Gold Price Today: ಮತ್ತೆ ಇಳಿಕೆ ಕಂಡ ಹಳದಿ ಲೋಹ- ಬೆಂಗಳೂರಿನಲ್ಲಿ ಇಂದಿನ ರೇಟ್ ಹೀಗಿದೆ

Gold And Silver Price: ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Gold Rate on Dec 4, 2021: ದೇಶದಲ್ಲಿಂದು ಚಿನ್ನದ ಬೆಲೆ (Gold Price) ಇಳಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಇಂದು ಚಿನ್ನದ ಬೆಲೆ ಮತ್ತಷ್ಟು ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,580 ರೂ. ಇತ್ತು.ಇಂದು 130 ರೂ. ಬೆಲೆ ಕಡಿಮೆಯಾಗಿದ್ದು, 46,450 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 47,580 ರೂ. ಇತ್ತು. ಇಂದು 130 ರೂ. ಬೆಲೆ ಕಡಿಮೆಯಾಗಿ 47,450 ರೂ.ಆಗಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?

ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ಇಂದು 48,490 ರೂ. ಆಗಿದೆ. ನಿನ್ನೆ ಬೆಲೆಗಿಂತ 160 ರೂ ಕಡಿಮೆಯಾಗಿದೆ.ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ 44,450 ರೂ. ಇದ್ದು ಇದು ಸಹ 150 ರೂ ಕಡಿಮೆಯಾಗಿದೆ.. ಹಾಗೆಯೇ ಮೈಸೂರು ಹಾಗೂ ಮಂಗಳೂರಿನಲ್ಲೂ ಇದೇ ಬೆಲೆ ಇದೆ.

ವಿವಿಧ ನಗರಗಳಲ್ಲಿ ಚಿನ್ನದ ದರ ಎಷ್ಟಿದೆ?

ಭಾರತದಲ್ಲಿ ಹೆಚ್ಚು ಜನಸಂಖ್ಯೆ ಇರುವ ಹಾಗೆ ಆಭರಣ ಪ್ರಿಯರ ಜನಸಂಖ್ಯೆಯೂ ಕಡಿಮೆ ಏನಿಲ್ಲ. ಈ ಹಿನ್ನೆಲೆ ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 48 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಚೆನ್ನೈನಲ್ಲಿ 48,800 ರೂ. ಇದ್ದರೆ, ಮುಂಬೈನಲ್ಲಿ 47,450 ರೂ., ದೆಹಲಿಯಲ್ಲಿ 50,840 ರೂ. ಹಾಗೂ ಕೋಲ್ಕತ್ತದಲ್ಲಿ 49,550 ರೂ. ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಶಿಕ್‌ನಲ್ಲೂ ಹೆಚ್ಚೂ ಕಡಿಮೆ 48 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

ಇದನ್ನೂ ಓದಿ: ನೋಟೀಸ್ ಪೀರಿಯಡ್ ಮಾಡದೇ ಕೆಲಸ ಬಿಡುತ್ತೀರಾ? ಸರ್ಕಾರಕ್ಕೆ ಕಟ್ಟಬೇಕು ಭಾರೀ ತೆರಿಗೆ

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.

ಇಂದಿನ ಬೆಳ್ಳಿ ದರ:

ಬಂಗಾರದ ಬೆಲೆ ದೇಶದಲ್ಲಿ ಇಳಿಕೆಯಾಗಿದ್ದರೆ, ಬೆಳ್ಳಿ ದರ (Silver Rate) ದೇಶದಲ್ಲಿ ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 60,700 ರೂ. ಇತ್ತು. ಇಂದು 500 ರೂ. ಹೆಚ್ಚಾಗಿ 61,200 ರೂ. ಆಗಿದೆ. ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 61,200 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 65,300 ರೂ. ಆಗಿದೆ. ಇನ್ನು, ಮುಂಬೈ, ದೆಹಲಿ ಹಾಗೂ ಕೋಲ್ಕತ್ತದಲ್ಲಿ ಸಹ 61,200 ರೂ. ದರ ಇದೆ.

ಬೆಂಗಳೂರು ದಕ್ಷಿಣ ಭಾರತದಲ್ಲಿ ಬೆಳ್ಳಿಯಂತಹ ಲೋಹದ ಎರಡನೇ ಅತಿ ದೊಡ್ಡ ಮಾರುಕಟ್ಟೆಯಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಖರೀದಿಸಲು ಯೋಜಿಸುವಾಗ, ಬ್ರ್ಯಾಂಡೆಡ್‌ ಆಭರಣಗಳನ್ನು ಮಾರಾಟ ಮಾಡುವ ಪ್ರಮಾಣೀಕೃತ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸುವುದು ಉತ್ತಮ. ಬೆಂಗಳೂರಿನಲ್ಲಿ ಹೂಡಿಕೆ ಉದ್ದೇಶಗಳಿಗಾಗಿ ಬೆಳ್ಳಿ ಅತ್ಯಂತ ಜನಪ್ರಿಯ ವಸ್ತು.

ಕೊರೋನಾ ವೈರಸ್ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್‌ಡೌನ್‌ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್‌ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.

ಇದನ್ನೂ ಓದಿ: ಡಿಜಿಟಲ್ ಕ್ರಾಂತಿಯಿಂದ ಹೊಸ ವಿಶ್ವ; ಭಾರತ ಮುಂಚೂಣಿಯಲ್ಲಿ ಇರಲಿದೆ: ಮುಕೇಶ್ ಅಂಬಾನಿ

ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.
Published by:Sandhya M
First published: