Gold and Silver Price: ಶಿವರಾತ್ರಿ ಸಂದರ್ಭದಲ್ಲೇ ಇಳಿಕೆಯಾದ ಬಂಗಾರದ ಬೆಲೆ! ಇಂದಿನ ದರ ಎಷ್ಟು ಗೊತ್ತಾ?

ನೀವು ಚಿನ್ನ ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ, ಹಾಗಿದ್ರೆ ಶಿವರಾತ್ರಿಯ ಸಂದರ್ಭದಲ್ಲೇ ಈ ಕೆಲಸ ಮಾಡಿ. ಯಾಕೆಂದ್ರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಕೊಂಚ ಇಳಿದಿದೆ.

ಚಿನ್ನಾಭರಣ

ಚಿನ್ನಾಭರಣ

  • Share this:
    Gold And Silver Price, March 2nd, 2022: ಇತ್ತೀಚೆಗೆ ಚಿನಿವಾರ ಪೇಟೆಯಲ್ಲಿ ಪ್ರತಿದಿನ ಬಂಗಾರದ (Gold) ಮೌಲ್ಯದಲ್ಲಿ ಭಾರಿ ವ್ಯತ್ಯಾಸವಾಗುತ್ತಿದೆ. ಇದೇ ರೀತಿ ದೇಶದಲ್ಲಿಂದು ಚಿನ್ನದ ಬೆಲೆಯಲ್ಲಿ (Gold Price) ಇಳಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಸಹ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ (22 carat gold) ಬೆಲೆ 47,000 ರೂ. ಇತ್ತು. ಇಂದು 300 ರೂ. ಇಳಿಕೆಯಾಗಿ 46,700 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ (24 carat gold) ಬೆಲೆ ನಿನ್ನೆ 51,280 ರೂ. ಇತ್ತು. ಇಂದು 330 ರೂ. ಕಡಿಮೆಯಾಗಿ 50,950 ರೂ. ಆಗಿದೆ. ಇನ್ನು, ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರ (Silver Price) ದರ ಎಷ್ಟಿದೆ ಎಂಬುದನ್ನು ವಿವರವಾಗಿ ನೋಡೋಣ..

    ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?

    ನೀವು ಚಿನ್ನ ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ, ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

    ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) 51,280 ರೂ. ಇತ್ತು. ಇಂದು 330 ರೂ. ಇಳಿಕೆಯಾಗಿ 50,950 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ  47,000 ರೂ. ಇತ್ತು. ಇಂದು 300 ರೂ. ಇಳಿಕೆಯಾಗಿ 46,700 ರೂ.  ಆಗಿದೆ.

    ರಾಜ್ಯದ ಇತರೇ ನಗರಗಳಲ್ಲಿ ಎಷ್ಟಿದೆ ಬಂಗಾರದ ಬೆಲೆ?

    ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ಮಂಗಳೂರಿನಲ್ಲೂ ಇದೇ ಬೆಲೆ ಇದೆ. ದೇಶದಲ್ಲಿ ಆಭರಣ ಪ್ರಿಯರ ಸಂಖ್ಯೆಗೇನೂ ಕಡಿಮೆ ಇಲ್ಲ. ಈ ಹಿನ್ನೆಲೆ ಚಿನ್ನ ಖರೀದಿ, ವಹಿವಾಟು ಹೆಚ್ಚು ನಡೆಯುತ್ತಲೇ ಇರುತ್ತದೆ. ಇನ್ನು ಹಲವರು ಆಪತ್ಕಾಲದಲ್ಲಿ ಚಿನ್ನ ಅಡ ಇಡಲು ಅಥವಾ ಮಾರಲು ಬೇಕಾಗುತ್ತದೆಂದು ಸಹ ಅದರ ಮೇಲೆ ಹೂಡಿಕೆ ಮಾಡುತ್ತಾರೆ. ಚಿನ್ನವನ್ನು ಬಾಂಡ್‌ ರೂಪದಲ್ಲೂ ತೆಗೆದುಕೊಳ್ಳಲಾಗುತ್ತದೆ.

    ಇದನ್ನೂ ಓದಿ: Bank​ ಗ್ರಾಹಕರಿಗೆ ಭರ್ಜರಿ ಸಿಹಿ ಸುದ್ದಿ: FD ಮೇಲಿನ ಬಡ್ಡಿ ದರ ಹೆಚ್ಚಳ

    ದೇಶದ ಇತರೇ ನಗರಗಳಲ್ಲಿ ಚಿನ್ನದ ರೇಟ್ ಎಷ್ಟಿದೆ?

    ಇನ್ನು, ದೇಶದ ಇತರೆ ನಗರಗಳಾದ ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆ, ಕೊಯಮತ್ತೂರು, ಮಧುರೈನಲ್ಲಿ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 51 ಸಾವಿರದಿಂದ 52 ಸಾವಿರದ ಆಸುಪಾಸಿನಲ್ಲೇ ಇದೆ.

    ಮಹಾನಗರಗಳಲ್ಲಿ ಬಂಗಾರಕ್ಕೆ ಬೆಲೆ ಎಷ್ಟು?

    ಈ ಮಧ್ಯೆ, ದೇಶದ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈನಲ್ಲಿ 52,230 ರೂ. ಇದ್ದರೆ, ರಾಷ್ಟ್ರ ರಾಜಧಾನಿ ದೆಹಲಿ, ಮುಂಬೈ ಹಾಗೂ ಕೋಲ್ಕತ್ತದಲ್ಲಿ 24 ಕ್ಯಾರೆಟ್‌ ಬಂಗಾರದ ಬೆಲೆ 50,950 ರೂ. ಆಗಿದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಶಿಕ್‌ನಲ್ಲೂ 24 ಕ್ಯಾರೆಟ್‌ ಚಿನ್ನದ ಬೆಲೆ 51 ಸಾವಿರದ ಆಸುಪಾಸಿನಲ್ಲೇ ಇದೆ.

    ಇಂದು ಬೆಳ್ಳಿ ದರ ಎಷ್ಟಿದೆ?

    ದೇಶದಲ್ಲಿಂದು ಚಿನ್ನದ ಬೆಲೆ ಇಳಿಕೆಯಾದಂತೆ ಬೆಳ್ಳಿ ದರ (Silver Rate) ಸಹ ಕಡಿಮೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 65,200 ರೂ. ಇತ್ತು. ಇಂದು 200 ರೂ. ಕಡಿಮೆಯಾಗಿ 65,000 ರೂ. ಆಗಿದೆ.

    ಆದರೆ, ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ 70,000 ರೂ. ಆಗಿದೆ. ಇದೇ ರೀತಿ ಚೆನ್ನೈ, ಹೈದರಾಬಾದ್, ಕೇರಳ, ವಿಜಯವಾಡ, ವಿಶಾಖಪಟ್ಟಣಂ, ಕೊಯಮತ್ತೂರು, ಮಧುರೈನಲ್ಲಿ ಸಹ 1 ಕೆಜಿ ಬೆಳ್ಳಿಯ ಬೆಲೆ 70,000 ರೂ. ಆಗಿದೆ.

    ಇದನ್ನೂ ಓದಿ: TAX ಸೇರಿದಂತೆ March ತಿಂಗಳಲ್ಲಿ ಈ 5 ಕೆಲಸಗಳನ್ನು ಮಾಡಲೇಬೇಕು.. ಹಣದ ವಿಷ್ಯ ತಡ ಮಾಡಬೇಡಿ

    ಮಹಾನಗರಗಳಲ್ಲಿ ಬೆಳ್ಳಿಯ ಬೆಲೆ ಎಷ್ಟಿದೆ?

    ಇನ್ನು, ಮೆಟ್ರೋಪಾಲಿಟನ್‌ ನಗರಗಳಾದ ದೆಹಲಿ, ಮುಂಬೈ ಹಾಗೂ ಕೋಲ್ಕತ್ತದಲ್ಲಿ 65,000  ರೂ. ಆಗಿದೆ. ಒಟ್ಟಾರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಮುಂದುವರಿದಿದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ.

    ಸೂಚನೆ: ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಸೇರಿ ಹಲವು ಕಾರಣಗಳಿಂದ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ಷೇರು ಮಾರುಕಟ್ಟೆಯ ಪ್ರಭಾವದಿಂದಲೂ ಚಿನ್ನದ ಬೆಲೆ ಏರಿಕೆ - ಇಳಿಕೆಯಾಗಬಹುದು.
    Published by:Annappa Achari
    First published: