Electric Vehicle Fire: ಎಲೆಕ್ಟ್ರಿಕ್ ವಾಹನಗಳಿಗೆ ಬೆಂಕಿ ಬೀಳುವುದು ಸಾಮಾನ್ಯ! ಶಾಕಿಂಗ್ ಹೇಳಿಕೆ ನೀಡಿದ ಓಲಾ ಸಿಇಒ
ಓಲಾ ಎಲೆಕ್ಟ್ರಿಕ್ ಸಿಇಒ ಭವಿಶ್ ಅಗರ್ವಾಲ್ ಟ್ವೀಟ್ಗೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಬಹುತೇಕರು ಎಲೆಕ್ಟ್ರಿಕ್ ವಾಹನ ಬಿಡುಗಡೆಗೂ ಮುನ್ನ ಬೆಂಕಿ ಬೀಳುವುದಿಲ್ಲ ಎಂಬುದನ್ನು ಖಚಿತಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೇ ಇನ್ನು ಕೆಲವರು ವಾಹನ ಸವಾರರ ಜೀವದ ಬಗ್ಗೆಯೂ ಪ್ರಶ್ನಿಸಿದ್ದಾರೆ.
ಇತ್ತೀಚಿಗೆ ಹಲವು ಎಲೆಕ್ಟ್ರಿಕ್ ವಾಹನಗಳಿಗೆ ಬೆಂಕಿ ತಗಲುತ್ತಿರುವ ಘಟನೆಗಳು ವರದಿಯಾಗುತ್ತಲೇ ಇವೆ. ಎಲೆಕ್ಟ್ರಿಕ್ ಸ್ಕೂಟರ್ ಬೆಂಕಿಯ ಘಟನೆಗಳ ಕುರಿತು Ola ಎಲೆಕ್ಟ್ರಿಕ್ ಕೊಂಚ ಹಿನ್ನೆಡೆ ಅನುಭವಿಸುತ್ತಿದೆ. ಇದರ ನಡುವೆಯೇ ಓಲಾ ಎಲೆಕ್ಟ್ರಿಕ್ ಸಿಇಒ ಭವಿಶ್ ಅಗರ್ವಾಲ್ (Bhavish Aggarwal) ಗುರುವಾರ ಎಲೆಕ್ಟ್ರಿಕ್ ವಾಹನಗಳಿಗೆ ಬೆಂಕಿ (Electric Vehicle Fire) ತಗಲುವುದು ಜಾಗತಿಕವಾಗಿ ಸಾಮಾನ್ಯ ವಿಷಯವಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಇದು ಅಂತರರಾಷ್ಟ್ರೀಯ ಕಂಪನಿಗಳು ತಯಾರಿಸಿದ ವಾಹನಗಳಲ್ಲಿಯೂ ಸಂಭವಿಸುತ್ತದೆ ಎಂದು ತಿಳಿಸಿದ್ದಾರೆ. ಟಾಟಾ ನೆಕ್ಸಾನ್ ಕಾರಿಗೆ ಬೆಂಕಿ ತಗಲಿರುವ ವಿಡಿಯೋ ಹಂಚಿಕೊಂಡಿರುವ ಸಿಇಒ ಭವಿಶ್ ಅಗರ್ವಾಲ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಟ್ವಿಟರ್ನಲ್ಲಿ ಅಗರ್ವಾಲ್ ಅವರು ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿಗೆ ಬೆಂಕಿ ತಗುಲಿರುವ ವಿಡಿಯೋ ಕ್ಲಿಪ್ ಅನ್ನು ಹಂಚಿಕೊಂಡಿದ್ದಾರೆ. ಅಲ್ಲದೇ ಜಗತ್ತಿನ ಎಲ್ಲ ದೇಶಗಳಲ್ಲಿಯೂ ಎಲೆಕ್ಟ್ರಿಕ್ ವಾಹನಗಳಿಗೆ ಬೆಂಕಿ ತಗಲುವುದು ಸಾಮಾನ್ಯ ವಿಷಯವಾಗಿದೆ. ಯಾವುದೇ ಕಂಪನಿ ತಯಾರಿಸುವ ಎಲೆಕ್ಟ್ರಿಕ್ ವಾಹನಗಳಿಗೂ ಬೆಂಕಿ ತಗಲುವುದಿಲ್ಲ ಎಂದು ಖಚಿತವಾಗಿ ಹೇಳಲು ಆಗುವುದಿಲ್ಲ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.
ಓಲಾ ಎಲೆಕ್ಟ್ರಿಕ್ ಸಿಇಒ ಭವಿಶ್ ಅಗರ್ವಾಲ್ ಟ್ವೀಟ್ಗೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಬಹುತೇಕರು ಎಲೆಕ್ಟ್ರಿಕ್ ವಾಹನ ಬಿಡುಗಡೆಗೂ ಮುನ್ನ ಬೆಂಕಿ ಬೀಳುವುದಿಲ್ಲ ಎಂಬುದನ್ನು ಖಚಿತಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೇ ಇನ್ನು ಕೆಲವರು ವಾಹನ ಸವಾರರ ಜೀವದ ಬಗ್ಗೆಯೂ ಪ್ರಶ್ನಿಸಿದ್ದಾರೆ.
ಎಲೆಕ್ಟ್ರಿಕ್ ಕಾರಿಗೂ ಬೆಂಕಿ ಕಳೆದೆರಡು ತಿಂಗಳುಗಳಲ್ಲಿ, ಭಾರತದಲ್ಲಿ ಹಲವಾರು ಎಲೆಕ್ಟ್ರಿಕ್ ಸ್ಕೂಟರ್ಗಳು (Electric Scooter Fire) ಬೆಂಕಿಗೆ ಆಹುತಿಯಾಗಿವೆ. ಆದರೆ ಈಗ ಮಹಾರಾಷ್ಟ್ರದಲ್ಲಿ ಎಲೆಕ್ಟ್ರಿಕ್ ಕಾರಿಗೆ (Electric Car Fire) ಬೆಂಕಿ ಹೊತ್ತಿಕೊಂಡಿರುವುದು ಬೆಳಕಿಗೆ ಬಂದಿದೆ. ಮುಂಬೈನ ವೆಸ್ಟ್ ವಸಾಯಿ ಪ್ರದೇಶದ ರೆಸ್ಟೋರೆಂಟ್ನ ಹೊರಗೆ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಬೆಂಕಿಗೆ ಆಹುತಿಯಾಗಿರುವ ವಿಡಿಯೋ (Tata Nexon EV Fire Video) ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಸದ್ಯಕ್ಕೆ ಈ ನಿರ್ದಿಷ್ಟ ಘಟನೆಗೆ ಕಾರಣ ತಿಳಿದುಬಂದಿಲ್ಲ. ಆದರೆ ಹೇಳಿಕೆಯೊಂದರಲ್ಲಿ, ಈ ವಿಷಯದಲ್ಲಿ ವಿವರವಾದ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಟಾಟಾ ಮೋಟಾರ್ಸ್ ಭರವಸೆ ನೀಡಿದೆ.
ಪ್ರಾಣಹಾನಿ ಆಗಿಲ್ಲ ವೈರಲ್ ಆಗಿರುವ ವಿಡಿಯೋ ಕ್ಲಿಪ್ನಲ್ಲಿ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸ್ ಅಧಿಕಾರಿಗಳು ಹೆಣಗಾಡುತ್ತಿರುವುದನ್ನು ಕಾಣಬಹುದಾಗಿದೆ. ಘಟನೆಯಿಂದ ಯಾವುದೇ ಪ್ರಾಣಹಾನಿ ಅಥವಾ ಗಾಯದ ಬಗ್ಗೆ ವರದಿಯಾಗಿಲ್ಲ.
ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ ಟಾಟಾ
ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಟಾಟಾ ಮೋಟಾರ್ಸ್ ಹೇಳಿಕೆ ನೀಡಿದೆ. "ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿಗೆ ಬೆಂಕಿ ಹೊತ್ತಿಕೊಂಡಿರುವ ಕುರಿತು ವಿಸ್ತೃತ ತನಿಖೆಯನ್ನು ನಡೆಸಲಾಗುತ್ತಿದೆ. ನಮ್ಮ ಸಂಪೂರ್ಣ ತನಿಖೆಯ ನಂತರ ನಾವು ವಿವರವಾದ ಪ್ರತಿಕ್ರಿಯೆಯನ್ನು ಹಂಚಿಕೊಳ್ಳುತ್ತೇವೆ ”ಎಂದು ಕಂಪನಿಯು ಟ್ವಿಟರ್ ಪೋಸ್ಟ್ನಲ್ಲಿ ತಿಳಿಸಿದೆ.
Published by:guruganesh bhat
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ