FM Nirmala Sitharaman Announcement: ಸಿಮೆಂಟ್ ಬೆಲೆ ಇಳಿಕೆಗೆ ಕ್ರಮ, ರೈತರಿಗೆ 1.10 ಲಕ್ಷ ಕೋಟಿ ಹೆಚ್ಚುವರಿ ಅನುದಾನ ಘೋಷಣೆ
ದೇಶದಲ್ಲಿ ಸಿಮೆಂಟ್ ಲಭ್ಯತೆಯನ್ನು ಸುಧಾರಿಸಲು ಮತ್ತು ಉತ್ತಮ ಸಾಗಣೆ ವ್ಯವಸ್ಥೆಯ ಮೂಲಕ ಸಿಮೆಂಟ್ ಬೆಲೆಯನ್ನು ಕಡಿಮೆ ಮಾಡಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಸೀತಾರಾಮನ್ ತಮ್ಮ ಘೋಷಣೆಯಲ್ಲಿ ಮಾಹಿತಿ ನೀಡಿದ್ದಾರೆ.
ದೆಹಲಿ: ಕೇಂದ್ರ ಸರ್ಕಾರ ಬಜೆಟ್ನಲ್ಲಿ ₹ 1.05 ಲಕ್ಷ ಕೋಟಿ ಅನುದಾನವನ್ನು ರಸಗೊಬ್ಬರ ಸಬ್ಸಿಡಿಯನ್ನಾಗಿ (Fertilizer Subsidy ) ಘೋಷಣೆ ಮಾಡಿದೆ. ಇದರ ಜೊತೆಗೆ ಭಾರತದ ರೈತರಿಗೆ ಮತ್ತಷ್ಟು ಸಹಾಯ ಮಾಡಲು ಹೆಚ್ಚುವರಿ ₹ 1.10 ಲಕ್ಷ ಕೋಟಿ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Finance Minister Nirmala Sitharaman) ಘೋಷಣೆ ಮಾಡಿದ್ದಾರೆ. ಈಮೂಲಕ ದೇಶದ ರೈತರಿಗೆ ಒಳ್ಳೆಯ ಸುದ್ದಿ ನೀಡಿದ್ದಾರೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್. ದೇಶದಲ್ಲಿ ಸಿಮೆಂಟ್ ಲಭ್ಯತೆಯನ್ನು ಸುಧಾರಿಸಲು ಮತ್ತು ಉತ್ತಮ ಸಾಗಣೆ ವ್ಯವಸ್ಥೆಯ ಮೂಲಕ ಸಿಮೆಂಟ್ ಬೆಲೆಯನ್ನು (Cement Price) ಕಡಿಮೆ ಮಾಡಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಸೀತಾರಾಮನ್ ತಮ್ಮ ಘೋಷಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಕೆಲವು ಸಂದರ್ಭಗಳಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳಿಗೆ ಕಚ್ಚಾ ವಸ್ತುಗಳು ಮತ್ತು ಮಧ್ಯವರ್ತಿಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಸರ್ಕಾರ ಕಡಿಮೆ ಮಾಡುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಸುಮಾರು 9 ಕೋಟಿ ಫಲಾನುಭವಿಗಳಿಗೆ ಪ್ರತಿ ಸಿಲಿಂಡರ್ಗೆ (ಒಟ್ಟು 12 ಸಿಲಿಂಡರ್ಗಳವರೆಗೆ) 200 ರೂಪಾಯಿ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಶನಿವಾರ ಘೋಷಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಈ ವರ್ಷ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಗ್ಯಾಸ್ ಸಿಲಿಂಡರ್ಗೆ ₹ 200 ಸಬ್ಸಿಡಿ ನೀಡುತ್ತೇವೆ. ಇದು ನಮ್ಮ ದೇಶದ ಪ್ರತಿ ಮನೆಯ ತಾಯಂದಿರಿಗೆ, ಸಹೋದರಿಯರಿಗೆ ಸಹಾಯ ಮಾಡುತ್ತದೆ ಎಂದು ಘೋಷಣೆ ಮಾಡಿದ್ದಾರೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಸುಮಾರು 9 ಕೋಟಿ ಫಲಾನುಭವಿಗಳಿಗೆ ಪ್ರತಿ ಸಿಲೆಂಡರ್ಗೆ 200 ರೂಪಾಯಿ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಶನಿವಾರ ಘೋಷಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಈ ವರ್ಷ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಗ್ಯಾಸ್ ಸಿಲಿಂಡರ್ಗೆ ₹ 200 ಸಬ್ಸಿಡಿ ನೀಡುತ್ತೇವೆ. ಇದು ನಮ್ಮ ದೇಶದ ಪ್ರತಿ ಮನೆಯ ತಾಯಂದಿರಿಗೆ, ಸಹೋದರಿಯರಿಗೆ ಸಹಾಯ ಮಾಡುತ್ತದೆ ಎಂದು ಘೋಷಣೆ ಮಾಡಿದ್ದಾರೆ.
ನಾವು ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಲೀಟರ್ಗೆ ₹ 8 ಮತ್ತು ಡೀಸೆಲ್ಗೆ ₹ 6 ರಷ್ಟು ಕಡಿಮೆ ಮಾಡುತ್ತಿದ್ದೇವೆ. ಇದರಿಂದ ಪೆಟ್ರೋಲ್ ದರ ಲೀಟರ್ಗೆ ₹9.5 ಮತ್ತು ಡೀಸೆಲ್ಗೆ ₹7 ಇಳಿಕೆ ಆಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
Published by:guruganesh bhat
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ