Gold Price Today: ಚಿನ್ನ ಖರೀದಿಸೋ ಪ್ಲಾನ್ ಇದ್ರೆ ಇವತ್ತೇ ಖರೀದಿಸಿ: ಇಳಿಕೆಯಾಗಿದೆ ದರ

ನೀವು ಚಿನ್ನ ಖರೀದಿಸುವ ಆಲೋಚನೆಯಲ್ಲಿದ್ದೀರಾ, ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಚಿನ್ನ

ಚಿನ್ನ

  • Share this:
Gold Rate on March 15th, 2022: ಮಾರ್ಚ್‌ ತಿಂಗಳಲ್ಲಿ ಚಿನ್ನ, ಬೆಳ್ಳಿ ದರದಲ್ಲಿ ಗಣನೀಯ ವ್ಯತ್ಯಾಸವಾಗುತ್ತಿದೆ. ಇದಕ್ಕೆ ಪ್ರಮುಖ ಕಾರಣ ರಷ್ಯಾ - ಉಕ್ರೇನ್‌ ಯುದ್ಧ ಎನ್ನಲಾಗುತ್ತಿದೆ. ಭಾರತೀಯ ಷೇರುಪೇಟೆಯಲ್ಲಿನ ಏರಿಳಿತವೂ ಇದಕ್ಕೆ ಕಾರಣ. ಇದೇ ರೀತಿ, ದೇಶದಲ್ಲಿಂದು ಚಿನ್ನದ ಬೆಲೆಯಲ್ಲಿ (Gold Price) ಇಳಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಸಹ ಚಿನ್ನದ ಬೆಲೆಯಲ್ಲಿ ಕಡಿಮೆಯಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 48,410 ರೂ. ಇತ್ತು. ಇಂದು 310 ರೂ. ಕಡಿಮೆಯಾಗಿ 48,100 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 52,810 ರೂ. ಇತ್ತು. ಇಂದು 340 ರೂ. ಇಳಿಕೆಯಾಗಿ 52,470 ರೂ. ಆಗಿದೆ. ಇನ್ನು, ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬುದನ್ನು ವಿವರವಾಗಿ ನೋಡೋಣ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?

ನೀವು ಚಿನ್ನ ಖರೀದಿಸುವ ಆಲೋಚನೆಯಲ್ಲಿದ್ದೀರಾ, ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) 52,810 ರೂ. ಇತ್ತು. ಇಂದು 340 ರೂ. ಇಳಿಕೆಯಾಗಿ 52,470 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 48,410 ರೂ. ಇತ್ತು. ಇಂದು 310 ರೂ. ಕಡಿಮೆಯಾಗಿ 48,100 ರೂ. ಆಗಿದೆ. ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ಮಂಗಳೂರಿನಲ್ಲೂ ಇದೇ ಬೆಲೆ ಇದೆ.

ದೇಶದಲ್ಲಿ ಆಭರಣ ಪ್ರಿಯರ ಜನಸಂಖ್ಯೆಗೇನೂ ಕೊರತೆ ಇಲ್ಲ. ಈ ಹಿನ್ನೆಲೆ ಚಿನ್ನ, ಬೆಳ್ಳಿ ವಹಿವಾಟಿಗೂ ಸಹ ಕೊರತೆ ಇಲ್ಲ. ಇನ್ನು ಹಲವರು ಆಪತ್ಕಾಲದಲ್ಲಿ ಚಿನ್ನ ಅಡ ಇಡಲು ಅಥವಾ ಮಾರಲು ಬೇಕಾಗುತ್ತದೆಂದು ಸಹ ಅದರ ಮೇಲೆ ಹೂಡಿಕೆ ಮಾಡುತ್ತಾರೆ.

ಇದನ್ನೂ ಓದಿ:  Credit Card Tips: ಕ್ರೆಡಿಟ್ ಕಾರ್ಡ್ ಬಿಲ್ ಪಾವತಿ ಮಾಡಲಾಗುತ್ತಿಲ್ಲವೇ? ಹೆದರಬೇಡಿ, ನಿಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಿ

ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ

ಇನ್ನು, ದೇಶದ ಇತರೆ ನಗರಗಳಾದ ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆ, ಕೊಯಮತ್ತೂರು, ಮಧುರೈನಲ್ಲಿ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 52 ಸಾವಿರದಿಂದ 53 ಸಾವಿರದ ಆಸುಪಾಸಿನಲ್ಲೇ ಇದೆ.

ಈ ಮಧ್ಯೆ, ದೇಶದ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈನಲ್ಲಿ 53,120 ರೂ. ಇದ್ದರೆ, ರಾಷ್ಟ್ರ ರಾಜಧಾನಿ ದೆಹಲಿ, ಮುಂಬೈ ಹಾಗೂ ಕೋಲ್ಕತ್ತದಲ್ಲಿ 24 ಕ್ಯಾರೆಟ್‌ ಬಂಗಾರದ ಬೆಲೆ 52,470 ರೂ. ಆಗಿದೆ.
ಇದೇ ರೀತಿ ಚಂಡೀಗಢ, ಸೂರತ್‌, ನಾಶಿಕ್‌ನಲ್ಲೂ 24 ಕ್ಯಾರೆಟ್‌ ಚಿನ್ನದ ಬೆಲೆ 53 ಸಾವಿರದ ಆಸುಪಾಸಿನಲ್ಲೇ ಇದೆ.

ಬೆಳ್ಳಿ ದರ:

ದೇಶದಲ್ಲಿಂದು ಚಿನ್ನದ ಬೆಲೆ ಇಳಿಕೆಯಾದಂತೆ ಬೆಳ್ಳಿ ದರ (Silver Rate) ಸಹ ಇಳಿಕೆಯಾಗಿದೆ.. ನಿನ್ನೆ 1 ಕೆಜಿ ಬೆಳ್ಳಿಗೆ 74,700 ರೂ. ಇತ್ತು. ಇಂದು 4,700 ರೂ. ಕಡಿಮೆಯಾಗಿ 70,000 ರೂ. ಆಗಿದೆ.

ಆದರೆ ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ 74,200 ರೂ. ಆಗಿದೆ. ಇದೇ ರೀತಿ ಚೆನ್ನೈ, ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣಂ, ಕೊಯಮತ್ತೂರು, ಮಧುರೈನಲ್ಲಿ ಸಹ 1 ಕೆಜಿ ಬೆಳ್ಳಿಯ ಬೆಲೆ 74,200 ರೂ. ಆಗಿದೆ.

ಈ ಮಧ್ಯೆ, ರಾಷ್ಟ್ರ ರಾಜಧಾನಿ ದೆಹಲಿ, ವಾಣಿಜ್ಯ ರಾಜಧಾನಿ ಮುಂಬೈ ಹಾಗೂ ಕೋಲ್ಕತ್ತದಲ್ಲಿ ಬೆಳ್ಳಿ ದರ 70,000 ರೂ. ಆಗಿದೆ.

ಚಿನ್ನ, ಬೆಳ್ಳಿ ದರದಲ್ಲಿ ಹಾವು-ಏಣಿ ಆಟ

ಒಟ್ಟಾರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಮುಂದುವರಿದಿದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ.

ಇದನ್ನೂ ಓದಿ:  PM Awas yojana: ಪಿಎಂ ಆವಾಸ್ ಯೋಜನೆ ಲಾಭ ನಿಮಗೆ ಸಿಕ್ಕಿದೆಯಾ? ಈ ನಿಯಮಗಳನ್ನು ತಿಳಿದುಕೊಳ್ಳಿ

ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಸೇರಿ ಹಲವು ಕಾರಣಗಳಿಂದ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ಷೇರು ಮಾರುಕಟ್ಟೆಯ ಪ್ರಭಾವದಿಂದಲೂ ಚಿನ್ನದ ಬೆಲೆ ಏರಿಕೆ - ಇಳಿಕೆಯಾಗಬಹುದು.
Published by:Mahmadrafik K
First published: