Bengaluru Mysuru Expressway ಲೋಕಾರ್ಪಣೆ, ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ವೇ

ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ವೇ

ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​​ವೇ ಲೋಕಾರ್ಪಣೆಯ ನಡೆಯಲಿರುವ ಮಾರ್ಚ್ 12ರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಈ ಮಾರ್ಗದಲ್ಲಿ ನಿರ್ಬಂಧಿಸಲಾಗಿದೆ.

  • News18 Kannada
  • 2-MIN READ
  • Last Updated :
  • Bangalore [Bangalore], India
  • Share this:

    ಬೆಂಗಳೂರು: ಅತ್ಯಂತ ನಿರೀಕ್ಷೆ ಹುಟ್ಟಿಸಿರುವ ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​​ವೇ (Bengaluru Mysuru Expressway) ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ. ಮಾರ್ಚ್ 12 ರಂದು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ (PM Narendra Modi) ಈ ದಶಪಥವನ್ನು ಉದ್ಘಾಟಿಸಲಿದ್ದಾರೆ. ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮೈಸೂರು  (Bengaluru To Mysuru Road)ಮಾರ್ಗದಲ್ಲಿಯೇ ಈ ಕಾರ್ಯಕ್ರಮ ಜರುಗಲಿರುವ ಕಾರಣ ಬೆಳಗ್ಗೆಯಿಂದ ಸಂಜೆಯವರೆಗೆ ವಾಹನ ಸಂಚಾರ ಮಾರ್ಗಗಳನ್ನು ಬದಲಾವಣೆ ಮಾಡಿ ಆದೇಶಿಸಲಾಗಿದೆ.


    ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​​ವೇ ಲೋಕಾರ್ಪಣೆಯ ನಡೆಯಲಿರುವ ಮಾರ್ಚ್ 12ರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಈ ಮಾರ್ಗದಲ್ಲಿ ನಿರ್ಬಂಧಿಸಲಾಗಿದೆ. ಈ ಕುರಿತು ಮಂಡ್ಯದ ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅಧಿಕೃತ ಮಾಹಿತಿ ನೀಡಿದ್ದಾರೆ.


    ಈ ಮಾಹಿತಿಯನ್ನು ಮರೆಯಲೇಬೇಡಿ
    ಮೈಸೂರು ನಗರದಿಂದ ಬೆಂಗಳೂರಿಗೆ ಹೋಗುವ ಮುನ್ನ ಈ ಮಾಹಿತಿಯನ್ನು ಮರೆಯಬೇಡಿ. ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳು ಮೈಸೂರು -ಬನ್ನೂರು-ಕಿರುಗಾವಲು- ಮಳವಳ್ಳಿ-ಹಲಗೂರು-ಕನಕಪುರ- ಬೆಂಗಳೂರು ಮುಖಾಂತರ ಸಂಚರಿಸಬೇಕಿದೆ.


    ಮೈಸೂರು ನಗರದಿಂದ ತುಮಕೂರಿಗೆ ಪ್ರಯಾಣಿಸುವವರು ಗಮನಿಸಿ
    ಮೈಸೂರು ನಗರದಿಂದ ತುಮಕೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲ ರೀತಿಯ ವಾಹನಗಳ ಪ್ರಯಾಣಿಕರು ಮೈಸೂರು-ಶ್ರೀರಂಗಪಟ್ಟಣ- ಪಾಂಡವಪುರ-ನಾಗಮಂಗಲ-ಬೆಳ್ಳೂರು ಕ್ರಾಸ್ – ತುಮಕೂರಿನ ಮೂಲಕ ಪ್ರಯಾಣಿಬಹುದಾಗಿದೆ.




    ತುಮಕೂರಿನಿಂದ ಮೈಸೂರಿಗೆ ಹೀಗೆ ಬನ್ನಿ
    ತುಮಕೂರಿನಿಂದ ಮೈಸೂರಿಗೆ ಮದ್ದೂರು ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳ ಪ್ರಯಾಣಿಕರು ತುಮಕೂರು-ಬೆಳ್ಳೂರು ಕ್ರಾಸ್- ನಾಗಮಂಗಲ-ಪಾಂಡವಪುರ- ಶ್ರೀರಂಗಪಟ್ಟಣ ಮೈಸೂರಿನ ಮೂಲಕ ಪ್ರಯಾಣಿಸಬೇಕಿದೆ.


    ಇದನ್ನೂ ಓದಿ: Bengaluru Traffic ಪರಿಹಾರಕ್ಕೆ ಈ ಯೋಜನೆಯೇ ರಾಮಬಾಣ


    ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣಿಸುವ ಮುನ್ನ ನೆನಪಿಡಿ
    ಬೆಂಗಳೂರಿನಿಂದ ಮೈಸೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲ ವಾಹನಗಳ ಪ್ರಯಾಣಿಕರು ಬೆಂಗಳೂರು-ಚನ್ನಪಟ್ಟಣ-ಹಲಗೂರು-ಮಳವಳ್ಳಿ-ಕಿರುಗಾವಲು-ಬನ್ನೂರು - ಮೈಸೂರು ಮಾರ್ಗವಾಗಿ ಪ್ರಯಾಣ ಬೆಳೆಸಬೇಕಿದೆ.


    ಇದನ್ನೂ ಓದಿ: Bengaluru: ಅಡುಗೆ ಮಾಡಿದ ಕೈ ಆಟೋ ಓಡಿಸುತ್ತೆ! ಲೇಡಿ ಡ್ರೈವರ್ಸ್ ಲೈಫ್ ಹೀಗಿರುತ್ತೆ


    ಬೆಂಗಳೂರಿನಿಂದ ಮದ್ದೂರು ಮಾರ್ಗವಾಗಿ ಕೊಳ್ಳೇಗಾಲ- ಮಹದೇಶ್ವರ ಬೆಟ್ಟಕ್ಕೆ ತೆರಳುವ ಎಲ್ಲಾ ರೀತಿಯ ವಾಹನಗಳು ಬೆಂಗಳೂರು-ಚನ್ನಪಟ್ಟಣ- ಹಲಗೂರು-ಮಳವಳ್ಳಿ- ಕೊಳ್ಳೇಗಾಲ- ಮಹದೇಶ್ವರ ಬೆಟ್ಟದ ಮೂಲಕ ಪ್ರಯಾಣ ಮಾಡಬಹುದಾಗಿದೆ.

    Published by:ಗುರುಗಣೇಶ ಡಬ್ಗುಳಿ
    First published: