Gold and Silver Price: ಇಂದು ಯಥಾಸ್ಥಿತಿ ಕಾಯ್ದುಕೊಂಡ ಬಂಗಾರ, ಬೆಳ್ಳಿ ದರದಲ್ಲಿ ಇಳಿಕೆ

ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,950 ಆಗಿದೆ. ಅದೇ ರೀತಿ 1 ಕೆಜಿ ಬೆಳ್ಳಿ ಬೆಲೆ 61,200 ರೂಪಾಯಿ ಆಗಿದೆ.

ಚಿನ್ನಾಭರಣ

ಚಿನ್ನಾಭರಣ

  • Share this:
    Gold and Silver Price on July 28, 2022: ಕಳೆದ ಮೂರು ದಿನಗಳ ಹಿಂದೆ ಚಿನ್ನದ ಬೆಲೆ (Gold Price) ಗಮನಾರ್ಹವಾಗಿ ಇಳಿಕೆ ಕಂಡಿತ್ತು. ಹೀಗಾಗಿ ಗ್ರಾಹಕರಿಗೂ (Customers) ಖರೀದಿಗೆ ಉತ್ತಮ ಸಮಯವಾಗಿತ್ತು. ಆದರೆ ನಿನ್ನೆಯಿಂದ ಮತ್ತೆ ಮಾರುಕಟ್ಟೆಯಲ್ಲಿ (Market) ಚಿನ್ನ ದುಬಾರಿಯಾಗಿದೆ. ನಿನ್ನೆ ಒಂದು ಒಂದು ಗ್ರಾಂ ಚಿನ್ನದ ಬೆಲೆ 4,690 ರೂಪಾಯಿ ಆಗಿತ್ತು. ಇಂದೂ ಸಹ ಅದೇ ಬೆಲೆ ಮುಂದುವರೆದಿದೆ. ಭಾರತವು ಚಿನ್ನದ ಮೇಲಿನ ಆಮದು ಸುಂಕ ಹೆಚ್ಚಿಸುತ್ತಿದ್ದು ಮುಂಬರುವ ದಿನಗಳಲ್ಲಿ ಚಿನ್ನ ಮತ್ತಷ್ಟು ಏರಿಕೆಯಾಗುವ (Price Hike) ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಹಾಗಾಗಿ ಚಿನ್ನ ಇನ್ನಷ್ಟು ದುಬಾರಿ ಆಗೋ ಮುಂಚೆ ಅದನ್ನು ಈಗಲೇ ಖರೀದಿಸುವುದು ಉತ್ತಮ. ಕಳೆದ ಕೆಲ ಸಮಯದಿಂದ ಚಿನ್ನದ ಬೆಲೆಗಳಲ್ಲಿ ಅಲ್ಪ ಪ್ರಮಾಣದ ಏರಿಳಿತಗಳು ಆಗುತ್ತಲೇ ಇದ್ದು ಇದಕ್ಕೆ ಪ್ರಮುಖ ಕಾರಣ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉಂಟಾಗುತ್ತಿರುವ ಮಾರುಕಟ್ಟೆ ಸಂಬಂಧಿತ ವಿದ್ಯಮಾನಗಳು, ಹಣದುಬ್ಬರ ಹಾಗೂ ಕಚ್ಚಾ ತೈಲದಲ್ಲಾಗಿರುವ ಬೆಲೆ ಏರಿಕೆ ಹಾಗೂ ಇತರೆ ಜಾಗತಿಕ ಅಂಶಗಳೇ ಆಗಿವೆ.

    ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರಗಳ ಕುರಿತು ಮಾಹಿತಿ ತಿಳಿದುಕೊಳ್ಳೋಣ…

    ಒಂದು ಗ್ರಾಂ (1GM)
    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,690
    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,116

    ಎಂಟು ಗ್ರಾಂ (8GM)
    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,520
    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,928

    ಹತ್ತು ಗ್ರಾಂ (10GM)
    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,900
    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,160

    ನೂರು ಗ್ರಾಂ (100GM)
    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,69,000
    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,11,600

    ಇದನ್ನೂ ಓದಿ: Petrol-Diesel Price Today: ಬೆಳಗಾವಿ, ಬಳ್ಳಾರಿ, ಮೈಸೂರು, ಕೊಡಗಿನಲ್ಲಿ ಪೆಟ್ರೋಲ್ ಬೆಲೆ ಏರಿಕೆ, ಉಳಿದ ಜಿಲ್ಲೆಗಳಲ್ಲಿ ಹೇಗಿದೆ?

    ಬೆಂಗಳೂರಲ್ಲಿ ಇಂದಿನ ಬಂಗಾರದ ಬೆಲೆ

    ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,950 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 47,200 ರೂ. 46,900, ರೂ. 46,900 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 46,900 ರೂ. ಆಗಿದೆ.

    ಇಂದಿನ ಬೆಳ್ಳಿ ದರ

    ಚಿನ್ನದಂತೆ ಸಾಮಾನ್ಯವಾಗಿ ಬೆಳ್ಳಿ ದರಗಳಲ್ಲೂ ವ್ಯತ್ಯಾಸ ಆಗುತ್ತಲೇ ಇರುತ್ತದೆ. ಇಂದು ಭಾರತದ ಮಾರುಕಟ್ಟೆಯಲ್ಲಿ ಬೆಳ್ಳಿ ದರ ಒಂದು ಕೆಜಿಗೆ ಬೆಳ್ಳಿ ಬೆಲೆ 54,900 ರೂ. ಆಗಿದ್ದು, ಕೊಂಚ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆ ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನೆ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ.

    ಬೆಂಗಳೂರಲ್ಲಿ ಬೆಳ್ಳಿ ಬೆಲೆ ಎಷ್ಟಿದೆ?

    ಬೆಂಗಳೂರಿನಲ್ಲೂ ಬೆಳ್ಳಿ ದರದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಸಾಕಷ್ಟು ಇಳಿಕೆಯಾಗಿದೆ. ನಗರದಲ್ಲಿ ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ದರಗಳು ಕ್ರಮವಾಗಿ ರೂ. 612, ರೂ. 6,120 ಹಾಗೂ ರೂ. 61,200 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 61,100 ಆಗಿದ್ದರೆ ದೆಹಲಿಯಲ್ಲಿ ರೂ. 54,900 ಮುಂಬೈನಲ್ಲಿ ರೂ. 54,900 ಹಾಗೂ ಕೊಲ್ಕತ್ತದಲ್ಲೂ ರೂ. 54,900 ಗಳಾಗಿದೆ.

    ಇದನ್ನೂ ಓದಿ: Food Business: ಫಾಸ್ಟ್ ಫುಡ್ ಸೆಂಟರ್ ಇಟ್ಕೊಂಡಿದ್ರೆ ಇದನೆಲ್ಲಾ ಫಾಲೋ ಮಾಡಿ! ಇಲ್ದಿದ್ರೆ 5 ಲಕ್ಷ ದಂಡ, 6 ತಿಂಗಳು ಜೈಲು

    ವಿ.ಸೂ: ಇಲ್ಲಿ ಕೊಡಲಾದ ಎಲ್ಲ ದರಗಳು ಮಾರುಕಟ್ಟೆಯ ಬೆಲೆಗಳನ್ನು ಪ್ರತಿನಿಧಿಸುತ್ತವೆ ಹಾಗೂ ಜಿಎಸ್ಟಿ, ಟಿಸಿಎಸ್ ಹಾಗೂ ಇನ್ನಿತರೆ ಇರಬಹುದಾದ ಶುಲ್ಕಗಳನ್ನು ಒಳಗೊಂಡಿಲ್ಲ. ಹೆಚ್ಚು ನಿಖರ ಬೆಲೆಗಳಿಗಾಗಿ ನಿಮ್ಮ ಹತ್ತಿರದ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸಿ.
    Published by:Annappa Achari
    First published: