ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯ (Bengaluru To Mysuru Expressway) ಕುರಿತು ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಅತ್ಯಂತ ನಿರೀಕ್ಷೆ ಹುಟ್ಟಿಸಿದ್ದ ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಮಂಡ್ಯ ಬೈಪಾಸ್ (Mandya Bypass) ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಿದೆ. ಈ ಕುರಿತು ಸಂಸದ ಪ್ರತಾಪ್ ಸಿಂಹ (MP Pratap Simha) ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಂಸದ ಪ್ರತಾಪ್ ಸಿಂಹ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಮಂಡ್ಯ ಬೈಪಾಸ್ ಸಂಚಾರಕ್ಕೆ ಮುಕ್ತವಾಗಿದೆ. ಖುಷಿಯಿಂದ ಪ್ರಯಾಣಿಸಿ, ಆದರೆ ವೇಗವಾಗಿ ಚಲಿಸದೇ ಸುರಕ್ಷಿತವಾಗಿ ಚಲಿಸಿ ಎಂದು ಮನವಿ ಮಾಡಿದ್ದಾರೆ.
Guyz, Mandya Bypass opened for traffic! Njoy the drive. BUT #SpeedKills, safe drive. pic.twitter.com/ak5k1i0Gkc
— Pratap Simha (@mepratap) January 25, 2023
ಇದೇ ವೇಳೆ ಡ್ರೋನ್‌ಮ್ಯಾನ್ ಎಂಬ ಪೇಜ್ನಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯ ಚಿತ್ರಗಳನ್ನು ಹಂಚಿಕೊಳ್ಳಲಾಗಿದೆ.
Some Snaps of Bangaluru Mysuru Expressway
Video Coming Soon ✌️@nitin_gadkari @NHAI_Official #Bangalore #Mysuru #expressway #PragatiKaHighway #Construction pic.twitter.com/va4Fs1C115
— droneman (@yt_droneman) January 24, 2023
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕುರಿತು ಪ್ರಧಾನಿ ನರೇಂದ್ರ ಮೋದಿಯವರೇ ಘೋಷಣೆ ಮಾಡಿದ್ದರು. ಹೀಗಾಗಿ ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಈ 10 ಪಥದ ಹೆದ್ದಾರಿಯನ್ನು ಉದ್ಘಾಟಿಸಲಿದ್ದಾರೆ ಎಂದು ಹೇಳಲಾಗಿದೆ.
ಗ್ರೀನ್‌ಫೀಲ್ಡ್ ಕಾರಿಡಾರ್ನ ಭಾಗ ಈ ಹೆದ್ದಾರಿ
ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ನೀಡಿರುವ ಮಾಹಿತಿಯ ಪ್ರಕಾರ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 275 ಗ್ರೀನ್‌ಫೀಲ್ಡ್ ಕಾರಿಡಾರ್ ಯೋಜನೆಯ ಭಾಗವಾಗಿದೆ. ಈ 10 ಪಥದ ಹೆದ್ದಾರಿಯ ಕುರಿತು ಈಗಾಗಲೇ ಹೆಚ್ಚಿನ ನಿರೀಕ್ಷೆ ವ್ಯಕ್ತವಾಗಿದೆ.
ಬೈಕ್-ಆಟೋಗಳಿಗಿಲ್ಲ ಅವಕಾಶ
ಬೆಂಗಳೂರು-ಮೈಸೂರು ನಡುವಿನ ಎಕ್ಸ್ಪ್ರೆಸ್ ಕಾರಿಡಾರ್ ಸದ್ಯದಲ್ಲೇ ಸಾರ್ವಜನಿಕರ ಓಡಾಟಕ್ಕೆ ಲಭ್ಯವಾಗುವ ಸಾಧ್ಯತೆ ದಟ್ಟವಾಗಿದೆ. ಆದರೆ ಈ ಹೆದ್ದಾರಿಯಲ್ಲಿ ಬೈಕ್ ಮತ್ತು ಆಟೋಗಳ ಓಡಾಟಕ್ಕೆ ಅವಕಾಶವಿಲ್ಲ ಎಂದು ಈಗಾಗಲೇ ಮಾಹಿತಿ ನೀಡಲಾಗಿದೆ. ಬೆಂಗಳೂರು-ಮೈಸೂರು ನಡುವಿನ ಎಕ್ಸ್ಪ್ರೆಸ್ ಕಾರಿಡಾರ್ ಕಾಮಗಾರಿ ವೇಗದಿಂದ ನಡೆಯುತ್ತಿದ್ದು 2023 ರ ಮಾರ್ಚ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: Lalbagh Flower Show: ಲಾಲ್ಬಾಗ್ ಫಲಪುಷ್ಪ ಪ್ರದರ್ಶನ, 3 ದಿನಕ್ಕೇ ಲಕ್ಷಾಂತರ ಆದಾಯ
ಹೆದ್ದಾರಿಯಲ್ಲಿರಲಿದೆ ಹಲವು ಸೌಲಭ್ಯ
ಈ ಹೆದ್ದಾರಿಯು ಒಟ್ಟು 44 ಸಣ್ಣ ಸೇತುವೆಗಳನ್ನು ಹೊಂದಿದ್ದು 4 ರೈಲು ಮೇಲ್ಸೇತುವೆಗಳನ್ನು ಹೊಂದಿರಲಿದೆ. ಈ ಹೆದ್ದಾರಿಯಲ್ಲಿ ಅಲ್ಲಲ್ಲಿ ಫುಡ್ ಕೋರ್ಟ್ಗಳು, ವಿಶ್ರಾಂತಿಗೆ ಕೊಠಡಿಗಳು ಸಹ ನಿರ್ಮಾಣವಾಗಲಿವೆ.
ಅತೀ ಕಡಿಮೆ ಸಮಯದಲ್ಲಿ ಬೆಂಗಳೂರು-ಮೈಸೂರು ಸಂಚಾರ
ಅಲ್ಲದೇ ಈ ಹೆದ್ದಾರಿ ಓಡಾಟಕ್ಕೆ ಮುಕ್ತವಾದ ನಂತರ 75ರಿಂದ 80 ನಿಮಿಷಗಳಲ್ಲಿ ಬೆಂಗಳೂರು ಮೈಸೂರು ನಗರಗಳ ನಡುವೆ ಸಂಚರಿಸಬಹುದು ಎಂದು ಸಂಸದ ಪ್ರತಾಪ್ ಸಿಂಹ ಭರವಸೆ ನೀಡಿದ್ದಾರೆ.
ಇದನ್ನೂ ಓದಿ: Bengaluru Roads: ಗುಲಾಬಿ ಬಣ್ಣಕ್ಕೆ ತಿರುಗಿದ ಬೆಂಗಳೂರಿನ ರಸ್ತೆಗಳು!
ಈ ಮೂಲಕ ಬೆಂಗಳೂರು ಟು ಮೈಸೂರು ಪ್ರಯಾಣಿಕರು ಹೊಸ ಎಕ್ಸ್ಪ್ರೆಸ್ ಕಾರಿಡಾರ್ನಲ್ಲಿ ಓಡಾಡುವ ದಿನಗಳು ಹತ್ತಿರ ಬರಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ