Gold Price Today: ಮತ್ತೆ ಸ್ವಲ್ಪ ಏರಿಕೆಯಾದ ಚಿನ್ನದ ಬೆಲೆ - ನಿಮ್ಮ ನಗರದಲ್ಲಿ ಹೇಗಿದೆ ದರ ನೋಡಿ

Gold And Silver Price Today: ಆರ್ಥಿಕ ಸಂಕಷ್ಟದ ಕಾಲದಲ್ಲಿ ಕೈಯನ್ನು ಹಿಡಿಯುವ ನಂಬಿಕಸ್ಥ ಗೆಳೆಯ ಎಂದು ನಂಬಲಾಗಿರುವ ಚಿನ್ನವು ಈಗ ಹೂಡಿಕೆಯ ವಸ್ತುವಾಗಿಯೂ ಪ್ರಾಮುಖ್ಯತೆ ಪಡೆದಿದೆ. ಹಾಗಾಗಿ, ನಮ್ಮ ದೇಶದಲ್ಲಷ್ಟೆ ಅಲ್ಲ, ಜಗತ್ತಿನಾದ್ಯಂತ ಬಂಗಾರಕ್ಕೆ ಇರುವ ಬೇಡಿಕೆ ಅಷ್ಟಿಷ್ಟಲ್ಲ.

ಚಿನ್ನ

ಚಿನ್ನ

  • Share this:
ನಿನ್ನೆಗೆ ಹೋಲಿಸಿದರೆ ಇಂದು ಭಾರತದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ (Gold Price)  ಒಂದು ಗ್ರಾಂಗೆ ರೂ. 10 ರೂ. ಏರಿಕೆಯಾಗಿದೆ. ನಿನ್ನೆ ಒಂದು ಗ್ರಾಂ ಆಭರಣದ (jewelry) ಚಿನ್ನದ ಬೆಲೆ ರೂ. 4,760 ಇದ್ದದ್ದು ಇಂದು 4,770 ರೂಪಾಯಿಗೆ ಏರಿದೆ. ಕಳೆದ ಕೆಲ ಸಮಯದಿಂದ ಚಿನ್ನದ ಬೆಲೆಗಳಲ್ಲಿ ಅಲ್ಪ ಪ್ರಮಾಣದ ಏರಿಳಿತಗಳು ಆಗುತ್ತಲೇ ಇದ್ದು ಇದಕ್ಕೆ ಪ್ರಮುಖ ಕಾರಣ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉಂಟಾಗುತ್ತಿರುವ ಕಚ್ಚಾ ತೈಲದಲ್ಲಾಗುತ್ತಿರುವ ಬೆಲೆ ಏರಿಕೆ ಹಾಗೂ ಇತರೆ ಜಾಗತಿಕ ಅಂಶಗಳೇ ಆಗಿವೆ.

ಇನ್ನೂ, ಈ ಬಂಗಾರದ ಮೌಲ್ಯ ಜಾಗತಿಕ ಮಾರುಕಟ್ಟೆಯಲ್ಲೂ ಅಪಾರವಾಗಿದೆ. ಸಾಕಷ್ಟು ದೇಶಗಳು ವಿದೇಶಿ ವಿನಿಮಯ ರೂಪದಲ್ಲಿ ಚಿನ್ನದ ಸಂಗ್ರಹ ಹೊಂದಿರುವುದು ಎಲ್ಲರಿಗೂ ಗೊತ್ತೆ ಇದೆ, ಏಕೆಂದರೆ ಚಿನ್ನ ಎಲ್ಲ ದೇಶಗಳಲ್ಲೂ ಮಾನ್ಯತೆ ಪಡೆದಿದ್ದು ಎಲ್ಲರಿಂದಲೂ ಸ್ವೀಕರಿಸಲ್ಪಡುತ್ತದೆ. ಅದರಲ್ಲೂ ವಿಶೇಷವಾಗಿ ಭಾರತ ದೇಶ ಎಂದರೆ ಕೇಳಬೇಕೇ, ಮೊದಲಿನಿಂದಲೂ ಭಾರತದಲ್ಲಿ ಬಂಗಾರಕ್ಕಿರುವ ವಿಶೇಷತೆಯೇ ಬೇರೆ. ಮದುವೆಯಿಂದ ಹಿಡಿದು ಅನೇಕ ಇತರೆ ಶುಭ ಕಾರ್ಯಗಳಲ್ಲಿ ಭಾರತೀಯರು ಬಂಗಾರವನ್ನು ಯಥೇಚ್ಚವಾಗಿ ಬಳಸುತ್ತಾರೆ. ಅದರಲ್ಲೂ ನವಜಾತ ಶಿಶು ಇರಲಿ ಅಥವಾ ಹೊಸದಾಗಿ ಮದುವೆ ಮಾಡಿಕೊಂಡ ದಂಪತಿಗಳಿರಲಿ ಅವರಲ್ಲಿ ಬಂಗಾರದ ಯಾವುದಾದರೂ ವಸ್ತು ಅಥವಾ ಸಿಂಗಾರದ ಸಾಮಾನು ಇದ್ದೇ ಇರುತ್ತದೆ.

ಕಷ್ಟದ ಸಮಯದಲ್ಲಿ ಸಹಾಯಕ್ಕೆ ಬರುವ ಚಿನ್ನ

ಕಳೆದ ಹಲವು ವರ್ಷಗಳಿಂದ ಚಿನ್ನವು ಹಣದುಬ್ಬರದ ವಿರುದ್ಧ ಒಂದು ರಕ್ಷಣಾತ್ಮಕ ಬೇಲಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಬಹುದು. ಹೂಡಿಕೆದಾರರು ಚಿನ್ನವನ್ನು ಪ್ರಮುಖ ಹೂಡಿಕೆಯ ವಸ್ತುವನ್ನಾಗಿ ನೋಡುತ್ತಿದ್ದಾರೆ. ಹಾಗಾಗಿ, ಚಿನ್ನವು ಮಾರುಕಟ್ಟೆಯಲ್ಲಿ ಒಂದು ಉತ್ತಮ ಹೂಡಿಕೆಯ ವಸ್ತುವಾಗಿ ಗುರುತಿಸಿಕೊಂಡಿದೆ. ಇಂದು ಚಿನ್ನದ ಹೂಡಿಕೆ ಬಹು ಸುರಕ್ಷಿತ ಹೂಡಿಕೆ ಎಂದೇ ಹಲವು ತಜ್ಞರು ಹೇಳುತ್ತಾರೆ. ಹಾಗಾಗಿ ಅದರಲ್ಲೂ ವಿಶೇಷವಾಗಿ ಭಾರತೀಯರಿಗೆ ಚಿನ್ನದ ಆಕರ್ಷಣೆ ತುಸು ಹೆಚ್ಚೇ ಎಂದು ಹೇಳಬಹುದು.

ಆರ್ಥಿಕ ಸಂಕಷ್ಟದ ಕಾಲದಲ್ಲಿ ಕೈಯನ್ನು ಹಿಡಿಯುವ ನಂಬಿಕಸ್ಥ ಗೆಳೆಯ ಎಂದು ನಂಬಲಾಗಿರುವ ಚಿನ್ನವು ಈಗ ಹೂಡಿಕೆಯ ವಸ್ತುವಾಗಿಯೂ ಪ್ರಾಮುಖ್ಯತೆ ಪಡೆದಿದೆ. ಹಾಗಾಗಿ, ನಮ್ಮ ದೇಶದಲ್ಲಷ್ಟೆ ಅಲ್ಲ, ಜಗತ್ತಿನಾದ್ಯಂತ ಬಂಗಾರಕ್ಕೆ ಇರುವ ಬೇಡಿಕೆ ಅಷ್ಟಿಷ್ಟಲ್ಲ. ಭಾರತದ ಮಾರುಕಟ್ಟೆಗಳಲ್ಲಿ ಇಂದು ಚಿನ್ನ ಖರೀದಿ ಸಹಜ ಸಂಗತಿಯಾಗಿದ್ದು ದಿನದಲ್ಲೇ ಕೋಟ್ಯಂತರ ರೂಪಾಯಿಗಳಷ್ಟು ವ್ಯವಹಾರವನ್ನು ಈ ವ್ಯವಹಾರ ಹೊಂದಿದೆ. ಬೆಂಗಳೂರಿನಲ್ಲಿ ಇಂದು 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 47,700 ಆಗಿದೆ.

ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರಗಳ ಕುರಿತು ಒಂದು ನೋಟ ಬೀರೋಣ.

ಒಂದು ಗ್ರಾಂ (1GM)

22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,770

24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,204

ಎಂಟು ಗ್ರಾಂ (8GM)

22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 38,160

24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,632

ಹತ್ತು ಗ್ರಾಂ (10GM)

22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 47,700

24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 52,040

ಇದನ್ನೂ ಓದಿ: ತಿಂಗಳಿಗೆ 10 ಸಾವಿರ ಕಟ್ಟಿ, ಕೊನೆಯಲ್ಲಿ 16 ಲಕ್ಷ ಗಳಿಸಿ! ಸೂಪರ್​ ಸೇವಿಂಗ್ಸ್-ರಿಸ್ಕ್​ ಕೂಡ ಕಮ್ಮಿ​​

ನೂರು ಗ್ರಾಂ (100GM)

22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,77,000

24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,20,400

ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,700 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 47,760, ರೂ. 47,700, ರೂ. 47,700 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,700 ರೂ. ಆಗಿದೆ.

ಬೆಳ್ಳಿ ದರ

ಚಿನ್ನದಂತೆ ಸಾಮಾನ್ಯವಾಗಿ ಬೆಳ್ಳಿ ದರಗಳಲ್ಲೂ ವ್ಯತ್ಯಾಸ ಆಗುತ್ತಲೇ ಇರುತ್ತದೆ. ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಅತ್ಯಲ್ಪ ಏರಿಕೆಯಾಗಿದೆ. ಇಂದು ಭಾರತದ ಮಾರುಕಟ್ಟೆಯಲ್ಲಿ ಒಂದು ಕೆಜಿಗೆ ಬೆಳ್ಳಿ ಬೆಲೆ 62,100 ರೂ. ಆಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನೆ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ.

ಇದನ್ನೂ ಓದಿ: Ration Card ನಲ್ಲಿ ಹೆಂಡ್ತಿ, ಮಕ್ಕಳ ಹೆಸರು ಸೇರಿಸ್ಬೇಕಾ? ತುಂಬಾ ಸುಲಭ, ಈ ಸಿಂಪಲ್​ ಸ್ಟೆಪ್ಸ್​ ಫಾಲೋ ಮಾಡಿ

ಪ್ರಸ್ತುತ, ಬೆಂಗಳೂರು ನಗರದಲ್ಲಿ ಇಂದು 10gm, 100gm, 1000gm (1ಕೆಜಿ) ಬೆಳ್ಳಿ ದರಗಳು ಕ್ರಮವಾಗಿ ರೂ. 680, ರೂ. 6,800 ಹಾಗೂ ರೂ. 68,000 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 68,000 ಆಗಿದ್ದರೆ ದೆಹಲಿಯಲ್ಲಿ ರೂ. 62,100 ಮುಂಬೈನಲ್ಲಿ ರೂ. 62,100 ಹಾಗೂ ಕೊಲ್ಕತ್ತದಲ್ಲೂ ರೂ. 62,100 ಗಳಾಗಿದೆ.
Published by:Sandhya M
First published: