Chitradurga: ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ, ಅಧಿಕಾರಿಗಳಿಗೆ ವರ್ಷಾಂತ್ಯದ ಗಡುವು

ಭದ್ರಾ ಮೇಲ್ದಂಡೆ ಯೋಜನೆಯು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡಲು ಈಗಾಗಲೇ ಎಲ್ಲ ಪ್ರಕ್ರಿಯೆಗಳು ಮುಕ್ತಾಯವಾಗಿದೆ. ಇದಕ್ಕಾಗಿ ಹಣಕಾಸು ಇಲಾಖೆಯು ಒಪ್ಪಿಗೆ ನೀಡಿದೆ. ಈ ಯೋಜನೆಗೆ ಕೇಂದ್ರ ಸರ್ಕಾರದಿಂದ ರೂ. 9600 ಕೋಟಿ ರೂಪಾಯಿಗಳು ಲಭ್ಯವಾಗಲಿದೆ ಎಂದು ಹೇಳಿದರು.

ಭದ್ರಾ ಮೇಲ್ದಂಡೆ ಯೋಜನೆಯು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡಲು ಈಗಾಗಲೇ ಎಲ್ಲ ಪ್ರಕ್ರಿಯೆಗಳು ಮುಕ್ತಾಯವಾಗಿದೆ. ಇದಕ್ಕಾಗಿ ಹಣಕಾಸು ಇಲಾಖೆಯು ಒಪ್ಪಿಗೆ ನೀಡಿದೆ. ಈ ಯೋಜನೆಗೆ ಕೇಂದ್ರ ಸರ್ಕಾರದಿಂದ ರೂ. 9600 ಕೋಟಿ ರೂಪಾಯಿಗಳು ಲಭ್ಯವಾಗಲಿದೆ ಎಂದು ಹೇಳಿದರು.

ಭದ್ರಾ ಮೇಲ್ದಂಡೆ ಯೋಜನೆಯು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡಲು ಈಗಾಗಲೇ ಎಲ್ಲ ಪ್ರಕ್ರಿಯೆಗಳು ಮುಕ್ತಾಯವಾಗಿದೆ. ಇದಕ್ಕಾಗಿ ಹಣಕಾಸು ಇಲಾಖೆಯು ಒಪ್ಪಿಗೆ ನೀಡಿದೆ. ಈ ಯೋಜನೆಗೆ ಕೇಂದ್ರ ಸರ್ಕಾರದಿಂದ ರೂ. 9600 ಕೋಟಿ ರೂಪಾಯಿಗಳು ಲಭ್ಯವಾಗಲಿದೆ ಎಂದು ಹೇಳಿದರು.

  • Share this:
ಚಿತ್ರದುರ್ಗ(ಜು.15): ನೀರಾವರಿ ಕಾಮಗಾರಿಗಳನ್ನು (Irrigation Works) ತ್ವರಿತವಾಗಿ ನಿರ್ವಹಿಸಲು ಅನುಕೂಲವಾಗುವಂತೆ ತುರ್ತಾಗಿ ಭೂಸ್ವಾಧೀನ (Land Acquisition) ಪ್ರಕ್ರಿಯೆಯನ್ನು ಪೂರ್ಣಗೊಳಿಸಿ. ಭೂಮಾಲೀಕರಿಗೆ ಪರಿಹಾರ ಧನವನ್ನು ವಿತರಿಸಿ. ಒಂದು ವೇಳೆ ಭೂ ಮಾಲೀಕರು ಕೌಟುಂಬಿಕ ಹಾಗೂ ಇನ್ನಿತರ ಕಾರಣಗಳಿಂದ ಪರಿಹಾರ ಧನ ಪಡೆಯದೇ ಇದ್ದಲ್ಲಿ , ಪರಿಹಾರ ಮೊತ್ತವನ್ನು ನಿಯಾಮನುಸಾರ ನ್ಯಾಯಲಯಕ್ಕೆ ಠೇವಣಿ ಮಾಡಿ ಜಮೀನನ್ನು (Land) ನಿಗಮದ ವಶಕ್ಕೆ ಹಸ್ತಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಚಿತ್ರದುರ್ಗದ ಭದ್ರಾ ಮೇಲ್ದಂಡೆ ಯೋಜನೆಯ ಕಛೇರಿಯ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಭೂ ಸ್ವಾಧಿನ ಪ್ರಕ್ರಿಯೆ ವಿಳಂಬವಾದಲ್ಲಿ ಸಂಬಂಧಪಟ್ಟ ಭೂ ಸ್ವಾಧೀನ‌ ಅಧಿಕಾರಿಗಳೇ ಹೊಣೆಗಾರರಾಗಬೇಕಾಗುತ್ತದೆ.

ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡು ಪರಿಹಾರ ಧನವನ್ನು ಪಡೆದ ಭೂ ಮಾಲೀಕರು ಕಾಮಗಾರಿಗೆ ಅಡ್ಡಿಪಡಿಸುವುದು ಕಾನೂನು ಬಾಹಿರ. ಪೋಲೀಸ್ ಭದ್ರತೆ ಪಡೆದು ಕಾಮಗಾರಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು . ಭದ್ರಾ ಮೇಲ್ದಂಡೆ ಯೋಜನೆಯ ವಿವಿಧ ಪ್ಯಾಕೇಜ್‍ವಾರು ಪ್ರಗತಿ ಪರಿಶೀಲಿಸಿದ ಸಚಿವರು ಕುಂಠಿತ ಯೋಜನೆಗಳ ಗುತ್ತಿಗೆದಾರರಿಗೆ ನೋಟೀಸ್ ನೀಡಿ, ಪ್ರಗತಿಯನ್ನು ಚುರುಕುಗೊಳಿಸಲು ಸೂಚಿಸಿದರು.

ಸಮಸ್ಯೆಗಳ ಗಮನಕ್ಕೆ ತರುವಂತೆ ಸೂಚನೆ

ಕಾಮಗಾರಿಗಳನ್ನು ನಿರ್ವಹಿಸುವ ಸಮಯದಲ್ಲಿ ಎದುರಾಗುವ ಭೂಸ್ವಾಧೀನ , ಅರಣ್ಯ ಭೂಮಿ , ವಿದ್ಯುತ್‍ಚ್ಛಕ್ತಿ ಲೈನ್ , ರೈಲ್ವೆ ಮತ್ತು ಹೆದ್ದಾರಿ ಕ್ರಾಸಿಂಗ್‍ಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಕ್ರೋಡಿಕರಿಸಿ ನನ್ನ ಗಮನಕ್ಕೆ ತಂದರೆ ಸಂಬಂಧಿಸಿದ ಇಲಾಖೆಯವರ ಜೊತೆ ಸಭೆ ಜರುಗಿಸಿ ಪರಿಹಾರ ಒದಗಿಸುವುದಾಗಿ ಹೇಳಿದರು.

2022-23 ನೇ ಸಾಲಿನ ಅಯವ್ಯಯ ಭಾಷಣದಲ್ಲಿ ಚಿತ್ರದುರ್ಗ ಶಾಖಾ ಕಾಲುವೆ ಕಿ.ಮೀ.0.00 ಇಂದ 60.00 ಕಿ.ಮೀ. ವರೆಗೆ ಪೂರ್ಣಗೊಳಿಸಿ , ಹೊಳಲ್ಕೆರೆ ಫೀಡರ್ ಕೆನಾಲ್ ಮೂಲಕ ಹೊಳಲ್ಕೆರೆ ತಾಲ್ಲೂಕಿನ 28 ಕೆರೆಗಳಿಗೆ ನೀರು ತುಂಬಿಸಲು, ತರೀಕೆರೆ ಏತ ನೀರಾವರಿ ಯೋಜನೆಯ ಮುಖಾಂತರ ತರೀಕೆರೆ ತಾಲ್ಲೂಕಿನ 20,150 ಹೆಕ್ಟೇರ್ ಜಮೀನುಗಳಿಗೆ ಹನಿ ನೀರಾವರಿ ಮೂಲಕ ನೀರಾವರಿ ಕ್ಷೇತ್ರ ಸೃಷ್ಟಿಸುವ ಘೋಷಣೆ ಮಾಡಲಾಗಿದೆ.

ಕಾಮಗಾರಿಗೆ ಅನುಮತಿಸಲು ಭೂಮಾಲೀಕರ ಅಡ್ಡಿ

ಆಯವ್ಯಯದ ಘೋಷಣೆಯಂತೆ ನಿಗದಿಪಡಿಸಿದ ಗುರಿ ಸಾಧಿಸಲು ಪ್ರಯತ್ನಿಸುವಂತೆ ತಿಳಿಸಿದರು. ಇನ್ನೂ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಅಬ್ಬಿನಹೊಳಲು , ಕಾಟಿಗನರ , ಚಿನ್ನಾಪುರ ಮತ್ತು ಸೊಲ್ಲಾಪುರ ಗ್ರಾಮಗಳ ಭೂಮಾಲೀಕರು ಭೂಸ್ವಾಧೀನ ಕಾಯ್ದೆಯ ಪ್ರಕಾರ ಪರಿಹಾರ ಧನ ನೀಡಲಾಗಿದೆ. ಹೆಚ್ಚಿನ ಪರಿಹಾರಕ್ಕಾಗಿ ಕಾಮಗಾರಿಯನ್ನು ನಿರ್ವಹಿಸಲು ಅನುಮತಿ ನೀಡದೇ ಭೂ ಮಾಲೀಕರರು ಅಡ್ಡಿಯನ್ನುಂಟು ಮಾಡುತ್ತಿರುವ ಕುರಿತು ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು.

ಯೋಜನೆಯ ಕಾಮಗಾರಿಗಳಿಗೆ ಸಂಬಂಧಿಸಿದಂತೆ ರೂ 800 ಕೋಟಿ ಮೊತ್ತದ ಬಿಲ್ಲುಗಳು ಪಾವತಿ ಬಾಕಿ ಇದೆ. ಕಾಮಗಾರಿಗಳು ತ್ವರಿತಗತಿಯಲ್ಲಿ ಪ್ರಗತಿ ಸಾಧಿಸಲು ಹಣ ಬಿಡುಗಡೆಗೊಳಿಸವಂತೆ ಯೋಜನೆಯ ಮುಖ್ಯ ಇಂಜಿನೀಯರ್ ಎಂ.ರವಿ ಜಲಸಂಪನ್ಮೂಲ ಸಚಿವರಿಗೆ ಮನವಿ ಮಾಡಿದರು. ಬಳಿಕ ಮಾದ್ಯಮಗಳಿಗೆ ಪ್ರತಿಕ್ರಿಯ ನೀಡಿದ ಅವರು,   ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯು ಭೂಸ್ವಾಧೀನ ಪ್ರಕ್ರಿಯೆಯಿಂದಾಗಿ ಬಹಳಷ್ಟು ವಿಳಂಬವಾಗುತ್ತಿತ್ತು. ಸದ್ಯ ಭೂ ಸ್ವಾಧೀನ ಪ್ರಕ್ರಿಯೆ ತ್ವರಿತವಾಗಿದ್ದು ವರ್ಷಾಂತ್ಯಕ್ಕೆ ಶೇ.90ರಷ್ಟು ಕಾಮಗಾರಿಯು ಪೂರ್ಣಗೊಳ್ಳಲಿದೆ ಎಂದಿದ್ದಾರೆ.

ಅಲ್ಲದೇ ಭದ್ರಾ ಮೇಲ್ದಂಡೆ ಯೋಜನೆಯು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡಲು ಈಗಾಗಲೇ ಎಲ್ಲ ಪ್ರಕ್ರಿಯೆಗಳು ಮುಕ್ತಾಯವಾಗಿದೆ. ಇದಕ್ಕಾಗಿ ಹಣಕಾಸು ಇಲಾಖೆಯು ಒಪ್ಪಿಗೆ ನೀಡಿದೆ. ಈ ಯೋಜನೆಗೆ ಕೇಂದ್ರ ಸರ್ಕಾರದಿಂದ ರೂ. 9600 ಕೋಟಿ ರೂಪಾಯಿಗಳು ಲಭ್ಯವಾಗಲಿದೆ ಎಂದು ಹೇಳಿದರು.

2223 ಎಕರೆಯನ್ನು ಭೂಸ್ವಾಧೀನ

ಭದ್ರಾ ಮೇಲ್ದಂಡೆ ಯೋಜನೆಯಡಿಯಲ್ಲಿ ಚಿತ್ರದುರ್ಗ ಶಾಖಾ ಕಾಲುವೆ ನಿರ್ಮಾಣಕ್ಕಾಗಿ 2223 ಎಕರೆಯನ್ನು ಭೂಸ್ವಾಧಿನ ಮಾಡಲು 91ಅಧಿಸೂಚನೆ ಹೊರಡಿಸಲಾಗಿದೆ. ಕಂದಾಯ, ಲೋಕೋಪಯೋಗಿ, ಅರಣ್ಯ, ತೋಟಗಾರಿಕೆ ಇಲಾಖೆಗಳ ಜಂಟಿ ಸರ್ವೇ ಸಂದರ್ಭದಲ್ಲಿ ಕಾಮಗಾರಿ ವ್ಯಾಪ್ತಿಯಿಂದ ಹೊರಗಡೆ ಇರುವ 421 ಎಕರೆ ಭೂಮಿಯನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಲಾಗಿದೆ.

ಇದನ್ನೂ ಓದಿ: Mangaluru News: ಮನೆ ಬಾಗಿಲಿಗೆ ಬರುತ್ತೆ ಜನನ-ಮರಣ ಪ್ರಮಾಣಪತ್ರ! ಹೇಗೆ ತರಿಸಿಕೊಳ್ಳೋದು?

ಒಟ್ಟು 1617 ಎಕರೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಭೂಸ್ವಾಧೀನಕ್ಕಾಗಿ ರೂ.25 ಕೋಟಿಯನ್ನು 377 ರೈತರಿಗೆ ಪಾವತಿಸಲಾಗಿದೆ. ಇನ್ನೂ ಬಾಕಿ ಉಳಿದ ಭೂ ಸ್ವಾಧೀನಕ್ಕೆ ರೂ. 75 ಕೋಟಿ ಅನುದಾನವನ್ನು ಆದಷ್ಟು ಶೀಘ್ರದಲ್ಲಿ ಮಂಜೂರು ಮಾಡಲು ಕ್ರಮಹಿಸಲಾಗುವುದು.
Published by:Divya D
First published: