• Home
  • »
  • News
  • »
  • breaking-news
  • »
  • Gaalipata 2: ಸಾವಿರಕ್ಕೂ ಹೆಚ್ಚು ಸ್ಕ್ರೀನ್​ಗಳಲ್ಲಿ ಹಾರಾಡ್ತಿದೆ ಗಾಳಿಪಟ-2; 3ನೇ ದಿನವೂ ಭರ್ಜರಿ ಕಲೆಕ್ಷನ್​

Gaalipata 2: ಸಾವಿರಕ್ಕೂ ಹೆಚ್ಚು ಸ್ಕ್ರೀನ್​ಗಳಲ್ಲಿ ಹಾರಾಡ್ತಿದೆ ಗಾಳಿಪಟ-2; 3ನೇ ದಿನವೂ ಭರ್ಜರಿ ಕಲೆಕ್ಷನ್​

ಗಾಳಿಪಟ-2

ಗಾಳಿಪಟ-2

ಗಾಳಿಪಟ 2 ಚಿತ್ರ ಭರ್ಜರಿ ಓಪನ್ನಿಂಗ್ ಪಡೆದಿದ್ದು,  ಸಿನಿಮಾ ತಂಡ ಫುಲ್​ ಆಗಿದೆ.  ವೀಕೆಂಡ್​ ಹಿನ್ನೆಲೆ ಥಿಯೇಟರ್​ಗಳಿಗೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬರ್ತಿದ್ದಾರೆ. ಇದು ಶ್ರಮಕ್ಕೆ ತಕ್ಕ ಪ್ರತಿಫಲ ಎಂದು ಗಣೇಶ್​ ಹೇಳ್ತಿದ್ದಾರೆ.

  • Share this:

ನಿರ್ದೇಶಕ ಯೋಗರಾಜ್ ಭಟ್ (Director Yogaraj Bhat )​​ ಹಾಗೂ ಗೋಲ್ಡನ್​​ ಸ್ಟಾರ್ ಗಣೇಶ್ (Golden Star Ganesh) ಕಾಂಬಿನೇಷನ್​ ​ ತೆರೆ ಮೇಲೆ ಮತ್ತೆ ಮೋಡಿ ಮಾಡಿದೆ. ಆಗಸ್ಟ್​ 12 ರಂದು ಕರ್ನಾಟಕ ಸೇರಿದಂತೆ, ಹೊರ ರಾಜ್ಯ ಹಾಗೂ ದೇಶ ವಿದೇಶಗಳಲ್ಲೂ ಗಾಳಿಪಟ-2 ಚಿತ್ರ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣ್ತಿದೆ. ಮೊದಲ ದಿನವೇ ಬಾಕ್ಸ್​ ಆಫೀಸ್​ನಲ್ಲಿ (Box Office) ಗಾಳಿಪಟ-2 ಚಿತ್ರದ ಕಲೆಕ್ಷನ್​ ಸಖತ್ ಆಗಿಯೇ ಸದ್ದು ಮಾಡಿತ್ತು, ಇದೀಗ ಸಾಲು ಸಾಲು ರಜೆ ಹಿನ್ನೆಲೆ ಗಾಳಿಪಟ 2 (Gaalipata-2) ಸಿನಿಮಾ ಕಲೆಕ್ಷನ್ (Collection) ಡಬಲ್ ಆಗಿದೆ.  ‘ಗಾಳಿಪಟ 2’ ಗಣೇಶ್‌ ಅವರ ಹಿಂದಿನ ಚಿತ್ರಗಳ ದಾಖಲೆಯನ್ನು ಮುರಿದಿದೆ. 


ಗಣಿ ಈಸ್ ಬ್ಯಾಕ್ ಅಂತಿದ್ದಾರೆ ಅಭಿಮಾನಿಗಳು


ಗಾಳಿಪಟ-2 ನೋಡಿದ ಜನರು ಕೂಡ ಗಣೇಶ್​ ನಟನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸಿನಿಮಾದಲ್ಲಿ ಮೊದಲ ಮೊದಲು ಜನರನ್ನು ನಕ್ಕು ನಗಿಸಿ  ಭಾವುಕರನ್ನಾಗಿ ಮಾಡೋ ಗೋಲ್ಡನ್​ ಸ್ಟಾರ್​ ನಟನೆಗೆ ಪ್ರೇಕ್ಷಕರು ಫಿದಾ ಆಗಿದ್ದು, ಗಣಿ ಈಸ್​ ಬ್ಯಾಕ್​ ಎನ್ನುತ್ತಿದ್ದಾರೆ. 14 ವರ್ಷಗಳ ಹಿಂದೆ ಗಾಳಿಪಟ 175 ದಿನ ಪ್ರದರ್ಶನ ಕಂಡು ಭರ್ಜರಿ ಯಶಸ್ಸು ಕಂಡಿತ್ತು. ಇದೀಗ ಗಾಳಿಪಟ-2 ಕೂಡ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ತೆರೆಕಂಡ ಮೊದಲು ಹಾಗೂ 3ನೇ ದಿನವೇ ಭರ್ಜರಿ ಕಲೆಕ್ಷನ್ ಮಾಡಿದೆ.


ಬಾಕ್ಸ್​ ಆಫೀಸ್​ನಲ್ಲಿ ಭರ್ಜರಿ ಕಲೆಕ್ಷನ್


ರಾಜ್ಯದಲ್ಲಿ 700 ಶೋ, ಹೊರ ರಾಜ್ಯಗಳಲ್ಲಿ 200, ವಿದೇಶಗಳಲ್ಲಿ 250 ಶೋ ಸೇರಿ ಮೊದಲ ದಿನವೇ 1000ಕ್ಕೂ ಅಧಿಕ ಶೋಗಳಲ್ಲಿ 'ಗಾಳಿಪಟ'-2 ಪ್ರದರ್ಶನ ಕಂಡಿದೆ. ಪ್ರೀಮಿಯರ್‌ ಶೋಗಳ ಕಲೆಕ್ಷನ್ ಕೂಡ ಸೇರಿ ಮೊದಲ ದಿನ ಅಂದಾಜು 15 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದ್ದ ಗಾಳಿಪಾಟ ಎರಡನೇ ದಿನವೂ  10 ಕೋಟಿ ಕಲೆಕ್ಷನ್​ ಮಾಡಿದ್ದು,  ಮೂರನೇ ದಿನ 5 ಕೋಟಿ ಕಲೆಕ್ಷನ್​ ಆಗಿದೆ.  ಒಟ್ಟು ಚಿತ್ರದ ಕಲೆಕ್ಷನ್​  30 ಕೋಟಿ ದಾಟಿದೆ ಎಂದು ಮೂಲಗಳು ತಿಳಿಸಿದೆ.  ಗೋಲ್ಡನ್ ಸ್ಟಾರ್ ಗಣೇಶ್‌ ಸಿನಿಕರಿಯರ್‌ನಲ್ಲಿ ಇದು ಭಾರೀ ಓಪನಿಂಗ್ ಎನ್ನಬಹುದಾಗಿದೆ.
ಗಣೇಶ್​ಗೆ ದಿಗಂತ್​, ಪವನ್ ಸಾಥ್​


ಚಿತ್ರದಲ್ಲಿ ಗೋಲ್ಡನ್‌ ಸ್ಟಾರ್ ಗಣೇಶ್, ದೂದ್ ಪೇಡ ದಿಗಂತ್ ಹಾಗೂ ನಿರ್ದೇಶಕ ಪವನ್ ಕುಮಾರ್ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಇನ್ನು 'ಗಾಳಿಪಟ' ಚಿತ್ರದಲ್ಲಿ ನಟಿಸಿದ್ದ ರಾಜೇಶ್ ಕೃಷ್ಣನ್ ಬದಲು 'ಲೂಸಿಯ' ನಿರ್ದೇಶಕ ಪವನ್ ಕುಮಾರ್ ಅಭಿನಯಿಸಿದ್ದಾರೆ. ನಿರ್ದೇಶಕ ಪವನ್ ಕುಮಾರ್ ಈ ಹಿಂದೆ ಯೋಗರಾಜ್ ಭಟ್ಟರ 'ಮನಸಾರೆ' ಮತ್ತು 'ಪಂಚರಂಗಿ' ಸಿನಿಮಾಗಳಲ್ಲಿ ನಟಿಸಿದ್ದಾರೆ. ಚಿತ್ರದ ನಾಯಕಿಯರಾಗಿ ವೈಭವಿ ಶಾಂಡಿಲ್ಯ, ಸಂಯುಕ್ತ ಮೆನನ್, ಶರ್ಮಿಳಾ ಮಾಂಡ್ರೆ ಕಾಣಿಸಿಕೊಂಡಿದ್ದಾರೆ. ಇನ್ನು ಈ ಚಿತ್ರದಲ್ಲಿ ಗಣೇಶ್‌ ಅವರ ಪುತ್ರ ವಿಹಾನ್‌ ಸಹ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾನೆ.


ಈ ಸಿನಿಮಾದಲ್ಲಿ ಹಿರಿಯ ನಟ ಅನಂತ್ ನಾಗ್ ಅವರು ಕನ್ನಡ ಮೇಷ್ಟ್ರು ಪಾತ್ರದಲ್ಲಿ ನಟಿಸಿದ್ದಾರೆ. ಸಂತೋಷ್‌ ರೈ ಪಾತಾಜೆ  ಸಿನಿಮಾಟೋಗ್ರಫಿಯಿರುವ ಈ ಚಿತ್ರದಲ್ಲಿ ಪದ್ಮಜಾ ರಾವ್‌, ಸುಧಾ​ ಬೆ​ಳ​ವಾಡಿ, ರಂಗಾ​ಯಣ ರಘು ಸೇರಿದಂತೆ ಮುಂತಾದವರು ನಟಿಸುತ್ತಿದ್ದಾರೆ.  ರಮೇಶ್‌ ರೆಡ್ಡಿ ಚಿತ್ರದ ನಿರ್ಮಾಪಕರು. 'ಗಾಳಿಪಟ 2' ಚಿತ್ರದ ಸ್ಯಾಟಲೈಟ್ ಮತ್ತು ಡಿಜಿಟಲ್ ಹಕ್ಕನ್ನು ಜೀ ಕನ್ನಡ ಮತ್ತು ಜೀ5 ಭಾರೀ ಮೊತ್ತಕ್ಕೆ ಖರೀದಿಸಿವೆ. ಮಾತ್ರವಲ್ಲದೇ ಆಡಿಯೋ ಹಕ್ಕುಗಳನ್ನು ಆನಂದ್ ಆಡಿಯೋ ಸಂಸ್ಥೆ ಪಡೆದುಕೊಂಡಿದೆ.


ಸಿನಿಮಾ ತಂಡ ಫುಲ್​ ಖುಷ್​


ಗಾಳಿಪಟ 2 ಚಿತ್ರ ಭರ್ಜರಿ ಓಪನ್ನಿಂಗ್ ಪಡೆದಿದ್ದು,  ಸಿನಿಮಾ ತಂಡ ಫುಲ್​ ಆಗಿದೆ.  ವೀಕೆಂಡ್​ ಹಿನ್ನೆಲೆ ಥಿಯೇಟರ್​ಗಳಿಗೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬರ್ತಿದ್ದಾರೆ. ಇದು ಶ್ರಮಕ್ಕೆ ತಕ್ಕ ಪ್ರತಿಫಲ ಎಂದು ಗಣೇಶ್​ ಹೇಳ್ತಿದ್ದಾರೆ.

Published by:Pavana HS
First published: