Gold And Silver Price: ಬೆಲೆ ಏರಿಕೆ ನಡುವೆ ಸಂತಸದ ಸುದ್ದಿ; ಇಳಿಕೆಯಾದ ಚಿನ್ನ, ಬೆಳ್ಳಿ ದರ; ಇವತ್ತಿನ ಬೆಲೆ ಎಷ್ಟಿದೆ ನೋಡಿ!

ದೇಶದಲ್ಲಿ ಆಭರಣ ಪ್ರಿಯರ ಜನಸಂಖ್ಯೆಗೇನೂ ಕೊರತೆ ಇಲ್ಲ. ಈ ಹಿನ್ನೆಲೆ ಚಿನ್ನ, ಬೆಳ್ಳಿ ವಹಿವಾಟಿಗೂ ಸಹ ಕೊರತೆ ಇಲ್ಲ. ಇನ್ನು ಹಲವರು ಆಪತ್ಕಾಲದಲ್ಲಿ ಚಿನ್ನ ಅಡ ಇಡಲು ಅಥವಾ ಮಾರಲು ಬೇಕಾಗುತ್ತದೆಂದು ಸಹ ಅದರ ಮೇಲೆ ಹೂಡಿಕೆ ಮಾಡುತ್ತಾರೆ.

ಚಿನ್ನ

ಚಿನ್ನ

  • Share this:
Gold Rate on March 29th, 2022: ಇತ್ತೀಚೆಗೆ ಚಿನ್ನ, ಬೆಳ್ಳಿ ದರ (Gold And Silver price) ಗಗನಮುಖಿಯಾಗುತ್ತಲೇ ಇದೆ. ಇದು ಆಭರಣ ಪ್ರಿಯರಿಗೆ ನಿರಾಸೆ ತಂದಿರೋದಂತೂ ಗ್ಯಾರಂಟಿ. ಮದುವೆ (Marriage) ಮುಂತಾದ ಸಮಾರಂಭಗಳಿಗೆ ಹಾಗೂ ಉಡುಗೊರೆ (Gift) ನೀಡಲು ಚಿನ್ನ, ಬೆಳ್ಳಿ ವಸ್ತುಗಳ ಖರೀದಿಯಲ್ಲಿ ತೊಡಗುವವರಿಗೆ ಜೇಬಿನ ಹೊರೆ ಹೆಚ್ಚಾಗಿದೆ. ಆದರೆ, ಆಭರಣ ಪ್ರಿಯರಿಗೆ ಕೊಂಚ ಸಮಾಧಾನ ತರುವ ಸುದ್ದಿ ಇದು. ಏಕೆಂದರೆ, ದೇಶದಲ್ಲಿಂದು ಚಿನ್ನದ ಬೆಲೆಯಲ್ಲಿ (Gold Price) ಇಳಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಸಹ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಭಾರತ(India)ದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 48,200 ರೂ. ಇತ್ತು. ಇಂದು 250 ರೂ. ಇಳಿಕೆಯಾಗಿ 47,950 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 52,590 ರೂ. ಇತ್ತು. ಇಂದು 280 ರೂ. ಇಳಿಕೆಯಾಗಿ 52,310 ರೂ. ಆಗಿದೆ. ಇನ್ನು, ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬುದನ್ನು ವಿವರವಾಗಿ ನೋಡೋಣ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?

ನೀವು ಚಿನ್ನ ಖರೀದಿಸುವ ಆಲೋಚನೆಯಲ್ಲಿದ್ದೀರಾ, ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) 52,590 ರೂ. ಇತ್ತು. ಇಂದು 280 ರೂ. ಇಳಿಕೆಯಾಗಿ 52,310 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 48,200 ರೂ. ಇತ್ತು. ಇಂದು 250 ರೂ. ಇಳಿಕೆಯಾಗಿ 47,950 ರೂ. ಆಗಿದೆ. ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ಮಂಗಳೂರಿನಲ್ಲೂ ಇದೇ ಬೆಲೆ ಇದೆ.

ಇದನ್ನೂ ಓದಿ:  Mutual Fund: ಮ್ಯೂಚುವಲ್ ಫಂಡ್ ಹೇಗೆ ಆಯ್ಕೆ ಮಾಡಿಕೊಳ್ಳಬೇಕು ಎಂಬ ಗೊಂದಲವಿದೆಯಾ? ಇದನ್ನು ಓದಿ..

ಆಪತ್ಕಾಲದ ನೆಂಟ ಈ ಹಳದಿ ಲೋಹ

ದೇಶದಲ್ಲಿ ಆಭರಣ ಪ್ರಿಯರ ಜನಸಂಖ್ಯೆಗೇನೂ ಕೊರತೆ ಇಲ್ಲ. ಈ ಹಿನ್ನೆಲೆ ಚಿನ್ನ, ಬೆಳ್ಳಿ ವಹಿವಾಟಿಗೂ ಸಹ ಕೊರತೆ ಇಲ್ಲ. ಇನ್ನು ಹಲವರು ಆಪತ್ಕಾಲದಲ್ಲಿ ಚಿನ್ನ ಅಡ ಇಡಲು ಅಥವಾ ಮಾರಲು ಬೇಕಾಗುತ್ತದೆಂದು ಸಹ ಅದರ ಮೇಲೆ ಹೂಡಿಕೆ ಮಾಡುತ್ತಾರೆ.

ಇನ್ನು, ದೇಶದ ಇತರೆ ನಗರಗಳಾದ ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆ, ಕೊಯಮತ್ತೂರು, ಮಧುರೈನಲ್ಲಿ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 52 ಸಾವಿರದಿಂದ 53 ಸಾವಿರದ ಆಸುಪಾಸಿನಲ್ಲೇ ಇದೆ.

ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ

ಈ ಮಧ್ಯೆ, ದೇಶದ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈನಲ್ಲಿ 52,650 ರೂ. ಇದ್ದರೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 24 ಕ್ಯಾರೆಟ್‌ ಚಿನ್ನದ ಬೆಲೆ 52,550 ರೂ. ಇದೆ. ಹಾಗೂ, ಮುಂಬೈ ಹಾಗೂ ಕೋಲ್ಕತ್ತದಲ್ಲಿ 24 ಕ್ಯಾರೆಟ್‌ ಬಂಗಾರದ ಬೆಲೆ 52,310 ರೂ. ಆಗಿದೆ.

ಇದೇ ರೀತಿ ಚಂಡೀಗಢ, ಸೂರತ್‌, ನಾಶಿಕ್‌ನಲ್ಲೂ 24 ಕ್ಯಾರೆಟ್‌ ಚಿನ್ನದ ಬೆಲೆ 52 ಸಾವಿರದ ಆಸುಪಾಸಿನಲ್ಲೇ ಇದೆ.

ಬೆಳ್ಳಿ ದರ:

ದೇಶದಲ್ಲಿಂದು ಚಿನ್ನದ ಬೆಲೆ ಕಡಿಮೆಯಾದಂತೆ ಬೆಳ್ಳಿ ದರ (Silver Rate) ದಲ್ಲೂ ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 68,900 ರೂ. ಇತ್ತು. ಇಂದು 500 ರೂ. ಇಳಿಕೆಯಾಗಿ 68,400 ರೂ. ಆಗಿದೆ.

ಇದೇ ರೀತಿ ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ ಸಹ ಬೆಳ್ಳಿಯ ದರ 700 ರೂ. ಕಡಿಮೆಯಾಗಿದ್ದು 1 ಕೆಜಿ ಬೆಳ್ಳಿಯ ಬೆಲೆ 72,700 ರೂ. ಆಗಿದೆ. ಇದೇ ರೀತಿ ಚೆನ್ನೈ, ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣಂ, ಕೊಯಮತ್ತೂರು, ಮಧುರೈನಲ್ಲಿ ಸಹ 1 ಕೆಜಿ ಬೆಳ್ಳಿಯ ಬೆಲೆ 72,700 ರೂ. ಆಗಿದೆ.

ಈ ಮಧ್ಯೆ, ರಾಷ್ಟ್ರ ರಾಜಧಾನಿ ದೆಹಲಿ, ವಾಣಿಜ್ಯ ರಾಜಧಾನಿ ಮುಂಬೈ ಹಾಗೂ ಕೋಲ್ಕತ್ತದಲ್ಲಿ ಬೆಳ್ಳಿ ದರ 68,400 ರೂ. ಆಗಿದೆ.

ಒಟ್ಟಾರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಮುಂದುವರಿದಿದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ.

ಇದನ್ನೂ ಓದಿ:  ನಿಮ್ಮ ಬಳಿ 10 ಪೈಸೆಯ ನಾಣ್ಯಗಳಿವೆಯೇ? ಹಾಗಾದ್ರೆ ನಿಮಗೆ ಸಿಗಲಿದೆ ಒಳ್ಳೆಯ ಮೊತ್ತ

ಸೂಚನೆ: ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಸೇರಿ ಹಲವು ಕಾರಣಗಳಿಂದ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ಷೇರು ಮಾರುಕಟ್ಟೆಯ ಪ್ರಭಾವದಿಂದಲೂ ಚಿನ್ನದ ಬೆಲೆ ಏರಿಕೆ - ಇಳಿಕೆಯಾಗಬಹುದು.
Published by:Mahmadrafik K
First published: