Gold Price Today: ಅಲ್ಪ ಏರಿಕೆಯಾದ ಚಿನ್ನ, ಬೆಳ್ಳಿ: ಇವತ್ತಿನ ದರ ಇಲ್ಲಿದೆ

Gold Price Today, November 27, 2021: ನೀವು ಚಿನ್ನ ಖರೀದಿಗೆ ಹೋಗುತ್ತಿದ್ರೆ ಇವತ್ತಿನ ಬೆಲೆ ಎಷ್ಟಿದೆ ಎಂಬುದನ್ನು ತಿಳಿದುಕೊಳ್ಳಲೇಬೇಕು. ಇದರಿಂದ ಚಿನ್ನ (Gold) ಖರೀದಿ ಸುಲಭವಾಗಲಿದೆ. ಕಳೆದೊಂದು ವಾರದಿಂದ ಚಿನ್ನದ ಬೆಲೆ ಸಾಕಷ್ಟು ಏರಿಳಿತ ಕಾಣುತ್ತಿದೆ. ಇವತ್ತಿನ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.

ಚಿನ್ನ

ಚಿನ್ನ

  • Share this:
Gold Price Today, November 27, 2021: ನೀವು ಚಿನ್ನ ಖರೀದಿಗೆ ಹೋಗುತ್ತಿದ್ರೆ ಇವತ್ತಿನ ಬೆಲೆ ಎಷ್ಟಿದೆ ಎಂಬುದನ್ನು ತಿಳಿದುಕೊಳ್ಳಲೇಬೇಕು. ಇದರಿಂದ ಚಿನ್ನ (Gold) ಖರೀದಿ ಸುಲಭವಾಗಲಿದೆ. ಕಳೆದೊಂದು ವಾರದಿಂದ ಚಿನ್ನದ ಬೆಲೆ ಸಾಕಷ್ಟು ಏರಿಳಿತ ಕಾಣುತ್ತಿದೆ. ಇವತ್ತಿನ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 44,850  ರೂ.ಗಳಾಗಿದ್ದು, 150 ರೂಪಾಯಿ ಏರಿಕೆ ಕಂಡಿದೆ.  ಇನ್ನು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 48,930 ರೂ.ಗಳಷ್ಟಿದ್ದು, 170 ರೂ. ಏರಿಕೆಯಾಗಿದೆ. ಇನ್ನು 10 ಗ್ರಾಂ ಬೆಳ್ಳಿ (Silver Price)  ಬೆಲೆ 631 ರೂ.ಇದೆ.

ಶುಕ್ರವಾರದ ದರ

22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 44,750 ರೂ. ಇತ್ತು. ಅಂತೆಯೇ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 48,760 ರೂ. ಇತ್ತು, ಇನ್ನು 10 ಗ್ರಾಂ ಬೆಳ್ಳಿ ಬೆಲೆ 629 ರೂ. ಮತ್ತು 1 ಕೆಜಿ ಬೆಳ್ಳಿ ದರ 62,900 ರೂ.ಗಳಷ್ಟಿತ್ತು.

ಬೆಂಗಳೂರು ದಕ್ಷಿಣ ಭಾರತದಲ್ಲಿ ಬೆಳ್ಳಿಯಂತಹ ಲೋಹದ ಎರಡನೇ ಅತಿ ದೊಡ್ಡ ಮಾರುಕಟ್ಟೆಯಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಖರೀದಿಸಲು ಯೋಜಿಸುವಾಗ, ಬ್ರ್ಯಾಂಡೆಡ್‌ ಆಭರಣಗಳನ್ನು ಮಾರಾಟ ಮಾಡುವ ಪ್ರಮಾಣೀಕೃತ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸುವುದು ಉತ್ತಮ. ಬೆಂಗಳೂರಿನಲ್ಲಿ ಹೂಡಿಕೆ ಉದ್ದೇಶಗಳಿಗಾಗಿ ಬೆಳ್ಳಿ ಅತ್ಯಂತ ಜನಪ್ರಿಯ ವಸ್ತು.

ಇದನ್ನೂ ಓದಿ:  China: ಚಿಲ್ಲರೆ ಮಾರುಕಟ್ಟೆಯಲ್ಲಿ ಹೊಸ ಕ್ರಾಂತಿಗೆ ಮುಂದಾದ ಚೀನಾ; ಈ 5 ಆವಿಷ್ಕಾರ ಶಾಪಿಂಗ್ ವಿಧಾನ ಬದಲಿಸುತ್ತಾ?

ಆಪತ್ಕಾಲದ ನೆಂಟನೇ ಹಳದಿ ಲೋಹ

ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವುದು ಈಗಿನ ಪದ್ಧತಿಯಲ್ಲ. ಬಂಗಾರವನ್ನು ಖರೀದಿಸಿಟ್ಟರೆ ನಮ್ಮ ಆಪತ್ಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ ಎಂಬುದು ಬಹುತೇಕ ಎಲ್ಲ ಭಾರತೀಯರ ಲೆಕ್ಕಾಚಾರ. ಹೀಗಾಗಿ, ಕೈಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ.

ಚಿನ್ನದ ಶುದ್ಧತೆ ನೋಡೋದು ಹೇಗೆ?

ಆಭರಣದ ಶುದ್ಧತೆಯನ್ನು ಅಳೆಯಲು ಅಥವಾ ಪರಿಶೀಲಿಸಲು ಕೆಲವು ಮಾರ್ಗ ಮತ್ತು ಅಳತೆಗಳಿವೆ. ಖರೀದಿ ವೇಳೆ ಈ ಅಂಶಗಳನ್ನು ಗಮನಿಸಬೇಕಾಗುತ್ತದೆ. ಹಾಲ್ ಮಾರ್ಕ್ ಗೆ ಸಂಬಂಧಿಸಿದ ಐದು ಗುರುತುಗಳು ಕಂಡು ಬರುತ್ತವೆ. ಈ ಗುರುತುಗಳ ಮೂಲಕ ಆಭರಣದ ಶುದ್ಧತೆ ಕಂಡು ಹಿಡಿಯಬಹದು. ಇದರಲ್ಲಿ ಒಂದು ಕ್ಯಾರೆಟ್ ನಿಂದ 24 ಕ್ಯಾರೆಟ್ ವರೆಗೆ ಒಂದು ಮಾಪಕ ಇರಲಿದೆ . 22 ಕ್ಯಾರೆಟ್ ಆಭರಣಗಳ ಮೇಲೆ 916 ನಂಬರ್ ಇರುತ್ತದೆ. 21 ಕ್ಯಾರೆಟ್ ಮೇಲೆ 875, 18 ಕ್ಯಾರೆಟ್ ಮೇಲೆ 750 ಕ್ಯಾರೆಟ್ ಎಂದು ಬರೆಯಲಾಗಿರುತ್ತದೆ. ಇನ್ನೂ ಆಭರಣ 14 ಕ್ಯಾರೆಟ್ಆಗಿದ್ದರೆ 585 ಎಂದು ಬರೆಯಲಾಗಿರುತ್ತದೆ.

ಕೊರೋನಾ ವೈರಸ್ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್‌ಡೌನ್‌ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್‌ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.

ಇದನ್ನೂ ಓದಿ:  Coal India: ಕೋಲ್ ಇಂಡಿಯಾ ಶೇರುಗಳ ಮೌಲ್ಯ ಹೆಚ್ಚಳ

ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.

ನಗರದಿಂದ ನಗರಕ್ಕೆ ವ್ಯತ್ಯಾಸ 

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.
Published by:Mahmadrafik K
First published: