• ಹೋಂ
  • »
  • ನ್ಯೂಸ್
  • »
  • ಬ್ಯುಸಿನೆಸ್
  • »
  • Budget 2023: ಬಡವರಿಗೆ ಸರ್ಕಾರದ ಗಿಫ್ಟ್​, ಉಚಿತ ಆಹಾರ ಧಾನ್ಯಕ್ಕೆ 2 ಲಕ್ಷ ಕೋಟಿ ಮೀಸಲು, ಸಂಪೂರ್ಣ ವೆಚ್ಚ ಇನ್ನು ಕೇಂದ್ರದ್ದೇ!

Budget 2023: ಬಡವರಿಗೆ ಸರ್ಕಾರದ ಗಿಫ್ಟ್​, ಉಚಿತ ಆಹಾರ ಧಾನ್ಯಕ್ಕೆ 2 ಲಕ್ಷ ಕೋಟಿ ಮೀಸಲು, ಸಂಪೂರ್ಣ ವೆಚ್ಚ ಇನ್ನು ಕೇಂದ್ರದ್ದೇ!

hಣಕಾಸು ಸಚಿವೆ, ನಿರ್ಮಲಾ ಸೀತಾರಾಮನ್

hಣಕಾಸು ಸಚಿವೆ, ನಿರ್ಮಲಾ ಸೀತಾರಾಮನ್

Budget 2023 Announcements: ಎಲ್ಲಾ ಅಂತ್ಯೋದಯ ಮತ್ತು ಆದ್ಯತಾ ಕುಟುಂಬಗಳಿಗೆ ಒಂದು ವರ್ಷದವರೆಗೆ ಉಚಿತ ಆಹಾರ ಧಾನ್ಯಗಳನ್ನು ನೀಡಲು ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಸುಮಾರು ಎರಡು ಲಕ್ಷ ಕೋಟಿ ರೂಪಾಯಿಗಳ ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರ ಭರಿಸಲಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಮುಂದೆ ಓದಿ ...
  • News18 Kannada
  • 5-MIN READ
  • Last Updated :
  • New Delhi, India
  • Share this:

ನವದೆಹಲಿ(ಫೆ.01): ಮೋದಿ ಸರ್ಕಾರವು ದೇಶದ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ಒದಗಿಸಲು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಗೆ 2 ಲಕ್ಷ ಕೋಟಿ ರೂ. ಘೋಷಿಸಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) 2023 ರ ಬಜೆಟ್‌ನಲ್ಲಿ (Budget 2023) ಈ ಘೋಷಣೆ ಮಾಡಿದ್ದಾರೆ. ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ 80 ಕೋಟಿ ಬಡವರಿಗೆ ಆಹಾರ ಧಾನ್ಯಗಳನ್ನು ನೀಡುವ ಮೂಲಕ ಯಾರೂ ಹಸಿವಿನಿಂದ ಬಳಲದಂತಿರುವುದನ್ನು ನಾವು ಖಚಿತಪಡಿಸಿದ್ದೇವೆ ಎಂದು ಅವರು ಹೇಳಿದರು.


ಎಲ್ಲಾ ಅಂತ್ಯೋದಯ ಮತ್ತು ಆದ್ಯತಾ ಕುಟುಂಬಗಳಿಗೆ ಒಂದು ವರ್ಷದವರೆಗೆ ಉಚಿತ ಆಹಾರ ಧಾನ್ಯಗಳನ್ನು ನೀಡಲು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಸುಮಾರು 2 ಲಕ್ಷ ಕೋಟಿ ರೂಪಾಯಿಗಳ ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರ ಭರಿಸುತ್ತಿದೆ ಎಂದು ಹಣಕಾಸು ಸಚಿವರು ಮಾಹಿತಿ ನೀಡಿದರು.


ಇದನ್ನೂ ಓದಿ: Budget 2023: ಜನ ಸಾಮಾನ್ಯರಿಗೆ ಬಿಗ್ ಶಾಕ್! ಬಜೆಟ್‌ ನಂತರ ಇವುಗಳ ಬೆಲೆ ಹೆಚ್ಚಾಗುತ್ತಾ?


ಕೇಂದ್ರ ಸರ್ಕಾರದ ಸಮಗ್ರ ಆಹಾರ ಭದ್ರತಾ ಯೋಜನೆಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY) ಎಂದು ಹೆಸರಿಸಲಾಗಿದೆ, ಇದರ ಅಡಿಯಲ್ಲಿ ಜನವರಿ 1 ರಿಂದ 80 ಕೋಟಿಗೂ ಹೆಚ್ಚು ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ನೀಡಲಾಗುತ್ತಿದೆ ಎಂದು ವಿವರಿಸಿದ್ದಾರೆ. ಪಿಎಂಜಿಕೆಎವೈ ಎಂದು ಕರೆಯಲ್ಪಡುವ ಮತ್ತೊಂದು ಯೋಜನೆಯಡಿ ಬಡ ಜನರಿಗೆ ಉಚಿತ ಮಾಸಿಕ ಐದು ಕಿಲೋಗ್ರಾಂಗಳಷ್ಟು ಆಹಾರ ಧಾನ್ಯಗಳ ವಿತರಣೆಯನ್ನು ಸರ್ಕಾರ ಸ್ಥಗಿತಗೊಳಿಸಿದ್ದಕ್ಕಾಗಿ ಪ್ರತಿಪಕ್ಷಗಳ ಟೀಕೆಗಳ ನಡುವೆ ಈ ಕ್ರಮವು ತೆಗೆದುಕೊಳ್ಳಲಾಗಿದೆ.


ಬಜೆಟ್​ ಸಂಬಂಧಿತ ಕ್ಷಣ ಕ್ಷಣದ ಮಾಹಿತಿಯ ಲೈವ್​ ಬ್ಲಾಗ್​: ನಿರ್ಮಲಾ ಆಯವ್ಯಯದ ಮೇಲೆ ಎಲ್ಲರ ಕಣ್ಣು




ಕೊರೊನಾ ವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಏಪ್ರಿಲ್ 2020 ರಲ್ಲಿ ಪ್ರಾರಂಭಿಸಲಾದ ಈ ಯೋಜನೆಯು ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೊನೆಗೊಂಡಿತು. ಕಳೆದ ತಿಂಗಳು, ಪಿಎಂಜಿಕೆಎವೈ ಅನ್ನು ಅಸ್ತಿತ್ವದಲ್ಲಿರುವ ಎರಡು ಆಹಾರ ಸಬ್ಸಿಡಿ ಯೋಜನೆಗಳಿಗೆ ಒಳಪಡಿಸಲು ಸರ್ಕಾರ ನಿರ್ಧರಿಸಿತು ಮತ್ತು ಇದರ ಪರಿಣಾಮವಾಗಿ, ಹೊಸ ಸಮಗ್ರ ಆಹಾರ ಭದ್ರತಾ ಯೋಜನೆ ಜಾರಿಗೆ ಬಂತು.

Published by:Precilla Olivia Dias
First published: