• Home
  • »
  • News
  • »
  • business
  • »
  • Gold Price: ಚಿನ್ನ ಖರೀದಿಸುವ ಪ್ಲಾನ್ ಇದೆಯಾ? ಇಂದು ಬೆಲೆ ಇಳಿಕೆಯಾಗಿದೆ ನೋಡಿ

Gold Price: ಚಿನ್ನ ಖರೀದಿಸುವ ಪ್ಲಾನ್ ಇದೆಯಾ? ಇಂದು ಬೆಲೆ ಇಳಿಕೆಯಾಗಿದೆ ನೋಡಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಒಂದು ವಾರದಿಂದ ಭಾರತದಲ್ಲಿ ಬೆಳ್ಳಿ ದರದಲ್ಲಿ ಏರಿಳಿತ ಕಂಡುಬಂದಿದೆ. ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಅತ್ಯಲ್ಪ ಇಳಿಕೆಯಾಗಿದೆ.

  • Share this:

Gold And Silver Price Today ನಿನ್ನೆಗೆ ಹೋಲಿಸಿದರೆ ಇಂದು ಭಾರತದ ಮಾರುಕಟ್ಟೆಯಲ್ಲಿ (Market) ಚಿನ್ನದ ಬೆಲೆಯಲ್ಲಿ (Gold Price) ಕುಸಿತವಾಗಿದ್ದು ಆಭರಣ ಖರೀದಿಸಬೇಕೆನ್ನುವವರು ಇಂದು ಆ ಕೆಲಸವನ್ನು ಮಾಡಬಹುದು. ನಿನ್ನೆ ಒಂದು ಗ್ರಾಂ ಆಭರಣದ ಚಿನ್ನದ ಬೆಲೆ ರೂ. 4,790 ಇದ್ದದ್ದು ಇಂದು 4,765 ರೂಪಾಯಿಗೆ ಇಳಿದಿದೆ. ಕಳೆದ ಕೆಲ ಸಮಯದಿಂದ ಚಿನ್ನದ ಬೆಲೆಗಳಲ್ಲಿ ಅಲ್ಪ ಪ್ರಮಾಣದ ಏರಿಳಿತಗಳು ಆಗುತ್ತಲೇ ಇದ್ದು ಇದಕ್ಕೆ ಪ್ರಮುಖ ಕಾರಣ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ (International Market) ಉಂಟಾಗುತ್ತಿರುವ ಕಚ್ಚಾ ತೈಲದಲ್ಲಾಗುತ್ತಿರುವ (Crude Oil Price) ಬೆಲೆ ಏರಿಕೆ ಹಾಗೂ ಇತರೆ ಜಾಗತಿಕ ಅಂಶಗಳೇ ಆಗಿವೆ.


ಆರ್ಥಿಕ ಸಂಕಷ್ಟದ ಕಾಲದಲ್ಲಿ ಕೈಯನ್ನು ಹಿಡಿಯುವ ನಂಬಿಕಸ್ಥ ಗೆಳೆಯ ಎಂದು ನಂಬಲಾಗಿರುವ ಚಿನ್ನವು ಈಗ ಹೂಡಿಕೆಯ ವಸ್ತುವಾಗಿಯೂ ಪ್ರಾಮುಖ್ಯತೆ ಪಡೆದಿದೆ. ಹಾಗಾಗಿ, ನಮ್ಮ ದೇಶದಲ್ಲಷ್ಟೆ ಅಲ್ಲ, ಜಗತ್ತಿನಾದ್ಯಂತ ಬಂಗಾರಕ್ಕೆ ಇರುವ ಬೇಡಿಕೆ ಅಷ್ಟಿಷ್ಟಲ್ಲ.


ಭಾರತದ ಮಾರುಕಟ್ಟೆಗಳಲ್ಲಿ ಇಂದು ಚಿನ್ನ ಖರೀದಿ ಸಹಜ ಸಂಗತಿಯಾಗಿದ್ದು ದಿನದಲ್ಲೇ ಕೋಟ್ಯಂತರ ರೂಪಾಯಿಗಳಷ್ಟು ವ್ಯವಹಾರವನ್ನು ಈ ವ್ಯವಹಾರ ಹೊಂದಿದೆ. ಬೆಂಗಳೂರಿನಲ್ಲಿ ಇಂದು 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 47,650 ಆಗಿದೆ.


ಇದನ್ನೂ ಓದಿ:  LIC: ಮೇ 30ರಂದು ಗುಡ್ ನ್ಯೂಸ್ ನೀಡಲಿದೆ ಎಲ್ಐಸಿ, ನಿರೀಕ್ಷಿಸಿ


ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರಗಳ ಕುರಿತು ಬನ್ನಿ ಒಂದು ಪಕ್ಷಿ ನೋಟ ಬೀರೋಣ.


ಒಂದು ಗ್ರಾಂ (1GM)


22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,765


24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,198


ಎಂಟು ಗ್ರಾಂ (8GM)


22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 38,120


24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,584


ಹತ್ತು ಗ್ರಾಂ (10GM)


22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 47,650


24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,980


ನೂರು ಗ್ರಾಂ (100GM)


22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,76,500


24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,19,800


ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,650 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 47,650, ರೂ. 47,650, ರೂ. 47,650 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,650 ರೂ. ಆಗಿದೆ.


ಬೆಳ್ಳಿ ದರ


ಒಂದು ವಾರದಿಂದ ಭಾರತದಲ್ಲಿ ಬೆಳ್ಳಿ ದರದಲ್ಲಿ ಏರಿಳಿತ ಕಂಡುಬಂದಿದೆ. ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಅತ್ಯಲ್ಪ ಇಳಿಕೆಯಾಗಿದೆ. ಇಂದು ಭಾರತದ ಮಾರುಕಟ್ಟೆಯಲ್ಲಿ ಒಂದು ಕೆಜಿಗೆ ಬೆಳ್ಳಿ ಬೆಲೆ 61,500 ರೂ. ಆಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನೆ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ.


ಇದನ್ನೂ ಓದಿ:  HDFC Interest Rates: ಗ್ರಾಹಕರಿಗೆ ಗುಡ್ ನ್ಯೂಸ್, ಈ ಠೇವಣಿಗಳ ಮೇಲಿನ ಬಡ್ಡಿದರದಲ್ಲಿ ಹೆಚ್ಚಳ


ಪ್ರಮುಖ ನಗರಗಳಲ್ಲಿ ಬೆಳ್ಳಿ ದರ


ಪ್ರಸ್ತುತ, ಬೆಂಗಳೂರು ನಗರದಲ್ಲಿ ಇಂದು 10gm, 100gm, 1000gm (1ಕೆಜಿ) ಬೆಳ್ಳಿ ದರಗಳು ಕ್ರಮವಾಗಿ ರೂ. 660, ರೂ. 6,600 ಹಾಗೂ ರೂ. 66,000 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 66,000 ಆಗಿದ್ದರೆ ದೆಹಲಿಯಲ್ಲಿ ರೂ. 61,500 ಮುಂಬೈನಲ್ಲಿ ರೂ. 61,500 ಹಾಗೂ ಕೊಲ್ಕತ್ತದಲ್ಲೂ ರೂ. 61,500 ಗಳಾಗಿದೆ.


ಇನ್ನೂ, ಈ ಬಂಗಾರದ ಮೌಲ್ಯ ಜಾಗತಿಕ ಮಾರುಕಟ್ಟೆಯಲ್ಲೂ ಅಪಾರವಾಗಿದೆ. ಸಾಕಷ್ಟು ದೇಶಗಳು ವಿದೇಶಿ ವಿನಿಮಯ ರೂಪದಲ್ಲಿ ಚಿನ್ನದ ಸಂಗ್ರಹ ಹೊಂದಿರುವುದು ಎಲ್ಲರಿಗೂ ಗೊತ್ತೆ ಇದೆ, ಏಕೆಂದರೆ ಚಿನ್ನ ಎಲ್ಲ ದೇಶಗಳಲ್ಲೂ ಮಾನ್ಯತೆ ಪಡೆದಿದ್ದು ಎಲ್ಲರಿಂದಲೂ ಸ್ವೀಕರಿಸಲ್ಪಡುತ್ತದೆ.


ಎಲ್ಲ ಕಾರ್ಯಕ್ರಮಗಳಲ್ಲಿ ಚಿನ್ನಕ್ಕೆ ವಿಶೇಷ ಸ್ಥಾನ


ಅದರಲ್ಲೂ ವಿಶೇಷವಾಗಿ ಭಾರತ ದೇಶ ಎಂದರೆ ಕೇಳಬೇಕೆ? ಮೊದಲಿನಿಂದಲೂ ಭಾರತದಲ್ಲಿ ಬಂಗಾರಕ್ಕಿರುವ ವಿಶೇಷತೆಯೇ ಬೇರೆ. ಮದುವೆಯಿಂದ ಹಿಡಿದು ಅನೇಕ ಇತರೆ ಶುಭ ಕಾರ್ಯಗಳಲ್ಲಿ ಭಾರತೀಯರು ಬಂಗಾರವನ್ನು ಯಥೇಚ್ಚವಾಗಿ ಬಳಸುತ್ತಾರೆ. ಅದರಲ್ಲೂ ನವಜಾತ ಶಿಶು ಇರಲಿ ಅಥವಾ ಹೊಸದಾಗಿ ಮದುವೆ ಮಾಡಿಕೊಂಡ ದಂಪತಿಗಳಿರಲಿ ಅವರಲ್ಲಿ ಬಂಗಾರದ ಯಾವುದಾದರೂ ವಸ್ತು ಅಥವಾ ಸಿಂಗಾರದ ಸಾಮಾನು ಇದ್ದೆ ಇರುತ್ತದೆ.


ಚಿನ್ನದ ಮೇಲಿನ ಹೂಡಿಕೆ


ಕಳೆದ ಹಲವು ವರ್ಷಗಳಿಂದ ಚಿನ್ನವು ಹಣದುಬ್ಬರದ ವಿರುದ್ಧ ಒಂದು ರಕ್ಷಣಾತ್ಮಕ ಬೇಲಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಬಹುದು. ಹೂಡಿಕೆದಾರರು ಚಿನ್ನವನ್ನು ಪ್ರಮುಖ ಹೂಡಿಕೆಯ ವಸ್ತುವನ್ನಾಗಿ ನೋಡುತ್ತಿದ್ದಾರೆ. ಹಾಗಾಗಿ, ಚಿನ್ನವು ಮಾರುಕಟ್ಟೆಯಲ್ಲಿ ಒಂದು ಉತ್ತಮ ಹೂಡಿಕೆಯ ವಸ್ತುವಾಗಿ ಗುರುತಿಸಿಕೊಂಡಿದೆ. ಇಂದು ಚಿನ್ನದ ಹೂಡಿಕೆ ಬಹು ಸುರಕ್ಷಿತ ಹೂಡಿಕೆ ಎಂದೇ ಹಲವು ತಜ್ಞರು ಹೇಳುತ್ತಾರೆ. ಹಾಗಾಗಿ ಅದರಲ್ಲೂ ವಿಶೇಷವಾಗಿ ಭರತೀಯರಿಗೆ ಚಿನ್ನದ ಆಕರ್ಷಣೆ ತುಸು ಹೆಚ್ಚೇ ಎಂದು ಹೇಳಬಹುದು.

Published by:Mahmadrafik K
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು