Today's Gold-Silver Price: 1 ಗ್ರಾಂ ಚಿನ್ನದ ಬೆಲೆಯಲ್ಲಿ ಏರಿಕೆ; ಇಂದು ಬೆಳ್ಳಿಯ ದರ ಎಷ್ಟಾಗಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,700 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ 47,700ರೂ.  , 47,650 ರೂ. , 47,650 ರೂ. ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,650 ರೂ. ಆಗಿದೆ.

ಚಿನ್ನಾಭರಣ

ಚಿನ್ನಾಭರಣ

  • Share this:
    ಹಳದಿ ಲೋಹ ಚಿನ್ನದ ಬೆಲೆಯಲ್ಲಿ  (Gold Price) ವ್ಯತ್ಯಾಸ ದಿನದಿಂದ ದಿನಕ್ಕೆ ಸಹಜ. ಪ್ರತಿದಿನ ಭಾರಿ ಮಟ್ಟದಲ್ಲಿ ಅಥವಾ ಸ್ವಲ್ಪ ದುಬಾರಿ ಮತ್ತು ಅಗ್ಗ ಆಗುತ್ತಲೇ ಇರುತ್ತದೆ. ಇಂದು ಚಿನ್ನದ ದರ (Gold Rate) ಮಾರುಕಟ್ಟೆಯಲ್ಲಿ ನಿನ್ನೆಗೆ ಹೋಲಿಸಿದರೆ ಸ್ವಲ್ಪ ಮಟ್ಟಿಗೆ ಬೆಲೆ ಹೆಚ್ಚಾಗಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 4,755 ರೂಪಾಯಿ ಇದ್ದದ್ದು, ಇಂದು 4, 765 ರೂಪಾಯಿಗೆ ಏರಿಕೆಯಾಗಿದೆ. ಕಳೆದ ಕೆಲ ಸಮಯದಿಂದ ಚಿನ್ನದ ಬೆಲೆಗಳಲ್ಲಿ ಅಲ್ಪ ಪ್ರಮಾಣದ ಏರಿಳಿತಗಳು ಆಗುತ್ತಲೇ ಇದ್ದು ಇದಕ್ಕೆ ಪ್ರಮುಖ ಕಾರಣ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ (Global Market) ಉಂಟಾಗುತ್ತಿರುವ ಮಾರುಕಟ್ಟೆ ಸಂಬಂಧಿತ ವಿದ್ಯಮಾನಗಳು ಹಾಗೂ ಕಚ್ಚಾ ತೈಲದಲ್ಲಾಗಿರುವ ಬೆಲೆ ಏರಿಕೆ ಹಾಗೂ ಇತರೆ ಜಾಗತಿಕ ಅಂಶಗಳೇ ಆಗಿವೆ.

    ಭಾರತೀಯರು ಬಂಗಾರ ಪ್ರಿಯರು

    ಇನ್ನೂ, ಈ ಬಂಗಾರದ ಮೌಲ್ಯ ಜಾಗತಿಕ ಮಾರುಕಟ್ಟೆಯಲ್ಲೂ ಅಪಾರವಾಗಿದೆ. ಸಾಕಷ್ಟು ದೇಶಗಳು ವಿದೇಶಿ ವಿನಿಮಯ ರೂಪದಲ್ಲಿ ಚಿನ್ನದ ಸಂಗ್ರಹ ಹೊಂದಿರುವುದು ಎಲ್ಲರಿಗೂ ಗೊತ್ತೆ ಇದೆ, ಏಕೆಂದರೆ ಚಿನ್ನ ಎಲ್ಲ ದೇಶಗಳಲ್ಲೂ ಮಾನ್ಯತೆ ಪಡೆದಿದ್ದು ಎಲ್ಲರಿಂದಲೂ ಸ್ವೀಕರಿಸಲ್ಪಡುತ್ತದೆ. ಅದರಲ್ಲೂ ವಿಶೇಷವಾಗಿ ಭಾರತ ದೇಶ ಎಂದರೆ ಕೇಳಬೇಕೆ? ಮೊದಲಿನಿಂದಲೂ ಭಾರತದಲ್ಲಿ ಬಂಗಾರಕ್ಕಿರುವ ವಿಶೇಷತೆಯೇ ಬೇರೆ. ಮದುವೆಯಿಂದ ಹಿಡಿದು ಅನೇಕ ಇತರೆ ಶುಭ ಕಾರ್ಯಗಳಲ್ಲಿ ಭಾರತೀಯರು ಬಂಗಾರವನ್ನು ಯಥೇಚ್ಚವಾಗಿ ಬಳಸುತ್ತಾರೆ. ಅದರಲ್ಲೂ ನವಜಾತ ಶಿಶು ಇರಲಿ ಅಥವಾ ಹೊಸದಾಗಿ ಮದುವೆ ಮಾಡಿಕೊಂಡ ದಂಪತಿಗಳಿರಲಿ ಅವರಲ್ಲಿ ಬಂಗಾರದ ಯಾವುದಾದರೂ ವಸ್ತು ಅಥವಾ ಸಿಂಗಾರದ ಸಾಮಾನು ಇದ್ದೆ ಇರುತ್ತದೆ.

    ಬಂಗಾರಕ್ಕೆ ಇರುವ ಬೇಡಿಕೆ ಅಷ್ಟಿಷ್ಟಲ್ಲ

    ಕಳೆದ ಹಲವು ವರ್ಷಗಳಿಂದ ಚಿನ್ನವು ಹಣದುಬ್ಬರದ ವಿರುದ್ಧ ಒಂದು ರಕ್ಷಣಾತ್ಮಕ ಬೇಲಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಬಹುದು. ಹೂಡಿಕೆದಾರರು ಚಿನ್ನವನ್ನು ಪ್ರಮುಖ ಹೂಡಿಕೆಯ ವಸ್ತುವನ್ನಾಗಿ ನೋಡುತ್ತಿದ್ದಾರೆ. ಹಾಗಾಗಿ, ಚಿನ್ನವು ಮಾರುಕಟ್ಟೆಯಲ್ಲಿ ಒಂದು ಉತ್ತಮ ಹೂಡಿಕೆಯ ವಸ್ತುವಾಗಿ ಗುರುತಿಸಿಕೊಂಡಿದೆ. ಇಂದು ಚಿನ್ನದ ಹೂಡಿಕೆ ಬಹು ಸುರಕ್ಷಿತ ಹೂಡಿಕೆ ಎಂದೇ ಹಲವು ತಜ್ಞರು ಹೇಳುತ್ತಾರೆ. ಹಾಗಾಗಿ ಅದರಲ್ಲೂ ವಿಶೇಷವಾಗಿ ಭಾರತೀಯರಿಗೆ ಚಿನ್ನದ ಆಕರ್ಷಣೆ ತುಸು ಹೆಚ್ಚೇ ಎಂದು ಹೇಳಬಹುದು.

    ಇದನ್ನೂ ಓದಿ: Education Loan ತಗೋಳ್ಳೋಕೆ ಈ ಬ್ಯಾಂಕ್​ಗಳು ಬೆಸ್ಟ್​! ಬಡ್ಡಿ ದರ ಅಂತೂ ತುಂಬಾ ಕಡಿಮೆ

    ಆರ್ಥಿಕ ಸಂಕಷ್ಟದ ಕಾಲದಲ್ಲಿ ಕೈಯನ್ನು ಹಿಡಿಯುವ ನಂಬಿಕಸ್ಥ ಗೆಳೆಯ ಎಂದು ನಂಬಲಾಗಿರುವ ಚಿನ್ನವು ಈಗ ಹೂಡಿಕೆಯ ವಸ್ತುವಾಗಿಯೂ ಪ್ರಾಮುಖ್ಯತೆ ಪಡೆದಿದೆ. ಹಾಗಾಗಿ, ನಮ್ಮ ದೇಶದಲ್ಲಷ್ಟೆ ಅಲ್ಲ, ಜಗತ್ತಿನಾದ್ಯಂತ ಬಂಗಾರಕ್ಕೆ ಇರುವ ಬೇಡಿಕೆ ಅಷ್ಟಿಷ್ಟಲ್ಲ. ಭಾರತದ ಮಾರುಕಟ್ಟೆಗಳಲ್ಲಿ ಇಂದು ಚಿನ್ನ ಖರೀದಿ ಸಹಜ ಸಂಗತಿಯಾಗಿದ್ದು ದಿನದಲ್ಲೇ ಕೋಟ್ಯಂತರ ರೂಪಾಯಿಗಳಷ್ಟು ವ್ಯವಹಾರವನ್ನು ಈ ವ್ಯವಹಾರ ಹೊಂದಿದೆ. ನಿನ್ನೆಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದ್ದು ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 47,650 ಕ್ಕೆ ತಲುಪಿದೆ.

    ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರಗಳ ಕುರಿತು ಒಂದು ನೋಟ ಬೀರೋಣ.

    ಒಂದು ಗ್ರಾಂ (1GM)

    22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,765

    24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,198

    ಎಂಟು ಗ್ರಾಂ (8GM)

    22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 38,120

    24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,584

    ಹತ್ತು ಗ್ರಾಂ (10GM)

    22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 47,650

    24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,980

    ನೂರು ಗ್ರಾಂ (100GM)

    22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,76,500

    24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,19,800

    ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,700 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ 47,700ರೂ.  , 47,650 ರೂ. , 47,650 ರೂ. ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,650 ರೂ. ಆಗಿದೆ.

    ಬೆಳ್ಳಿ ದರ

    ಚಿನ್ನದಂತೆ ಸಾಮಾನ್ಯವಾಗಿ ಬೆಳ್ಳಿ ದರಗಳಲ್ಲೂ ವ್ಯತ್ಯಾಸ ಆಗುತ್ತಲೇ ಇರುತ್ತದೆ. ಚಿನ್ನದಂತೆ ಬೆಳ್ಳಿ ದರವೂ ಸಹ ಸ್ವಲ್ಪ ವ್ಯತ್ಯಾಸವಾಗಿದೆ.. ಇಂದು ಭಾರತದ ಮಾರುಕಟ್ಟೆಯಲ್ಲಿ ಒಂದು ಕೆಜಿಯ ಬೆಳ್ಳಿ ಬೆಲೆ 60,300 ರೂ. ಆಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನೆ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ.

    ಬೆಂಗಳೂರು ನಗರದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. 10gm, 100gm, 1000gm (1ಕೆಜಿ) ಬೆಳ್ಳಿ ದರಗಳು ಕ್ರಮವಾಗಿ ರೂ. 660, ರೂ. 6,600 ಹಾಗೂ ರೂ. 66,000 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 66,000 ಆಗಿದ್ದರೆ ದೆಹಲಿಯಲ್ಲಿ ರೂ. 60,300 ಮುಂಬೈನಲ್ಲಿ ರೂ. 60,300 ಹಾಗೂ ಕೊಲ್ಕತ್ತದಲ್ಲೂ ರೂ. 60,300 ಗಳಾಗಿದೆ.

    ವಿ.ಸೂ: ಇಲ್ಲಿ ಕೊಡಲಾದ ಎಲ್ಲ ದರಗಳು ಮಾರುಕಟ್ಟೆಯ ಬೆಲೆಗಳನ್ನು ಪ್ರತಿನಿಧಿಸುತ್ತವೆ ಹಾಗೂ ಜಿಎಸ್‍ಟಿ, ಟಿಸಿಎಸ್ ಹಾಗೂ ಇನ್ನಿತರೆ ಇರಬಹುದಾದ ಶುಲ್ಕಗಳನ್ನು ಒಳಗೊಂಡಿಲ್ಲ. ಹೆಚ್ಚು ನಿಖರ ಬೆಲೆಗಳಿಗಾಗಿ ನಿಮ್ಮ ಹತ್ತಿರದ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸಿ.
    Published by:Kavya V
    First published: