ಬೆಂಗಳೂರು: ಅತ್ಯಂತ ಹೆಚ್ಚಿನ ನಿರೀಕ್ಷೆ ಹುಟ್ಟಿಸಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ (Bengaluru Mysuru Expressway) ಕುರಿತು ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಸಂಸದ ಪ್ರತಾಪ್ ಸಿಂಹ (MP Pratap Simha) ಈ ನೂತನ ದಶಪಥದ ಅಧಿಕೃತ ಲೋಕಾರ್ಪಣೆಯ ದಿನಾಂಕದ ಕುರಿತು ಮಾಹಿತಿ ನೀಡಿದ್ದಾರೆ. ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್ ವೇ (Bengaluru Mysuru Expressway Latest News) ಮಾರ್ಚ್ 11ರಂದು ಉದ್ಘಾಟನೆ ಆಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಜೊತೆಗೆ ಮಾರ್ಚ್ 11ರಂದೇ ಮೈಸೂರು-ಕುಶಾಲನಗರ ಹೆದ್ದಾರಿಗೂ ಭೂಮಿಪೂಜೆ ನಡೆಯಲಿದೆ ಎಂದು ಸಂಸದ ಪ್ರತಾಪ್ ಸಿಂಹ ಖಚಿತಪಡಿಸಿದ್ದಾರೆ.
ಈಗಾಗಲೇ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಸಾರ್ವಜನಿಕರಿಗೆ ಪ್ರಾಯೋಗಿಕವಾಗಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಸಾರ್ವಜನಿಕರು ಬೆಂಗಳೂರು-ಮೈಸೂರಿಗೆ ಇದೇ ಮಾರ್ಗವಾಗಿ ಪ್ರಯಾಣ ಬೆಳೆಸುತ್ತಿದ್ದಾರೆ.
3 ಗಂಟೆಯಿಂದ ಒಂದೂವರೆ ಗಂಟೆಗೆ ಇಳಿದ ಪ್ರಯಾಣದ ಅವಧಿ
ಈ ದಶಪಥ ಹೆದ್ದಾರಿಯಿಂದ ಬೆಂಗಳೂರು-ಮೈಸೂರು ಪ್ರಯಾಣದ ಅವಧಿ ಈ ಮುನ್ನ ಇದ್ದ 3 ಗಂಟೆಯಿಂದ ಒಂದೂವರೆ ಗಂಟೆಗೆ ಇಳಿದಿದೆ! ಇದರಿಂದ ಪ್ರಯಾಣಿಕರಿಗೆ ಲಾಭವೇನೋ ಆಗಿದೆ. ಆದರೂ ಸಮಸ್ಯೆಯೊಂದನ್ನು ಎದುರಿಸುವಂತಾಗಿದೆ.
ಎಲ್ಲಿ ಟ್ರಾಫಿಕ್ ಸಮಸ್ಯೆ ಆಗ್ತಿದೆ?
ಮೈಸೂರು ಕಡೆಯಿಂದ ವೇಗವಾಗಿ ಬಂದು ಬೆಂಗಳೂರು ಸೇರುವ ಉತ್ಸಾಹದಲ್ಲಿರುವ ಪ್ರಯಾಣಿಕರು ಬೆಂಗಳೂರು ನಗರ ಪ್ರವೇಶ ಮಾಡುತ್ತಿದ್ದಂತೆ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ಕಂಗೆಡುವಂತಾಗಿದೆ.
ಗ್ರೀನ್‌ಫೀಲ್ಡ್ ಕಾರಿಡಾರ್ನ ಭಾಗ ಈ ಹೆದ್ದಾರಿ
ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ನೀಡಿರುವ ಮಾಹಿತಿಯ ಪ್ರಕಾರ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 275 ಗ್ರೀನ್‌ಫೀಲ್ಡ್ ಕಾರಿಡಾರ್ ಯೋಜನೆಯ ಭಾಗವಾಗಿದೆ. ಈ 10 ಪಥದ ಹೆದ್ದಾರಿಯ ಕುರಿತು ಈಗಾಗಲೇ ಹೆಚ್ಚಿನ ನಿರೀಕ್ಷೆ ವ್ಯಕ್ತವಾಗಿದೆ.
ಇದನ್ನೂ ಓದಿ: Ramadevara Betta: ದಕ್ಷಿಣ ಭಾರತದ ಅಯೋಧ್ಯೆ! ರಾಮದೇವರ ಬೆಟ್ಟ ಹೀಗಿದೆ ನೋಡಿ
ಮಾರ್ಚ್ 2014 ರಲ್ಲಿ, ಕೇಂದ್ರ ಮೇಲ್ಮೈ ಸಾರಿಗೆ ಸಚಿವಾಲಯವು ದೇಶಾದ್ಯಂತ ಕೆಲವು ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಗಳಾಗಿ ಮೇಲ್ದರ್ಜೆಗೇರಿಸುವುದಾಗಿ ಘೋಷಿಸಿತ್ತು. ಈ ಪೈಕಿ ಬೆಂಗಳೂರು-ಮೈಸೂರು ಮಾರ್ಗವು ಸಹ ಒಂದಾಗಿತ್ತು. 2014ರಲ್ಲಿ ಯೋಜನೆಯ ಅಂದಾಜು ವೆಚ್ಚ 4,100 ಕೋಟಿ ರೂ.ಗಳಾಗಿದ್ದು, ಈಗ ಅದು ದುಪ್ಪಟ್ಟಾಗಿದೆ.
ಇದನ್ನೂ ಓದಿ: Vande Bharat Express Train: ಈ ಪ್ರಮುಖ ಊರಲ್ಲಿ ನಿಲ್ಲಲ್ಲ ಮೈಸೂರು-ಬೆಂಗಳೂರು-ಚೆನ್ನೈ ವಂದೇ ಭಾರತ್ ರೈಲು!
ಈ ಎಕ್ಸ್‌ಪ್ರೆಸ್‌ವೇ ಕಾಮಗಾರಿಯು ಎರಡು ಹಂತಗಳಲ್ಲಿ ನಡೆದಿತ್ತು. ಬೆಂಗಳೂರಿನಿಂದ ಮದ್ದೂರು ತಾಲೂಕಿನ ನಿಡಘಟ್ಟಕ್ಕೆ ಸುಮಾರು 56 ಕಿ.ಮೀ ಕಾಮಗಾರಿ ಮೊದಲ ಹಂತದಲ್ಲಿ ನಡೆದರೆ, 61 ಕಿ. ಮೀ ಉದ್ದದ ಎರಡನೇ ಪ್ಯಾಕೇಜ್, ನಿಡಘಟ್ಟದಿಂದ ಮೈಸೂರಿಗೆ ಸಂಪರ್ಕಿಸಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ