Gold Price Today: ಮಕ್ಕಳ ಮದುವೆಗೆ ಚಿನ್ನ ಖರೀದಿಸುವ ಪ್ಲಾನ್ ಇದೆಯಾ? ಅಂಗಡಿ ತೆರೆಯುವ ಮೊದಲು ಇವತ್ತಿನ ಬೆಲೆ ತಿಳಿದುಕೊಳ್ಳಿ

ನೀವು ಚಿನ್ನ ಖರೀದಿಗೆ ಹೋಗುತ್ತಿದ್ರೆ ಇವತ್ತಿನ ಬೆಲೆ ಎಷ್ಟಿದೆ ಎಂಬುದನ್ನು ತಿಳಿದುಕೊಳ್ಳಲೇಬೇಕು. ಇದರಿಂದ ಚಿನ್ನ (Gold) ಖರೀದಿ ಸುಲಭವಾಗಲಿದೆ. ಕಳೆದೊಂದು ವಾರದಿಂದ ಚಿನ್ನದ ಬೆಲೆ ಸಾಕಷ್ಟು ಏರಿಳಿತ ಕಾಣುತ್ತಿದೆ. ಇವತ್ತಿನ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.

ಚಿನ್ನ

ಚಿನ್ನ

  • Share this:
Gold Rate on Jan 17, 2022: ದೇಶದಲ್ಲಿಂದು ಚಿನ್ನದ ಬೆಲೆ (Gold Price)ಯಲ್ಲಿ ಏರಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಇಂದು ಬಂಗಾರದ ಬೆಲೆ ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,080 ರೂ. ಇತ್ತು. ಇಂದು 10 ರೂ. ಹೆಚ್ಚಾಗಿ 47,090 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 49,080 ರೂ. ಇತ್ತು. ಇಂದು 10 ರೂ. ಹೆಚ್ಚಾಗಿ 49,090 ರೂ. ಆಗಿದೆ. ಇನ್ನು, ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ದರ ಎಷ್ಟಿದೆ ಎಂಬುದನ್ನು ಇಲ್ಲಿ ನೋಡೋಣ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?

ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) 10 ರೂ. ಕಡಿಮೆಯಾಗಿದ್ದು, 49,090 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ 10 ರೂ, ಇಳಿಕೆಯಾಗಿ 44,990 ರೂ. ಇದೆ.

ಇನ್ನು, ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ಮಂಗಳೂರಿನಲ್ಲೂ ಇದೇ ಬೆಲೆ ಇದೆ. ಭಾರತದಲ್ಲಿ ಆಭರಣ ಪ್ರಿಯರ ಜನಸಂಖ್ಯೆ ಕಡಿಮೆ ಏನಿಲ್ಲ. ಆಪತ್ಕಾಲದಲ್ಲಿ ಚಿನ್ನ ಅಡ ಇಡಲು ಅಥವಾ ಮಾರಾಟ ಮಾಡಲು ಬೇಕಾಗುತ್ತದೆಂದು ಅದರ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ.

ಇದನ್ನೂ ಓದಿ: Petrol And Diesel Price: 11 ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ ಇಳಿಕೆ: ನಿಮ್ಮ ನಗರದ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಇತರೆ ನಗರಗಳಾದ ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24  ಕ್ಯಾರೆಟ್‌ ಚಿನ್ನದ ಬೆಲೆ 48 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

ಈ ಮಧ್ಯೆ, ದೇಶದ ಮೆಟ್ರೋ ನಗರಗಳಾದ ಚೆನ್ನೈನಲ್ಲಿ 49,440 ರೂ. ಇದ್ದರೆ, ಮುಂಬೈನಲ್ಲಿ 49,090 ರೂ., ದೆಹಲಿಯಲ್ಲಿ 51,430 ರೂ. ಹಾಗೂ ಕೋಲ್ಕತ್ತದಲ್ಲಿ 49,890 ರೂ. ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಶಿಕ್‌ನಲ್ಲೂ 49 ಸಾವಿರದ ಆಸುಪಾಸಿನಲ್ಲೇ ಇದೆ.

ಬೆಳ್ಳಿ ದರ:

ಬಂಗಾರದ ಬೆಲೆ ದೇಶದಲ್ಲಿ ಏರಿಕೆಯಾಗಿದ್ದರೆ, ಬೆಳ್ಳಿ ದರ (Silver Rate) ಸಹ ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 61,600 ರೂ. ಇತ್ತು. ಇಂದು 100 ರೂ. ಏರಿಕೆಯಾಗಿ 61,700 ರೂ. ಆಗಿದೆ.  ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 65,500 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೇರಳ, ಕೊಯಮತ್ತೂರು, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 65,500 ರೂ. ಆಗಿದೆ. ಇನ್ನು, ಮೆಟ್ರೋ ನಗರಗಳಾದ ಮುಂಬೈ, ದೆಹಲಿ ಹಾಗೂ ಕೋಲ್ಕತ್ತದಲ್ಲಿ 61,700 ರೂ. ದರ ಇದೆ.

ಇದನ್ನೂ ಓದಿ:  PM Svanidhi Yojana: ಕೇಂದ್ರ ಸರ್ಕಾರದಿಂದ ನೇರವಾಗಿ ನಿಮ್ಮ ಖಾತೆಗೆ 10 ಸಾವಿರ ರೂಪಾಯಿ: ಮಾಡಬೇಕಾಗಿರೋದು ಇಷ್ಟೇ!

ಒಟ್ಟಾರೆ ದೇಶದ ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಇದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನಾಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ.

ಬೆಂಗಳೂರಿನಲ್ಲಿ ಬೆಳ್ಳಿ ಖರೀದಿಸಲು ಯೋಜಿಸುವಾಗ, ಬ್ರ್ಯಾಂಡೆಡ್‌ ಆಭರಣಗಳನ್ನು ಮಾರಾಟ ಮಾಡುವ ಪ್ರಮಾಣೀಕೃತ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸುವುದು ಉತ್ತಮ. ಬೆಂಗಳೂರಿನಲ್ಲಿ ಹೂಡಿಕೆ ಉದ್ದೇಶಗಳಿಗಾಗಿ ಬೆಳ್ಳಿ ಅತ್ಯಂತ ಜನಪ್ರಿಯ ವಸ್ತು.

ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ

ಕೊರೋನಾ ವೈರಸ್ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್‌ಡೌನ್‌ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್‌ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.

ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.
Published by:Mahmadrafik K
First published: