ಬೆಂಗಳೂರು ಅಭಿವೃದ್ಧಿಗೆ ಬಜೆಟ್ನಲ್ಲಿ (Karnataka Budget 2023) ಭರ್ಜರಿ ಘೋಷಣೆಯನ್ನೇ (Bengaluru Development) ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಮಾಡಿದ್ದಾರೆ. 2ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ಸಿಎಂ ಬೆಂಗಳೂರು ಅಭಿವೃದ್ಧಿಗೆ ಭರ್ಜರಿ ಕೊಡುಗೆಯನ್ನೇ ನೀಡಿದ್ದಾರೆ. ಬರೋಬ್ಬರಿ 10 ಸಾವಿರ ಕೋಟಿ ಅನುದಾನವನ್ನು ಬೆಂಗಳೂರಿನ ಅಭಿವೃದ್ಧಿಗೆ ನಿಡುವುದಾಗಿ ತಿಳಿಸಿದ್ದಾರೆ. ಅಲ್ಲದೇ ಬೆಂಗಳೂರು ಟ್ರಾಫಿಕ್ ಸಮಸ್ಯೆ (Bengaluru Traffic ಪರಿಹಾರಕ್ಕೆ 150 ಕೋಟಿ ಅನುದಾನವನ್ನು ಅವರು ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ 9 ಕಾನೂನು ಸುವ್ಯವಸ್ಥೆ, ಆರು ಮಹಿಳಾ, ಐದು ಸಂಚಾರಿ ಠಾಣೆಗಳನ್ನ ಹೊಸದಾಗಿ ಸ್ಥಾಪಿಸಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ: Karnataka Budget 2023 Live Updates: ರೈತರಿಗೆ ಬಂಪರ್ ಆಫರ್- ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ
ಬೆಂಗಳೂರಿನ ಬೆಳವಣಿಗೆಗೆ ಆದ್ಯತೆ
ವಿಶ್ವದಲ್ಲಿಯೇ ತಂತ್ರಜ್ಞಾನದ ಕೇಂದ್ರವಾಗಿ ಗುರುತಿಸಿಕೊಂಡಿರುವ ನಗರ ಬೆಂಗಳೂರು. ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಸುಗಮ ಸಂಚಾರ, ರಸ್ತೆ, ರಾಜಕಾಲುವೆಗಳ ಅಭಿವೃದ್ಧಿಯ ಮೂಲಕ ಪ್ರವಾಹ ತಡೆಗಟ್ಟುವುದು, ವೈಜ್ಞಾನಿಕ ಹಾಗೂ ದಕ್ಷ ತ್ಯಾಜ್ಯ ನಿರ್ವಹಣೆ ವ್ಯವಸ್ಥೆಯನ್ನು ರೂಪಿಸುವುದರೊಂದಿಗೆ ಜನರ ಬದುಕಿನ ಗುಣಮಟ್ಟ ಹೆಚ್ಚಿಸಲು ಶಿಕ್ಷಣ ಹಾಗೂ ಆರೋಗ್ಯ ಸೌಲಭ್ಯಗಳಿಗೂ ನಮ್ಮ ಸರ್ಕಾರ ಆದ್ಯತೆ ನೀಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಜನನಿಬಿಡ ಪ್ರದೇಶಗಳಲ್ಲಿ ಹಲವು ಸೌಲಭ್ಯ
ಬೆಂಗಳೂರಿನ ವಿವಿಧ ಬೃಹತ್ ವಾಣಿಜ್ಯ ಮಳಿಗೆಗಳು, ಮತ್ತಿತರ ಜನನಿಬಿಡ ಪ್ರದೇಶಗಳು, ಮಾರುಕಟ್ಟೆಗಳಲ್ಲಿ ಮಹಿಳೆಯರ 250 ಸುಸಜ್ಜಿತ ಶಿ ಟಾಯ್ಲೆಟ್ಗಳನ್ನು ನಿರ್ಮಿಸಲಾಗುವುದು. ಶೌಚಾಲಯ, ಫೀಡಿಂಗ್ ರೂಂ, ಮೊಬೈಲ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗುವುದು ಎಂದು ಬಜೆಟ್ನಲ್ಲಿ ತಿಳಿಸಲಾಗಿದೆ.
ಸ್ಮಾರ್ಟ್ ವರ್ಚುವಲ್ ಕ್ಲಿನಿಕ್
ಬೆಂಗಳೂರಿನಲ್ಲಿ 243 ವಾರ್ಡ್ಗಳಲ್ಲಿ ನಮ್ಮ ಕ್ಲಿನಿಕ್ ಮತ್ತು 27 ಸ್ಮಾರ್ಟ್ ವರ್ಚುವಲ್ ಕ್ಲಿನಿಕ್ಗಳನ್ನು ಅನುಮೋದಿಸಲಾಗಿದೆ. ಬಿಬಿಎಂಪಿ ಶಾಲೆಗಳ ಅಭಿವೃದ್ಧಿಗಾಗಿ 180 ಕೋಟಿ ರೂ.ಗಳ ಯೋಜನೆ ರೂಪಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಟ್ರಾಫಿಕ್ ಸಮಸ್ಯೆ ಇನ್ನಿರಲ್ಲ ಎಂದ ಸಿಎಂ
ಟಿನ್ ಫ್ಯಾಕ್ಟರಿಯಿಂದ ಮೇಡಹಳ್ಳಿವರೆಗೆ 350 ಕೋಟಿ ವೆಚ್ಚದಲ್ಲಿ 5 ಕಿ.ಮೀ ಎಲಿವೇಟೆಡ್ ರಸ್ತೆ ನಿರ್ಮಾಣ ಮಾಡಲಾಗುತ್ತೆ. ಸಬ್ ಅರ್ಬನ್ ರೈಲ್ವೆ ನಿಗಮದ ರೈಲು ಜಾಲದೊಂದಿಗೆ ಅಮನ್ವಯ ಸಾಧಿಸಲಾಗುವುದು. ಯಶವಂತಪುರ ರೈಲು ನಿಲ್ದಾಣದಿಂದ ಮತ್ತಿಕೆರೆ ಹಾಗೂ ಬಿಇಎಲ್ ರಸ್ತೆಯವರೆಗೆ ಇಂಟಿಗ್ರೇಟೆಡ್ ಮೇಲ್ಸೇತುವೆ ನಿರ್ಮಿಸಿ ನೇರ ಸಂಪರ್ಕ ಒದಗಿಸಲಾಗುವದಾಗಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಬೆಂಗಳೂರಲ್ಲಿ ಪ್ರವಾಹ ತಡೆಗೆ ಅನುದಾನ
ಅಮೃತ ನಗರೋತ್ಥಾನ ಯೋಜನೆಯಡಿ ಬೆಂಗಳೂರು ನಗರದಲ್ಲಿ 6,000 ಕೋಟಿ ವೆಚ್ಚದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹೈ ಡೆನ್ಸಿಟಿ ಯೋಜನೆಯಡಿಯಲ್ಲಿ ಒಟ್ಟು 108 ಕಿ.ಮೀ. ರಸ್ತೆಗಳನ್ನು 273 ಕೋಟಿ ರೂ. ಗಳ ಅಂದಾಜಿನಲ್ಲಿ ತೆಗೆದುಕೊಳ್ಳಲಾಗಿದೆ. ಮಳೆ ನೀರು ಮುಕ್ತವಾಗಿ ಹರಿಯುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಪ್ರವಾಹವನ್ನು ತಪ್ಪಿಸಲು, ಒಟ್ಟು 195 ಕಿ.ಮೀ. ಉದ್ದದ ಚರಂಡಿ ಮತ್ತು ಕಲ್ವರ್ಟ್‌ಗಳ ಅಭಿವೃದ್ಧಿಗಾಗಿ 1,813 ಕೋಟಿ ರೂ. ಗಳನ್ನು ಒದಗಿಸಲಾಗಿದೆ.
ಅಭಿವೃದ್ಧಿಯ ಅಮೃತ ಸವಿ ಎಲ್ಲರಿಗೂ ತಲುಪಲಿ ಎಂದ ಸಿಎಂ
10 ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ಆಗ್ತಿದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸತತ ಬೆಂಬಲ ನೀಡಲಾಗುತ್ತಿದೆ. ಅಮೃತಕಾಲ ಕರ್ತವ್ಯಕಾಲ ಅಂತ ಮೋದಿ ಹೇಳಿದ್ದಾರೆ. ಅಭಿವೃದ್ಧಿಯ ಅಮೃತ ಎಲ್ಲರಿಗೂ ಸವಿಯುವಂತೆ ಆಗ್ಬೇಕು ಎಂದು ಅವರು ಘೋಷಿಸಿದ್ದಾರೆ.
ಬೆಂಗಳೂರು ಉಪನಗರ ರೈಲು ಯೋಜನೆ
ಬೆಂಗಳೂರು - 1450 ಕೋಟಿ ವೆಚ್ಚದಲ್ಲಿ ಆರ್ಟೀರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳ ಅಭಿವೃದ್ದಿ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರು - ಉಪನಗರ ರೈಲು ಯೋಜನೆ ಅಡಿಯಲ್ಲಿ ಚಿಕ್ಕಬಾಣಾವಾರ - ಬೈಯಪ್ಪನಹಳ್ಳಿ ಕಾರಿಡಾರ್‌ಗೆ 860 ಕೋಟಿ
ಹೈಡೆನ್ಸಿಟಿ ಕಾರಿಡಾರ್ ಯೋಜನೆಯಲ್ಲಿ ಒಟ್ಟು 108 ಕಿ.ಮೀ ರಸ್ತೆಗಳನ್ನು 273 ಕೋಟಿ ರೂ,ಗಳ ಅಂದಾಜಿನಲ್ಲಿ ತೆಗೆದುಕೊಳ್ಳಲಾಗಿದೆ. ಮಳೆ ನೀರು ಮುಕ್ತವಾಗಿ ಹರಿಯುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಪ್ರವಾಹ ತಪ್ಪಿಸಲು ಒಟ್ಟು 195 ಕಿ.ಮೀ ಉದ್ದದ ಚರಂಡಿ ಮತ್ತು ಕಲ್ವರ್ಟ್‌ಗಳ ಅಭಿವೃದ್ಧಿಗಾಗಿ 1,813 ಕೋಟಿ ರೂ.ಗಳನ್ನು ಒದಗಿಸಲಾಗಿದೆ.
75 ಜಂಕ್ಷನ್ ನಿರ್ಮಾಣ
ಬೆಂಗಳೂರು ನಗರದ ಸಂಚಾರ ದಟ್ಟಣೆ ಕಡಿಮೆ ಮಾಡಲು ಹೆಚ್ಚು ಸಂಚಾರ ದಟ್ಟಣೆ ಇರುವ ಪ್ರಮುಖ 75 ಜಂಕ್ಷನ್ಗಳನ್ನು 150 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಸಿಎಂ ತಿಳಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ