Gold Price Today: ಆಭರಣ ಪ್ರಿಯರಿಗೆ ಶಾಕ್ - ಮತ್ತೆ ಹೆಚ್ಛಾಯ್ತು ಚಿನ್ನ, ಬೆಳ್ಳಿ ದರ

Gold And Silver Rate Today: ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಸೇರಿ ಹಲವು ಕಾರಣಗಳಿಂದ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ಷೇರು ಮಾರುಕಟ್ಟೆಯ ಪ್ರಭಾವದಿಂದಲೂ ಚಿನ್ನದ ಬೆಲೆ ಏರಿಕೆ - ಇಳಿಕೆಯಾಗಬಹುದು.

ಚಿನ್ನದ ಆಭರಣಗಳು

ಚಿನ್ನದ ಆಭರಣಗಳು

  • Share this:
Gold Rate on April 14th, 2022: ಬಂಗಾರದ ದರ ಇಳಿಕೆಯಾಗಲು ಕಾಯುತ್ತಿದ್ದವರಿಗೆ ಶಾಕ್‌ ಆಗುವ ಸುದ್ದಿ ಇದು. ಎರಡು ದಿನಗಳ ಕಾಲ ಯಥಾಸ್ಥಿತಿ ಕಾಯ್ದುಕೊಂಡಿದ್ದ ಬಂಗಾರದ ಮೌಲ್ಯ ಸತತ 2 ದಿನಗಳಿಂದ ಮತ್ತೆ ಏರಿಕೆಯಾಗುತ್ತಿದೆ. ಇದರ ಜತೆಗೆ ಬೆಳ್ಳಿಯೂ ದುಬಾರಿಯಾಗುತ್ತಿದೆ. ಈ ಹಿನ್ನೆಲೆ ಮಗನ, ಮಗಳ ಮದುವೆ ಮಾಡಿಸೋಕೆ ಅಂತ ಹಣ ಕೂಡಿಟ್ಟು ಆಭರಣ ಮಾಡಿಸೋಕೆ ತಯಾರಾದವರಿಗೆ ಮತ್ತಷ್ಟು ಹಣ ಕೂಡಿಡುವಂತ ಪರಿಸ್ಥಿತಿ ಬಂದೊದಗಿದೆ. ಹೌದು, ದೇಶದಲ್ಲಿಂದು ಚಿನ್ನದ ಬೆಲೆಯಲ್ಲಿ (Gold Price) ಏರಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಸಹ ಚಿನ್ನದ ಬೆಲೆ ಹೆಚ್ಚಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 49,000 ರೂ. ಇತ್ತು. ಇಂದು 350 ರೂ. ಏರಿಕೆಯಾಗಿ 49,350 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 53,450 ರೂ. ಇತ್ತು. ಇಂದು 390 ರೂ. ಹೆಚ್ಚಾಗಿ 53,840 ರೂ. ಆಗಿದೆ. ಇನ್ನು, ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬುದು ಇಲ್ಲಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?

ನೀವು ಚಿನ್ನ ಖರೀದಿಸುವ ಆಲೋಚನೆಯಲ್ಲಿದ್ದೀರಾ, ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ 24 ಕ್ಯಾರೆಟ್‌ ಚಿನ್ನದ ಬೆಲೆ ನಿನ್ನೆ 53,450 ರೂ. ಇತ್ತು. ಇಂದು 390 ರೂ. ಹೆಚ್ಚಾಗಿ 53,840 ರೂ. ಆಗಿದೆ. ಅದೇ ರೀತಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 49,000 ರೂ. ಇತ್ತು. ಇಂದು 350 ರೂ. ಏರಿಕೆಯಾಗಿ 49,350 ರೂ. ಆಗಿದೆ. ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ಮಂಗಳೂರಿನಲ್ಲೂ ಇದೇ ಬೆಲೆ ಇದೆ.

ಇನ್ನು, ದೇಶದ ಇತರೆ ನಗರಗಳಾದ ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆ, ಕೊಯಮತ್ತೂರು, ಮಧುರೈ, ಚಂಡೀಗಢ, ಸೂರತ್‌, ನಾಶಿಕ್‌ನಲ್ಲೂ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 54 ಸಾವಿರದಿಂದ 55 ಸಾವಿರದ ಆಸುಪಾಸಿನಲ್ಲೇ ಇದೆ.

ಈ ಮಧ್ಯೆ, ದೇಶದ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈನಲ್ಲಿ 24 ಕ್ಯಾರೆಟ್‌ ಚಿನ್ನದ ಬೆಲೆ 54,500 ರೂ. ಇದ್ದರೆ, ರಾಷ್ಟ್ರ ರಾಜಧಾನಿ ದೆಹಲಿ, ಮುಂಬೈ ಹಾಗೂ ಕೋಲ್ಕತ್ತದಲ್ಲಿ 24 ಕ್ಯಾರೆಟ್‌ ಬಂಗಾರದ ಬೆಲೆ 53,840 ರೂ. ಆಗಿದೆ.

ದೇಶದಲ್ಲಿ ಆಭರಣ ಪ್ರಿಯರ ಜನಸಂಖ್ಯೆಗೇನೂ ಕೊರತೆ ಇಲ್ಲ. ಹಲವರು ಆಪತ್ಕಾಲದಲ್ಲಿ ಚಿನ್ನ ಅಡ ಇಡಲು ಅಥವಾ ಮಾರಲು ಬೇಕಾಗುತ್ತದೆಂದು ಸಹ ಅದರ ಮೇಲೆ ಹೂಡಿಕೆ ಮಾಡುತ್ತಾರೆ. ಚಿನ್ನವನ್ನು ಬಾಂಡ್‌ ರೂಪದಲ್ಲೂ ಖರೀದಿಸಲಾಗುತ್ತದೆ.

ಇದನ್ನೂ ಓದಿ: ನಿಮ್ಮ ಮಕ್ಕಳ ಓದು, ಮದುವೆಗೆ ಹಣ ನೀಡುವ ಈ ಯೋಜನೆಗಳ ಬಗ್ಗೆ ಸರಿಯಾಗಿ ತಿಳಿಯಿರಿ

ಬೆಳ್ಳಿ ದರ ಹೀಗಿದೆ

ದೇಶದಲ್ಲಿಂದು ಚಿನ್ನದ ಬೆಲೆಯಲ್ಲಿ ಏರಿಕೆಯಾದಂತೆ ಬೆಳ್ಳಿ ದರ (Silver Rate) ದಲ್ಲೂ ಹೆಚ್ಚಳವಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 67,800 ರೂ. ಇತ್ತು. ಇಂದು 1,500 ರೂ. ಹೆಚ್ಚಾಗಿ 69,300 ರೂ. ಆಗಿದೆ.

ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ ಸಹ 1 ಕೆಜಿ ಬೆಳ್ಳಿಯ ಬೆಲೆ 1,500 ರೂ. ಜಾಸ್ತಿ ಆಗಿದ್ದು 74,200 ರೂ. ಆಗಿದೆ. ಇದೇ ರೀತಿ ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣಂ, ಕೇರಳ, ಕೊಯಮತ್ತೂರು, ಮಧುರೈನಲ್ಲಿ ಸಹ 1 ಕೆಜಿ ಬೆಳ್ಳಿಯ ಬೆಲೆ 74,200 ರೂ. ಆಗಿದೆ.

ಇನ್ನೊಂದೆಡೆ, ಪುಣೆ, ಸೂರತ್‌, ನಾಶಿಕ್‌, ಚಂಡೀಗಢ ಸೇರಿ ಹಲವು ನಗರಗಳಲ್ಲಿ 1 ಕೆಜಿ ಬೆಳ್ಳಿಯ ಮೌಲ್ಯ 69,300 ರೂ. ಇದೆ.

ಈ ಮಧ್ಯೆ, ರಾಷ್ಟ್ರ ರಾಜಧಾನಿ ದೆಹಲಿ, ವಾಣಿಜ್ಯ ರಾಜಧಾನಿ ಮುಂಬೈ ಹಾಗೂ ಕೋಲ್ಕತ್ತದಲ್ಲಿ 1 ಕೆಜಿ ಬೆಳ್ಳಿಯ ದರ 69,300 ರೂ. ಇದ್ದರೆ, ಚೆನ್ನೈನಲ್ಲಿ 1 ಕೆಜಿ ಬೆಳ್ಳಿಯ ದರ 74,200 ರೂ. ಆಗಿದೆ.

ಒಟ್ಟಾರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಮುಂದುವರಿದಿದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ.

ಇದನ್ನೂ ಓದಿ: ಕೆಲವೇ ದಿನಗಳಲ್ಲಿ ರೈತರ ಖಾತೆಗೆ ಹಣ: ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಒಮ್ಮೆ ನೋಡಿ

ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಸೇರಿ ಹಲವು ಕಾರಣಗಳಿಂದ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ಷೇರು ಮಾರುಕಟ್ಟೆಯ ಪ್ರಭಾವದಿಂದಲೂ ಚಿನ್ನದ ಬೆಲೆ ಏರಿಕೆ - ಇಳಿಕೆಯಾಗಬಹುದು.
Published by:Sandhya M
First published: