Gold and Silver Price Today : ಸ್ಥಿರತೆ ಕಾಯ್ದುಕೊಂಡ ಚಿನ್ನ, ಕುಸಿದ ಬೆಳ್ಳಿ : ಇಂದಿನ ದರ ಹೀಗಿದೆ

ಇನ್ನು ಪೆಟ್ರೋಲ್ ಡೀಸೆಲ್ ಗಳಂತೆ ಬಂಗಾರದ ಬೆಲೆಗಳಲ್ಲೂ ಆಗಾಗ ವ್ಯತ್ಯಾಸಗಳು ಆಗುತ್ತಲೇ ಇರುತ್ತವೆ. ಇಂದು ಭಾರತದ ಮಾರುಕಟ್ಟೆಯಲ್ಲಿ ಬಂಗಾರದ (22 ಕ್ಯಾರಟ್) ದರದಲ್ಲಿ ನಿನ್ನೆಗೆ ಹೋಲಿಸಿದರೆ ಬದಲಾವಣೆ ಕಂಡುಬಂದಿಲ್ಲ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ನಿನ್ನೆಗೆ ಹೋಲಿಸಿದರೆ ಇಂದು ಭಾರತದ ಮಾರುಕಟ್ಟೆ(Indian Market)ಯಲ್ಲಿ ಆಭರಣ ಚಿನ್ನದ ಬೆಲೆ(Gold Price)ಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ, ಹಾಗಾಗಿ ಇಂದು ಬಂಗಾರ ಖರೀದಿ ಮಾಡಬಯಸುವವರು ಆ ಕೆಸಲ ಮಾಡಬಹುದು. ಕಳೆದ ಕೆಲದಿನಗಳಿಂದ ಅಂತಾರಾಷ್ಟ್ರೀಯ ಮಾರುಕಟ್ಟೆ (International Market) ಯಲ್ಲಿ ಉಂಟಾಗುತ್ತಿರುವ ಕಚ್ಚಾ ತೈಲದ ಬೆಲೆ (Crude Oil Price) ಏರಿಕೆ ಹಾಗೂ ಈಗಲೂ ಮುಂದುವರೆದಿರುವ ರಷ್ಯಾ-ಉಕ್ರೇನ್ ಯುದ್ಧದ  (Russia Ukraine War)ಪರಿಣಾಮದಿಂದಾಗಿ ಜಾಗತಿಕವಾಗಿ ಚಿನ್ನ-ಬೆಳ್ಳಿ ದರಗಳ (Gold And Silver Price) ಮೇಲೆಯೂ ಬೀಳುತ್ತಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನ ಹಾಗೂ ಬೆಳ್ಳಿ ದರಗಳು ಒಂದು ರೀತಿಯಲ್ಲಿ ಕಣ್ಣು ಮುಚ್ಚಾಲೆ ಆಟ ಆಡುತ್ತಿವೆ. ಆದಾಗ್ಯೂ, ಬೆಲೆಯಲ್ಲಿ ಅಷ್ಟೊಂದು ದೊಡ್ಡ ಬದಲಾಣೆಗಳು ಕಂಡುಬರುತ್ತಿಲ್ಲ.

ಕಳೆದ ಹಲವು ಸಮಯದಿಂದ ಚಿನ್ನವು ಮಾರುಕಟ್ಟೆಯಲ್ಲಿ ಒಂದು ಉತ್ತಮ ಹೂಡಿಕೆಯ ವಸ್ತುವಾಗಿ ಗುರುತಿಸಿಕೊಂಡಿದೆ. ಇಂದು ಚಿನ್ನದ ಹೂಡಿಕೆ ಬಹು ಸುರಕ್ಷಿತ ಹೂಡಿಕೆ ಎಂದೇ ಹಲವು ತಜ್ಞರು ಹೇಳುತ್ತಾರೆ. ಹಾಗಾಗಿ ಅದರಲ್ಲೂ ವಿಶೇಷವಾಗಿ ಭಾರತೀಯರಿಗೆ ಚಿನ್ನದ ಆಕರ್ಷಣೆ ತುಸು ಹೆಚ್ಚೇ ಎಂದು ಹೇಳಬಹುದು.

ಆರ್ಥಿಕ ಸಂಕಷ್ಟದ ಕಾಲದಲ್ಲಿ ಕೈಯನ್ನು ಹಿಡಿಯುವ ನಂಬಿಕಸ್ಥ ಗೆಳೆಯ ಎಂದು ನಂಬಲಾಗಿರುವ ಚಿನ್ನವು ಈಗ ಹೂಡಿಕೆಯ ವಸ್ತುವಾಗಿಯೂ ಪ್ರಾಮುಖ್ಯತೆ ಪಡೆದಿದೆ. ಹಾಗಾಗಿ, ನಮ್ಮ ದೇಶದಲ್ಲಷ್ಟೆ ಅಲ್ಲ, ಜಗತ್ತಿನಾದ್ಯಂತ ಬಂಗಾರಕ್ಕೆ ಇರುವ ಬೇಡಿಕೆ ಅಷ್ಟಿಷ್ಟಲ್ಲ.

ಭಾರತದಲ್ಲಿ ಬಂಗಾರಕ್ಕೆ ವಿಶೇಷ ಸ್ಥಾನ

ಅದರಲ್ಲೂ ವಿಶೇಷವಾಗಿ ಭಾರತ ದೇಶ ಎಂದರೆ ಕೇಳಬೇಕೆ? ಮೊದಲಿನಿಂದಲೂ ಭಾರತದಲ್ಲಿ ಬಂಗಾರಕ್ಕಿರುವ ವಿಶೇಷತೆಯೇ ಬೇರೆ. ಮದುವೆಯಿಂದ ಹಿಡಿದು ಅನೇಕ ಇತರೆ ಶುಭ ಕಾರ್ಯಗಳಲ್ಲಿ ಭಾರತೀಯರು ಬಂಗಾರವನ್ನು ಯಥೇಚ್ಚವಾಗಿ ಬಳಸುತ್ತಾರೆ. ಅದರಲ್ಲೂ ನವಜಾತ ಶಿಷು ಇರಲಿ ಅಥವಾ ಹೊಸದಾಗಿ ಮದುವೆ ಮಾಡಿಕೊಂಡ ದಂಪತಿಗಳಿರಲಿ ಅವರಲ್ಲಿ ಬಂಗಾರದ ಯಾವುದಾದರೂ ವಸ್ತು ಅಥವಾ ಸಿಂಗಾರದ ಸಾಮಾನು ಇದ್ದೆ ಇರುತ್ತದೆ.

ಅಲ್ಲದೆ ಕಳೆದ ಕೆಲ ದಶಕಗಳಿಂದ ಜಾಗತಿಕ ಮಾರುಕಟ್ಟೆಯಾಗಲಿ ಅಥವಾ ದೇಶೀಯ ಮಾರುಕಟ್ಟೆಯಾಗಲಿ, ಹೂಡಿಕೆದಾರರು ಬಂಗಾರದ ನಿವೇಶನದ ಕುರಿತು ಹೆಚ್ಚು ಆಸಕ್ತರಾಗಿದ್ದಾರೆ. ಹಣದುಬ್ಬರದ ವಿರುದ್ಧವೂ ಸಹ ಬಂಗಾರ ಖರೀದಿ ಒಂದೊಳ್ಳೆಯ ಮಾರ್ಗವಾಗಿದೆ ಎಂಬುದು ಹಲವು ಮಾರುಕಟ್ಟೆ ತಜ್ಞರ ಅಭಿಪ್ರಾಯವಾಗಿದೆ. ಹಾಗಾಗಿ, ಇಂದು ಬಹು ಜನರು ಬಂಗಾರವನ್ನು ಒಂದು ಪ್ರಮುಖ ಹೂಡಿಕೆಯ ಮಾರ್ಗವಾಗಿ ಗುರುತಿಸುತ್ತಿದ್ದಾರೆ.

ಇದನ್ನೂ ಓದಿ:  Forbes India ಶ್ರೀಮಂತ ಬಿಲಿಯನೇರ್‌ ಪಟ್ಟಿಯಲ್ಲಿ ಮುಕೇಶ್ ಅಂಬಾನಿ ನಂಬರ್ 1; ಇನ್ನೂ ಯಾರೆಲ್ಲ ಇದ್ದಾರೆ?

ದರದಲ್ಲಿ ಯಾವುದೇ ಬದಲಾವಣೆಗಳಿಲ್ಲ

ಹಾಗಾಗಿಯೇ ಇಂದಿಗೂ ಭಾರತದ ಮಾರುಕಟ್ಟೆಗಳಲ್ಲಿ ಬಂಗಾರ ಖರೀದಿ ಎಂಬುದು ಬಹು ಸಾಮಾನ್ಯ ಸಂಗತಿಯಾಗಿದ್ದು ದಿನದಲ್ಲೇ ಕೋಟ್ಯಂತರ ರೂಪಾಯಿಗಳಷ್ಟು ವ್ಯವಹಾರವನ್ನು ಬಂಗಾರ ಹೊಂದಿದೆ. ಇನ್ನು ಪೆಟ್ರೋಲ್ ಡೀಸೆಲ್ ಗಳಂತೆ ಬಂಗಾರದ ಬೆಲೆಗಳಲ್ಲೂ ಆಗಾಗ ವ್ಯತ್ಯಾಸಗಳು ಆಗುತ್ತಲೇ ಇರುತ್ತವೆ. ಇಂದು ಭಾರತದ ಮಾರುಕಟ್ಟೆಯಲ್ಲಿ ಬಂಗಾರದ (22 ಕ್ಯಾರಟ್) ದರದಲ್ಲಿ ನಿನ್ನೆಗೆ ಹೋಲಿಸಿದರೆ ಬದಲಾವಣೆ ಕಂಡುಬಂದಿಲ್ಲ. ದೇಶದಲ್ಲಿ ಒಂದು ಗ್ರಾಂ ಆಭರಣ ಚಿನ್ನದ ಬೆಲೆ ಇಂದು ರೂ. 4,780 ಆಗಿದೆ.

ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರಗಳ ಕುರಿತು ಬನ್ನಿ ಒಂದು ಪಕ್ಷಿ ನೋಟ ಬೀರೋಣ.

ಒಂದು ಗ್ರಾಂ (1GM)

22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,780

24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,214

ಎಂಟು ಗ್ರಾಂ (8GM)

22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 38,240

24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,712

ಹತ್ತು ಗ್ರಾಂ (10GM)

22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 47,800

24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 52,140

ನೂರು ಗ್ರಾಂ (100GM)

22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,78,000

24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,21,400

ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,800 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ.48,160, ರೂ. 47,800, ರೂ. 47,800 ಆಗಿದೆ.

ಬೆಳ್ಳಿ ದರ

ನಿನ್ನೆಗೆ ಹೋಲಿಸಿದರೆ ಇಂದು ಭಾರತದಲ್ಲಿ ಬೆಳ್ಳಿ ದರದಲ್ಲಿ ಕುಸಿತವಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನೆ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ.

ಇದನ್ನೂ ಓದಿ: Good News: ಸರ್ಕಾರವೇ ನಿಮ್ಮ ಮದುವೆ ಮಾಡುತ್ತೆ! ಬೇಗನೆ ಅರ್ಜಿ ಸಲ್ಲಿಸಿ, ಹೇಗೆ ಸಲ್ಲಿಸೋದು ವಿವರ ಇಲ್ಲಿದೆ

ಇಂದು, ಬೆಂಗಳೂರಿನಲ್ಲಿ 10gm, 100gm, 1000gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 710, ರೂ. 7,100 ಹಾಗೂ ರೂ. 71,000 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ 71,000 ಆಗಿದ್ದರೆ ದೆಹಲಿಯಲ್ಲಿ 66,300 ಮುಂಬೈನಲ್ಲಿ 66,300 ಹಾಗೂ ಕೋಲ್ಕತ್ತದಲ್ಲೂ ರೂ. 66,300 ಗಳಾಗಿದೆ.
Published by:Mahmadrafik K
First published: