Gold Rate on April 13th, 2022: ಕಳೆದ 2 ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ದರ ಮತ್ತೆ ಇಂದು ಏರಿಕೆಯಾಗಿದೆ. ಈ ಹಿನ್ನೆಲೆ ಏಪ್ರಿಲ್ನಲ್ಲಿ ಬಂಗಾರದ ದರ ಇಳಿಕೆಯಾಗಬಹುದೆಂಬ ಆಸೆಗೆ ತಣ್ಣೀರೆರಚಿದಂತಾಗಿದೆ. ಹೌದು, ದೇಶದಲ್ಲಿಂದು ಚಿನ್ನದ ಬೆಲೆಯಲ್ಲಿ (Gold Price) ಏರಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಸಹ ಚಿನ್ನದ ಬೆಲೆಯಲ್ಲಿ ಹೆಚ್ಚಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 48,600 ರೂ. ಇತ್ತು. ಇಂದು 400 ರೂ. ಏರಿಕೆಯಾಗಿ 49,000 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 53,020 ರೂ. ಇತ್ತು. ಇಂದು 450 ರೂ. ಹೆಚ್ಚಾಗಿ 53,450 ರೂ. ಆಗಿದೆ. ಇನ್ನು, ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬುದನ್ನು ವಿವರವಾಗಿ ನೋಡೋಣ..
ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?
ನೀವು ಚಿನ್ನ ಖರೀದಿಸುವ ಆಲೋಚನೆಯಲ್ಲಿದ್ದೀರಾ, ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 53,020 ರೂ. ಇತ್ತು. ಇಂದು 450 ರೂ. ಹೆಚ್ಚಾಗಿ 53,450 ರೂ. ಆಗಿದೆ. ಅದೇ ರೀತಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 48,600 ರೂ. ಇತ್ತು. ಇಂದು 400 ರೂ. ಏರಿಕೆಯಾಗಿ 49,000 ರೂ. ಆಗಿದೆ. ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ಮಂಗಳೂರಿನಲ್ಲೂ ಇದೇ ಬೆಲೆ ಇದೆ.
ಇನ್ನು, ದೇಶದ ಇತರೆ ನಗರಗಳಾದ ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆ, ಕೊಯಮತ್ತೂರು, ಮಧುರೈ, ಚಂಡೀಗಢ, ಸೂರತ್, ನಾಶಿಕ್ನಲ್ಲೂ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 53 ಸಾವಿರದಿಂದ 54 ಸಾವಿರದ ಆಸುಪಾಸಿನಲ್ಲೇ ಇದೆ.
ಈ ಮಧ್ಯೆ, ದೇಶದ ಮೆಟ್ರೋಪಾಲಿಟನ್ ನಗರಗಳಾದ ಚೆನ್ನೈನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 54,000 ರೂ. ಇದ್ದರೆ, ರಾಷ್ಟ್ರ ರಾಜಧಾನಿ ದೆಹಲಿ, ಮುಂಬೈ ಹಾಗೂ ಕೋಲ್ಕತ್ತದಲ್ಲಿ 24 ಕ್ಯಾರೆಟ್ ಬಂಗಾರದ ಬೆಲೆ 53,450 ರೂ. ಆಗಿದೆ.
ದೇಶದಲ್ಲಿ ಆಭರಣ ಪ್ರಿಯರ ಜನಸಂಖ್ಯೆಗೇನೂ ಕೊರತೆ ಇಲ್ಲ. ಮದುವೆ ಮುಂತಾದ ಸಮಾರಂಭಗಳಿಗೆ ಬಂಗಾರ ಖರೀದಿ ಜೋರಾಗೇ ನಡೆಯುತ್ತಿರುತ್ತದೆ. ಹಲವರು ಆಪತ್ಕಾಲದಲ್ಲಿ ಚಿನ್ನ ಅಡ ಇಡಲು ಅಥವಾ ಮಾರಲು ಬೇಕಾಗುತ್ತದೆಂದು ಸಹ ಅದರ ಮೇಲೆ ಹೂಡಿಕೆ ಮಾಡುತ್ತಾರೆ. ಚಿನ್ನವನ್ನು ಬಾಂಡ್ ರೂಪದಲ್ಲೂ ಖರೀದಿಸಲಾಗುತ್ತದೆ.
ಬೆಳ್ಳಿ ದರ:
ದೇಶದಲ್ಲಿಂದು ಚಿನ್ನದ ಬೆಲೆಯಲ್ಲಿ ಏರಿಕೆಯಾದಂತೆ ಬೆಳ್ಳಿ ದರ (Silver Rate) ದಲ್ಲೂ ಹೆಚ್ಚಳವಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 67,700 ರೂ. ಇತ್ತು. ಇಂದು 100 ರೂ. ಹೆಚ್ಚಾಗಿ 67,800 ರೂ. ಆಗಿದೆ.
ಆದರೆ, ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ 400 ರೂ. ಜಾಸ್ತಿ ಆಗಿದ್ದು 72,700 ರೂ. ಆಗಿದೆ. ಇದೇ ರೀತಿ ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣಂ, ಕೇರಳ, ಕೊಯಮತ್ತೂರು, ಮಧುರೈನಲ್ಲಿ ಸಹ 1 ಕೆಜಿ ಬೆಳ್ಳಿಯ ಬೆಲೆ 72,700 ರೂ ಆಗಿದೆ.
ಇನ್ನೊಂದೆಡೆ, ಪುಣೆ, ಸೂರತ್, ನಾಶಿಕ್, ಚಂಡೀಗಢ ಸೇರಿ ಹಲವು ನಗರಗಳಲ್ಲಿ 1 ಕೆಜಿ ಬೆಳ್ಳಿಯ ಮೌಲ್ಯ 67,800 ರೂ. ಇದೆ.
ಈ ಮಧ್ಯೆ, ರಾಷ್ಟ್ರ ರಾಜಧಾನಿ ದೆಹಲಿ, ವಾಣಿಜ್ಯ ರಾಜಧಾನಿ ಮುಂಬೈ ಹಾಗೂ ಕೋಲ್ಕತ್ತದಲ್ಲಿ 1 ಕೆಜಿ ಬೆಳ್ಳಿಯ ದರ 67,800 ರೂ. ಇದ್ದರೆ, ಚೆನ್ನೈನಲ್ಲಿ 1 ಕೆಜಿ ಬೆಳ್ಳಿಯ ದರ 72,700 ರೂ. ಆಗಿದೆ.
ಒಟ್ಟಾರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಮುಂದುವರಿದಿದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ.
ಸೂಚನೆ: ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಸೇರಿ ಹಲವು ಕಾರಣಗಳಿಂದ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ಷೇರು ಮಾರುಕಟ್ಟೆಯ ಪ್ರಭಾವದಿಂದಲೂ ಚಿನ್ನದ ಬೆಲೆ ಏರಿಕೆ - ಇಳಿಕೆಯಾಗಬಹುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ