• ಹೋಂ
  • »
  • ನ್ಯೂಸ್
  • »
  • Breaking News
  • »
  • Suresh Raina: ಐಸಿಸಿ ಟ್ರೋಫಿ ಮಾತ್ರವಲ್ಲ, ಕೊಹ್ಲಿ ಐಪಿಎಲ್ ಕಪ್ ಕೂಡ ಗೆದ್ದಿಲ್ಲ..!

Suresh Raina: ಐಸಿಸಿ ಟ್ರೋಫಿ ಮಾತ್ರವಲ್ಲ, ಕೊಹ್ಲಿ ಐಪಿಎಲ್ ಕಪ್ ಕೂಡ ಗೆದ್ದಿಲ್ಲ..!

2017 ರಲ್ಲಿ ಚಾಂಪಿಯನ್​ಟ್ರೋಫಿ ಫೈನಲ್​ನಲ್ಲಿ ಭಾರತ ಮುಗ್ಗರಿಸಿದರೆ, 2019 ವಿಶ್ವಕಪ್​ನಲ್ಲಿ ಸೆಮಿ ಫೈನಲ್​ನಲ್ಲಿ ಎಡವಿತ್ತು. ಇದೀಗ ಐಸಿಸಿ ಟೆಸ್ಟ್ ಚಾಂಪಿಯನ್​ಶಿಪ್ ಟ್ರೋಫಿ ಕೂಡ ಕೈ ತಪ್ಪಿದೆ. ಹೀಗಾಗಿ ಕೊಹ್ಲಿ ನಾಯಕತ್ವ ಮತ್ತೊಮ್ಮೆ ಚರ್ಚಾ ವಿಷಯವಾಗಿದೆ.

  • Share this:

    ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಾಯಕತ್ವದ ಚರ್ಚೆಗಳು ಮುಂದುವರೆದಿದೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಸೋಲಿನ ಬಳಿಕ ಕೊಹ್ಲಿ ನಾಯಕತ್ವದ ಬಗ್ಗೆ ಟೀಕೆಗಳು ಕೇಳಿ ಬಂದಿದ್ದವು. ಇದಕ್ಕೆ ಕಾರಣ ಕೊಹ್ಲಿ ಸಾರಥ್ಯದಲ್ಲಿ ಟೀಮ್ ಇಂಡಿಯಾ ಇದುವರೆಗೆ ಐಸಿಸಿ ಟ್ರೋಫಿ ಗೆಲ್ಲದಿರುವುದು. 2017 ರಲ್ಲಿ ಚಾಂಪಿಯನ್​ಟ್ರೋಫಿ ಫೈನಲ್​ನಲ್ಲಿ ಭಾರತ ಮುಗ್ಗರಿಸಿದರೆ, 2019 ವಿಶ್ವಕಪ್​ನಲ್ಲಿ ಸೆಮಿ ಫೈನಲ್​ನಲ್ಲಿ ಎಡವಿತ್ತು. ಇದೀಗ ಐಸಿಸಿ ಟೆಸ್ಟ್ ಚಾಂಪಿಯನ್​ಶಿಪ್ ಟ್ರೋಫಿ ಕೂಡ ಕೈ ತಪ್ಪಿದೆ. ಹೀಗಾಗಿ ಕೊಹ್ಲಿ ನಾಯಕತ್ವ ಮತ್ತೊಮ್ಮೆ ಚರ್ಚಾ ವಿಷಯವಾಗಿದೆ.

    ಈ ಬಗ್ಗೆ ಮಾತನಾಡಿರುವ ಟೀಮ್ ಇಂಡಿಯಾ ಮಾಜಿ ಆಟಗಾರ ಸುರೇಶ್ ರೈನಾ, ವಿರಾಟ್ ಕೊಹ್ಲಿ ವಿಶ್ವದ ನಂಬರ್ 1 ಬ್ಯಾಟ್ಸ್​ಮನ್ ಎಂಬುದರಲ್ಲಿ ಯಾವುದೇ ಡೌಟ್ ಇಲ್ಲ. ಹಾಗೆಯೇ ನಂಬರ್ 1 ಕ್ಯಾಪ್ಟನ್ ಕೂಡ. ಇದಕ್ಕೆ ದಾಖಲೆಗಳೇ ಸಾಕ್ಷಿ. ಇದೀಗ ಎಲ್ಲರೂ ವಿರಾಟ್ ಕೊಹ್ಲಿ ಐಸಿಸಿ ಟ್ರೋಫಿ ಗೆಲ್ಲದಿರುವ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಅವರು ಐಪಿಎಲ್ ಟ್ರೋಫಿ ಕೂಡ ಗೆದ್ದಿಲ್ಲ. ಹೀಗಾಗಿ ಅವರಿಗೆ ಒಂದಿಷ್ಟು ಸಮಯವಕಾಶ ನೀಡಬೇಕಾಗಿದೆ ಎಂದಿದ್ದಾರೆ.

    ಏಕೆಂದರೆ ಮುಂದಿನ ದಿನಗಳಲ್ಲಿ 2-3 ವಿಶ್ವಕಪ್ ಬರಲಿದೆ. ಅದರಲ್ಲೂ ಟಿ20 ವಿಶ್ವಕಪ್ ಹಾಗೂ ಏಕದಿನ ವಿಶ್ವಕಪ್ ನಡೆಯಲಿದೆ. ಒಂದು ತಂಡವು ಪ್ರತಿಷ್ಠಿತ ಟೂರ್ನಿಯಲ್ಲಿ ಫೈನಲ್ ತಲುಪುವುದು ಅಂದುಕೊಂಡಷ್ಟು ಸುಲಭವಲ್ಲ. ಕೆಲವೊಮ್ಮೆ ಅಂತಿಮಘಟ್ಟದಲ್ಲಿ ತಪ್ಪುಗಳಾಗುತ್ತವೆ ಎಂದು ಸುರೇಶ್ ರೈನಾ ತಿಳಿಸಿದ್ದಾರೆ. ಈ ಮೂಲಕ ಮುಂದಿನ ವಿಶ್ವಕಪ್​ವರೆಗೂ ನಾಯಕನಾಗಿ ವಿರಾಟ್ ಕೊಹ್ಲಿಗೆ ಅವಕಾಶ ನೀಡುವುದು ಉತ್ತಮ ಎಂದು ಪರೋಕ್ಷವಾಗಿ ಸುರೇಶ್ ರೈನಾ ಅಭಿಪ್ರಾಯಪಟ್ಟಿದ್ದಾರೆ.

    (ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು.)

    First published: