಿ: Kamakshi Temple: ಕುದಿಯುವ ಎಣ್ಣೆಯಿಂದ ವಡೆ ತೆಗೆಯೋ ಉತ್ತರ ಕನ್ನಡದ ಭಕ್ತರು!


    ಜೊತೆಗೆ ಹನಿ ಮತ್ತು ತುಂತುರು ನೀರಾವರಿ ಪದ್ಧತಿಗಳು, ಮಳೆ ಹಾಗೂ ಮೇಲ್ಛಾವಣಿ ನೀರಿನ ಕೊಯ್ಲು, ಸುಧಾರಿತ ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಕೊಯ್ಲಿನೋತ್ತರ ತಾಂತ್ರಿಕತೆ , ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ಮೌಲ್ಯವರ್ಧನೆ, ಬಿತ್ತನೆ ಬೀಜಗಳ ಪರೀಕ್ಷೆ ಹಾಗೂ ಶೇಖರಣೆ, ಪಶುಸಂಗೋಪನೆ , ಹೈನುಗಾರಿಕೆ, ಕುರಿ, ಕೋಳಿ ಹಾಗೂ ಮೀನು ಸಾಕಣೆ ಹೀಗೆ ಹತ್ತು ಹಲವು ವಿಶೇಷತೆಗಳನ್ನ ಕಾಣಬಹುದಾಗಿದೆ.


    ಇದನ್ನೂ ಓದಿ: Uttara Kannada: ಕಾಂತಾರದಲ್ಲೂ ಇರದ ದೈವ, ಉತ್ತರ ಕನ್ನಡದಲ್ಲಿ ಕ್ಷೇತ್ರಪಾಲ ಜಟಿಗನ ಆರಾಧನೆ


    ಈ ಬಗ್ಗೆಯೂ ಮಾಹಿತಿ
    ಮಾರುಕಟ್ಟೆ ನೈಪುಣ್ಯತೆ, ಹವಾಮಾನ ಆಧಾರಿತ ಕೃಷಿ, ಕೃಷಿಯಲ್ಲಿ ನೂತನ ತಂತ್ರಜ್ಞಾನದ ಮಾಹಿತಿ, ಜೈವಿಕ ಹಾಗೂ ನವೀಕರಿಸಲ್ಪಡುವ ಇಂಧನ, ರೈತ ಸಮಸ್ಯೆಗಳಿಗೆ ತಜ್ಞರಿಂದ ಸಲಹೆ ಹಾಗೂ ರೈತರಿಂದ ರೈತರಿಗಾಗಿ ಚರ್ಚಾಗೋಷ್ಠಿ ಕೂಡಾ ನಡೆಯಲಿದೆ.

    Published by:ಗುರುಗಣೇಶ ಡಬ್ಗುಳಿ
    First published: