Gold and Silver Price: ಏರಿಕೆ ಕಂಡ ಬಂಗಾರದ ಬೆಲೆ, ಬೆಳ್ಳಿ ದರದಲ್ಲಿ ಇಳಿಕೆ! ನಿಮ್ಮೂರಲ್ಲಿ ರೇಟ್ ಎಷ್ಟಿದೆ ತಿಳಿಯಿರಿ

ಭಾರತದ ಮಾರುಕಟ್ಟೆಗಳಲ್ಲಿ ಇಂದು ಚಿನ್ನ ಖರೀದಿ ಸಹಜ ಸಂಗತಿಯಾಗಿದ್ದು ದಿನದಲ್ಲೇ ಕೋಟ್ಯಂತರ ರೂಪಾಯಿಗಳಷ್ಟು ವ್ಯವಹಾರವನ್ನು ಈ ವ್ಯವಹಾರ ಹೊಂದಿದೆ. ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 46,950 ಆಗಿದೆ.

ಚಿನ್ನದ ಆಭರಣಗಳ ಸಂಗ್ರಹ ಚಿತ್ರ

ಚಿನ್ನದ ಆಭರಣಗಳ ಸಂಗ್ರಹ ಚಿತ್ರ

  • Share this:
    Gold and Silver Price on July 25, 2022: ಕಳೆದ ಎರಡು ದಿನದ ಹಿಂದೆ ಚಿನ್ನದ ಬೆಲೆ (Gold Price) ಗಮನಾರ್ಹವಾಗಿ ಇಳಿಕೆ ಕಂಡಿತ್ತು. ಇದು ಗ್ರಾಹಕರಿಗೂ (Customers) ಖರೀದಿಗೆ ಉತ್ತಮ ಸಮಯವಾಗಿತ್ತು. ಆದರೆ ಇಂದು ಮತ್ತೆ ಮಾರುಕಟ್ಟೆಯಲ್ಲಿ (Market) ಚಿನ್ನ ದುಬಾರಿಯಾಗಿದೆ. ಇಂದು ಒಂದು ಗ್ರಾಂ ಚಿನ್ನದ ಬೆಲೆ 4,690 ರೂಪಾಯಿ ಆಗಿದೆ. ಕಳೆದೆರೆಡು ದಿನಗಳಿಗೆ ಹೋಲಿಕೆ ಮಾಡಿದರೆ  1 ಗ್ರಾಂ ಚಿನ್ನದ ಮೇಲೆ 90 ರೂ ಹೆಚ್ಚಳವಾಗಿದೆ. ಆದರೆ ಭಾರತವು ಚಿನ್ನದ ಮೇಲಿನ ಆಮದು ಸುಂಕ ಹೆಚ್ಚಿಸುತ್ತಿದ್ದು ಮುಂಬರುವ ದಿನಗಳಲ್ಲಿ ಚಿನ್ನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಹಾಗಾಗಿ ಚಿನ್ನ ಇನ್ನಷ್ಟು ದುಬಾರಿ ಆಗೋ ಮುಂಚೆ ಅದನ್ನು ಈಗಲೇ ಖರೀದಿಸುವುದು ಉತ್ತಮ.

    ಭಾರತದ ಮಾರುಕಟ್ಟೆಗಳಲ್ಲಿ ಇಂದು ಚಿನ್ನ ಖರೀದಿ ಸಹಜ ಸಂಗತಿಯಾಗಿದ್ದು ದಿನದಲ್ಲೇ ಕೋಟ್ಯಂತರ ರೂಪಾಯಿಗಳಷ್ಟು ವ್ಯವಹಾರವನ್ನು ಈ ವ್ಯವಹಾರ ಹೊಂದಿದೆ. ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 46,950 ಆಗಿದೆ.

    ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರಗಳ ಕುರಿತು ಈ ಲೇಖನದಲ್ಲಿ ತಿಳಿದುಕೊಳ್ಳೋಣ

     ಒಂದು ಗ್ರಾಂ (1GM)
    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,690
    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,116

    ಎಂಟು ಗ್ರಾಂ (8GM)
    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,520
    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,928

    ಹತ್ತು ಗ್ರಾಂ (10GM)
    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,900
    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,160

    ನೂರು ಗ್ರಾಂ (100GM)
    22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,69,000
    24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,11,600

    ಬೆಂಗಳೂರಿನಲ್ಲಿ ಎಷ್ಟಿದೆ ಚಿನ್ನದ ದರ?

    ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,950 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 46,960, ರೂ. 46,900, ರೂ. 46,900 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 46,960 ರೂ. ಆಗಿದೆ.

    ಇದನ್ನೂ ಓದಿ: Medicare Fraud: ಮೆಡಿಕೇರ್ ವಂಚನೆಯಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಲು 5 ಸಲಹೆಗಳಿವು

    ಇಂದಿನ ಬೆಳ್ಳಿ ದರ

    ಚಿನ್ನದಂತೆ ಸಾಮಾನ್ಯವಾಗಿ ಬೆಳ್ಳಿ ದರಗಳಲ್ಲೂ ವ್ಯತ್ಯಾಸ ಆಗುತ್ತಲೇ ಇರುತ್ತದೆ. ಇಂದು ಭಾರತದ ಮಾರುಕಟ್ಟೆಯಲ್ಲಿ ಬೆಳ್ಳಿ ದರ ಒಂದು ಕೆಜಿಗೆ ಬೆಳ್ಳಿ ಬೆಲೆ 55,100 ರೂ. ಆಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನೆ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ.

    ಬೆಂಗಳೂರಲ್ಲಿ ಎಷ್ಟಿದೆ ಸಿಲ್ವರ್ ರೇಟ್?

    ಬೆಂಗಳೂರಿನಲ್ಲೂ ಬೆಳ್ಳಿ ದರದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಸಾಕಷ್ಟು ಇಳಿಕೆಯಾಗಿದೆ. ನಗರದಲ್ಲಿ ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ದರಗಳು ಕ್ರಮವಾಗಿ ರೂ. 612, ರೂ. 6,120 ಹಾಗೂ ರೂ. 61,200 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 61,200 ಆಗಿದ್ದರೆ ದೆಹಲಿಯಲ್ಲಿ ರೂ. 55,100 ಮುಂಬೈನಲ್ಲಿ ರೂ. 55,100 ಹಾಗೂ ಕೊಲ್ಕತ್ತದಲ್ಲೂ ರೂ. 55,100 ಗಳಾಗಿದೆ.

    ಇದನ್ನೂ ಓದಿ: Investment: ಮಗಳ ಭವಿಷ್ಯಕ್ಕಾಗಿ ಹಣ ಎಲ್ಲಿ ಹೂಡಿಕೆ ಮಾಡಬೇಕೆಂಬ ಗೊಂದಲ ಇದೆಯಾ? ಇಲ್ಲಿದೆ ಉತ್ತರ

    ವಿ.ಸೂ: ಇಲ್ಲಿ ಕೊಡಲಾದ ಎಲ್ಲ ದರಗಳು ಮಾರುಕಟ್ಟೆಯ ಬೆಲೆಗಳನ್ನು ಪ್ರತಿನಿಧಿಸುತ್ತವೆ ಹಾಗೂ ಜಿಎಸ್ಟಿ, ಟಿಸಿಎಸ್ ಹಾಗೂ ಇನ್ನಿತರೆ ಇರಬಹುದಾದ ಶುಲ್ಕಗಳನ್ನು ಒಳಗೊಂಡಿಲ್ಲ. ಹೆಚ್ಚು ನಿಖರ ಬೆಲೆಗಳಿಗಾಗಿ ನಿಮ್ಮ ಹತ್ತಿರದ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸಿ.
    First published: