Gold Price Today: ಬೆಲೆ ಏರಿಕೆ ನಡುವೆ ಖರೀದಿದಾರರಿಗೆ ಸಿಹಿ ಸುದ್ದಿ; ಇಂದೇ ಖರೀದಿಸಿ ಚಿನ್ನ, ಬೆಳ್ಳಿ; ಇಲ್ಲಿದೆ ಇಂದಿನ ದರ

ಕಳೆದ 4 - 5 ದಿನಗಳಿಂದ ಚಿನ್ನ ಹಾಗೂ ಬೆಳ್ಳಿಯ ದರ (Gold And Silver Price) ಏರಿಕೆಯ ಹಾದಿಯಲ್ಲಿದೆ. ಇಂದು ದೇಶದಲ್ಲಿ ಚಿನ್ನದ ಬೆಲೆ (Gold Price)ಯಲ್ಲಿ ಯಥಾಸ್ಥಿತಿ ಇದೆ. ಬೆಂಗಳೂರಿನಲ್ಲಿ (Bengaluru) ಸಹ ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ.

ಚಿನ್ನ

ಚಿನ್ನ

  • Share this:
Gold Rate on Feb 12, 2022: ಕೇಂದ್ರ ಬಜೆಟ್‌ ಕಳೆದು ಒಂದು ವಾರದ ನಂತರ ದೇಶದಲ್ಲಿ ಬಂಗಾರ ಹಾಗೂ ಬೆಳ್ಳಿ ದರ ಏರಿಕೆಯ ಹಾದಿಯಲ್ಲಿದೆ. ಕೇಂದ್ರ ಬಜೆಟ್‌ ನಂತರ ಚಿನ್ನದ ದರ ಇಳಿಕೆಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ ಈಗ ಬೆಲೆ ಏರಿಕೆಯ (Price Hike) ಬಿಸಿ ತಾಗುತ್ತಿದೆ. ಕಳೆದ 4 - 5 ದಿನಗಳಿಂದ ಚಿನ್ನ ಹಾಗೂ ಬೆಳ್ಳಿಯ ದರ (Gold And Silver Price) ಏರಿಕೆಯ ಹಾದಿಯಲ್ಲಿದೆ. ಇಂದು ದೇಶದಲ್ಲಿ ಚಿನ್ನದ ಬೆಲೆ (Gold Price)ಯಲ್ಲಿ ಯಥಾಸ್ಥಿತಿ ಇದೆ. ಬೆಂಗಳೂರಿನಲ್ಲಿ (Bengaluru) ಸಹ ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ.

ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 45,800 ರೂ. ಇತ್ತು. ಇಂದು ಸಹ 45,800 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 49,970 ರೂ. ಇತ್ತು. ಇಂದೂ ಸಹ 49,970 ರೂ. ಇದೆ. ಇನ್ನು, ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ದರ ಎಷ್ಟಿದೆ ಎಂಬುದನ್ನು ವಿವರವಾಗಿ ನೋಡೋಣ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?

ನೀವು ಚಿನ್ನ ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ, ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) 49,690 ರೂ. ಇತ್ತು. ಇಂದು ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 45,8000 ರೂ. ಇತ್ತು. ಇಂದು ಸಹ 45,800 ರೂ. ಆಗಿದೆ. ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ಮಂಗಳೂರಿನಲ್ಲೂ ಇದೇ ಬೆಲೆ ಇದೆ.

ಇದನ್ನೂ ಓದಿ:  Money Transfer; ಇದ್ದಕ್ಕಿದ್ದಂತೆ ನಿಮ್ಮ ಖಾತೆಗೆ ಲಕ್ಷ ಲಕ್ಷ ಹಣ ಬಂದ್ರೆ ಏನ್ ಮಾಡಬೇಕು ಗೊತ್ತಾ?

ಭಾರತ ಆಭರಣ ಪ್ರಿಯರಿಗೆ ಹೆಸರುವಾಸಿಯಾಗಿದೆ. ದೇಶದಲ್ಲಿ ಚಿನ್ನದ ಖರೀದಿ, ವಹಿವಾಟು ಹೆಚ್ಚೇ ಆಗುತ್ತಿರುತ್ತದೆ. ಮದುವೆ, ಇತರೆ ಸಮಾರಂಭಗಳು ಮುಂತಾದ ಕಾರಣಗಳಿಂದ ಚಿನ್ನ, ಬೆಳ್ಳಿ, ವಜ್ರ ಮುಂತಾದ ಆಭರಣಗಳನ್ನು ಮಾಡಿಸಿಕೊಳ್ಳುವವರು ಇದ್ದೆ ಇರುತ್ತಾರೆ.

ಇನ್ನು ಹಲವರು ಆಪತ್ಕಾಲದಲ್ಲಿ ಚಿನ್ನ ಅಡ ಇಡಲು ಅಥವಾ ಮಾರಲು ಬೇಕಾಗುತ್ತದೆಂದು ಸಹ ಅದರ ಮೇಲೆ ಹೂಡಿಕೆ ಮಾಡುತ್ತಾರೆ. ಹಾಗೆ, ಚಿನ್ನ ಸ್ವಲ್ಪ ಕಡಿಮೆ ಬೆಲೆಯಲ್ಲಿದ್ದಾಗ ಖರೀದಿಸಿ ನಂತರ ಬೆಲೆ ಹೆಚ್ಚಾದಾಗ ಮಾರುವವರು ಅಂದರೆ ಚಿನ್ನದ ಮೇಲೆ ಹೂಡಿಕೆದಾರರ ಸಂಖ್ಯೆಯೂ ಹೆಚ್ಚುತ್ತಿದೆ ಎನ್ನಲಾಗಿದೆ. ಚಿನ್ನವನ್ನು ಬಾಂಡ್‌ ರೂಪದಲ್ಲೂ ಖರೀದಿಸಲಾಗುತ್ತಿದೆ.

ಇನ್ನು, ದೇಶದ ಇತರೆ ನಗರಗಳಾದ ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆ, ಕೊಯಮತ್ತೂರು, ಮಧುರೈನಲ್ಲಿ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 50 ಸಾವಿರದ ಆಸುಪಾಸಿನಲ್ಲೇ ಇದೆ.

ಈ ಮಧ್ಯೆ, ದೇಶದ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈನಲ್ಲಿ 50,230 ರೂ. ಇದ್ದರೆ, ಮುಂಬೈನಲ್ಲಿ 49,970 ರೂ. ಇದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 49,970 ರೂ. ಹಾಗೂ ಕೋಲ್ಕತ್ತದಲ್ಲಿ 24 ಕ್ಯಾರೆಟ್‌ ಬಂಗಾರದ ಬೆಲೆ 49,970 ರೂ. ಆಗಿದೆ.

ಇದೇ ರೀತಿ ಚಂಡೀಗಢ, ಸೂರತ್‌, ನಾಶಿಕ್‌ನಲ್ಲೂ 24 ಕ್ಯಾರೆಟ್‌ ಚಿನ್ನದ ಬೆಲೆ 49 ಸಾವಿರದಿಂದ 50 ಸಾವಿರದ ಆಸುಪಾಸಿನಲ್ಲೇ ಇದೆ.

ಇದನ್ನೂ ಓದಿ:  PAN ಮತ್ತು Aadhaar Card ಲಿಂಕ್ ಮಾಡಲು ಸಮಸ್ಯೆ ಆಗ್ತಿದೆಯಾ? ಕಾರಣ ತಿಳಿದುಕೊಳ್ಳಿ

ಬೆಳ್ಳಿ ದರ:

ದೇಶದಲ್ಲಿ ಚಿನ್ನದ ಬೆಲೆ ತುಟ್ಟಿಯಾಗುತ್ತಿರುವಂತೆ ಬೆಳ್ಳಿ ದರ (Silver Rate) ಸಹ ಹೆಚ್ಚಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 66,800 ರೂ. ಇತ್ತು. ಇಂದು 100 ರೂ. ಏರಿಕೆಯಾಗಿ 66,900 ರೂ. ಆಗಿದೆ.

ಆದರೆ, ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ 66,800 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೇರಳ, ವಿಜಯವಾಡ, ವಿಶಾಖಪಟ್ಟಣಂ, ಕೊಯಮತ್ತೂರು, ಮಧುರೈನಲ್ಲಿ ಸಹ 1 ಕೆಜಿ ಬೆಳ್ಳಿಯ ಬೆಲೆ 66,800 ರೂ. ಆಗಿದೆ.

ಇನ್ನು, ಮೆಟ್ರೋಪಾಲಿಟನ್‌ ನಗರಗಳಾದ ದೆಹಲಿ, ಮುಂಬೈ ಹಾಗೂ ಕೋಲ್ಕತ್ತದಲ್ಲಿ 62,600 ರೂ. ಆಗಿದೆ.

ಒಟ್ಟಾರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಮುಂದುವರಿದಿದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ.

ಸೂಚನೆ: ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನಾಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ.
Published by:Mahmadrafik K
First published: