Gold and Silver price on July 18, 2022: ಭಾರತವು ಚಿನ್ನದ (Gold) ಮೇಲಿನ ಆಮದು ಸುಂಕ ಹೆಚ್ಚಿಸುತ್ತಿದ್ದು ಮುಂಬರುವ ದಿನಗಳಲ್ಲಿ ಚಿನ್ನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಹಾಗಾಗಿ ಚಿನ್ನ ಇನ್ನಷ್ಟು ದುಬಾರಿ ಆಗೋ ಮುಂಚೆ ಇಂದೇ ಅದನ್ನು ಕೊಳ್ಳಲು ಉತ್ತಮ ಸಮಯ. ಅಲ್ಲದೆ, ಕಳೆದ ಕೆಲ ಸಮಯದಿಂದ ಚಿನ್ನದ ಬೆಲೆಗಳಲ್ಲಿ (Gold Price) ಅಲ್ಪ ಪ್ರಮಾಣದ ಏರಿಳಿತಗಳು ಆಗುತ್ತಲೇ ಇದ್ದು ಇದಕ್ಕೆ ಪ್ರಮುಖ ಕಾರಣ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ (International Market) ಉಂಟಾಗುತ್ತಿರುವ ಮಾರುಕಟ್ಟೆ ಸಂಬಂಧಿತ ವಿದ್ಯಮಾನಗಳು ಹಾಗೂ ಕಚ್ಚಾ ತೈಲದಲ್ಲಾಗಿರುವ ಬೆಲೆ ಏರಿಕೆ ಹಾಗೂ ಇತರೆ ಜಾಗತಿಕ ಅಂಶಗಳೇ ಆಗಿವೆ. ಇನ್ನು ನಿನ್ನೆಗೆ ಹೋಲಿಸಿದರೆ ಇಂದು ಭಾರತದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಅತ್ಯಲ್ಪ ಇಳಿಕೆಯಾಗಿದೆ. ನಿನ್ನೆಯ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂ ಆಭರಣ ಚಿನ್ನದ ಬೆಲೆಯಲ್ಲಿ ಕೇವಲ ಒಂದು ರೂಪಾಯಿ ಇಳಿಕೆಯಾಗಿದ್ದು ರೂ. 4,620 ಇದ್ದದ್ದು ಇಂದು ರೂ. 4,619ಕ್ಕೆ ಇಳಿದಿದೆ. ಇಂದು ಮಾರುಕಟ್ಟೆಯಲ್ಲಿ ಒಂದು ಕೆಜಿಗೆ ಬೆಳ್ಳಿ ಬೆಲೆ (Silver Price) 55,600 ರೂ. ಆಗಿದೆ.
ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರಗಳ ಕುರಿತು ತಿಳಿದುಕೊಳ್ಳೋಣ…
ಒಂದು ಗ್ರಾಂ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,619
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,039
ಎಂಟು ಗ್ರಾಂ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 36,952
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,312
ಹತ್ತು ಗ್ರಾಂ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,190
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 50,390
ನೂರು ಗ್ರಾಂ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,61,900
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,03,900
ಬೆಂಗಳೂರು ಹಾಗೂ ಇತರೇ ನಗರಗಳಲ್ಲಿ ಚಿನ್ನದ ದರ
ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,290 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 46,260, ರೂ. 46,190, ರೂ. 46,190 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 46,190 ರೂ. ಆಗಿದೆ.
ಇದನ್ನೂ ಓದಿ: Gautam Adani: ಬಿಲ್ ಗೇಟ್ಸ್ರನ್ನೇ ಹಿಂದಿಕ್ಕಿದ ಗೌತಮ್ ಅದಾನಿ! ಫೋರ್ಬ್ಸ್ ಶ್ರೀಮಂತರ ಪಟ್ಟಿಯಲ್ಲಿ 4ನೇ ಸ್ಥಾನ
ಇಂದಿನ ಬೆಳ್ಳಿ ದರ
ಚಿನ್ನದಂತೆ ಸಾಮಾನ್ಯವಾಗಿ ಬೆಳ್ಳಿ ದರಗಳಲ್ಲೂ ವ್ಯತ್ಯಾಸ ಆಗುತ್ತಲೇ ಇರುತ್ತದೆ. ನಿನ್ನೆಗೆ ಹೋಲಿಸಿದರೆ ಇಂದು ಭಾರತದಲ್ಲಿ ಬೆಳ್ಳಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ. ಆದಾಗ್ಯೂ ಕಳೆದ ತಿಂಗಳಿನಲ್ಲಿ ಅಂದರೆ ಜೂನ್ ಒಂದರಂದು ಬೆಳ್ಳಿಯ ಗರಿಷ್ಠ ಬೆಲೆ ಪ್ರತಿ ಕೆಜಿಗೆ ರೂ. 60,600 ಗೆ ತಲುಪಿತ್ತು ಹಾಗೂ ಜೂನ್ 30 ರಂದು ಕನಿಷ್ಠ ಬೆಲೆ ರೂ. 58,600ಗೆ ಕುಸಿದಿತ್ತು. ಇದೀಗ ಈ ತಿಂಗಳಿನಲ್ಲಿ ಬೆಳ್ಳಿ ದರ ಮತ್ತಷ್ಟು ಕುಸಿದಿದ್ದು ಬೆಳ್ಳಿ ಕೊಳ್ಳಲು ಇದು ಉತ್ತಮ ಸಮಯ ಎಂದೇ ಹೇಳಬಹುದು. ಇಂದು ಮಾರುಕಟ್ಟೆಯಲ್ಲಿ ಒಂದು ಕೆಜಿಗೆ ಬೆಳ್ಳಿ ಬೆಲೆ 55,600 ರೂ. ಆಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನೆ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ.
ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ಬೆಂಗಳೂರಿನಲ್ಲೂ ಬೆಳ್ಳಿ ದರದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಸಾಕಷ್ಟು ಇಳಿಕೆಯಾಗಿದೆ. ನಗರದಲ್ಲಿ ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ದರಗಳು ಕ್ರಮವಾಗಿ ರೂ. 607, ರೂ. 6,070 ಹಾಗೂ ರೂ. 60,700 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 60,700 ಆಗಿದ್ದರೆ ದೆಹಲಿಯಲ್ಲಿ ರೂ. 55,600 ಮುಂಬೈನಲ್ಲಿ ರೂ. 55,600 ಹಾಗೂ ಕೊಲ್ಕತ್ತದಲ್ಲೂ ರೂ. 55,600 ಗಳಾಗಿದೆ.
ಇದನ್ನೂ ಓದಿ: GST ಲೆಕ್ಕಾಚಾರ ಹೇಗಿರುತ್ತದೆ ಗೊತ್ತಾ? ನಾಳೆಯಿಂದ ಯಾವೆಲ್ಲ ವಸ್ತುಗಳು ದುಬಾರಿಯಾಗಲಿವೆ?
ವಿ.ಸೂ: ಇಲ್ಲಿ ಕೊಡಲಾದ ಎಲ್ಲ ದರಗಳು ಮಾರುಕಟ್ಟೆಯ ಬೆಲೆಗಳನ್ನು ಪ್ರತಿನಿಧಿಸುತ್ತವೆ ಹಾಗೂ ಜಿಎಸ್ಟಿ, ಟಿಸಿಎಸ್ ಹಾಗೂ ಇನ್ನಿತರೆ ಇರಬಹುದಾದ ಶುಲ್ಕಗಳನ್ನು ಒಳಗೊಂಡಿಲ್ಲ. ಹೆಚ್ಚು ನಿಖರ ಬೆಲೆಗಳಿಗಾಗಿ ನಿಮ್ಮ ಹತ್ತಿರದ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ