Gold Price: ನಾಳಿನ ಯುಗಾದಿ ಹಬ್ಬಕ್ಕೆ ಚಿನ್ನ-ಬೆಳ್ಳಿ ಖರೀದಿಸಲು ಇಂದೇ ಶುಭ ಮುಹೂರ್ತ! ಯಾಕೆ ಅಂತ ಇಲ್ಲಿ ಓದಿ...

ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,650 ರೂ. ಇತ್ತು. ಇಂದು ಸಹ ಅಷ್ಟೇ ಬೆಲೆ ಇದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 51,980 ರೂ. ಇತ್ತು. ಇಂದು ಸಹ ಅದೇ ದರ ಇದೆ.

ಬಂಗಾರದ ಆಭರಣಗಳ ಸಂಗ್ರಹ ಚಿತ್ರ

ಬಂಗಾರದ ಆಭರಣಗಳ ಸಂಗ್ರಹ ಚಿತ್ರ

  • Share this:
    Gold Rate on April 1, 2022: ಆರ್ಥಿಕ ವರ್ಷದ (Financial Year) ಮೊದಲ ತಿಂಗಳ ಮೊದಲನೇ ದಿನವಾದ (First Day) ಇಂದು ಚಿನ್ನದ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಆದರೆ, ಬೆಳ್ಳಿ ದರದಲ್ಲಿ ಕುಸಿತ ಕಂಡಿದೆ. ಹೌದು, ದೇಶದಲ್ಲಿಂದು ಚಿನ್ನದ ಬೆಲೆಯಲ್ಲಿ (Gold Price) ಸ್ಥಿರತೆ ಕಾಯ್ದುಕೊಂಡಿದೆ. ಬೆಂಗಳೂರಿನಲ್ಲಿ (Bengaluru) ಸಹ ಚಿನ್ನದ ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,650 ರೂ. ಇತ್ತು. ಇಂದು ಸಹ ಅಷ್ಟೇ ಬೆಲೆ ಇದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 51,980 ರೂ. ಇತ್ತು. ಇಂದು ಸಹ ಅದೇ ದರ ಇದೆ. ಇನ್ನು, ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರ (Silver Price) ಎಷ್ಟಿದೆ ಎಂಬುದನ್ನು ವಿವರವಾಗಿ ನೋಡೋಣ..

    ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ?

    ನೀವು ಚಿನ್ನ ಖರೀದಿಸುವ ಆಲೋಚನೆಯಲ್ಲಿದ್ದೀರಾ, ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ಬೆಲೆ ನಿನ್ನೆ 51,980 ರೂ. ಇತ್ತು. ಇಂದು ಸಹ ಅದೇ ದರ ಇದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,650 ರೂ. ಇತ್ತು. ಇಂದು ಸಹ ಅಷ್ಟೇ ಬೆಲೆ ಇದೆ. ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ಮಂಗಳೂರಿನಲ್ಲೂ ಇದೇ ಬೆಲೆ ಇದೆ.

    ಮಹಾನಗರಗಳಲ್ಲಿ ಇಂದಿನ ಗೋಲ್ಡ್ ರೇಟ್

    ದೇಶದ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈನಲ್ಲಿ 24 ಕ್ಯಾರೆಟ್‌ ಚಿನ್ನದ ಬೆಲೆ 52,290 ರೂ. ಇದ್ದರೆ, ರಾಷ್ಟ್ರ ರಾಜಧಾನಿ ದೆಹಲಿ, ಮುಂಬೈನಲ್ಲಿ 24 ಕ್ಯಾರೆಟ್‌ ಬಂಗಾರದ ಬೆಲೆ 51,980 ರೂ. ಆಗಿದೆ. ಇನ್ನೊಂದೆಡೆ, ಕೋಲ್ಕತ್ತದಲ್ಲಿ 24 ಕ್ಯಾರೆಟ್‌ ಚಿನ್ನದ ಬೆಲೆ 51,970 ರೂ. ಆಗಿದೆ.

    ಇದನ್ನೂ ಓದಿ: Shocking News: ಕಳೆದ 7 ವರ್ಷಗಳಿಂದ ದೇಶಕ್ಕೆ ಪ್ರತಿದಿನ 100 ಕೋಟಿ ಲಾಸ್!

    ಇನ್ನು, ದೇಶದ ಇತರೆ ನಗರಗಳಾದ ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆ, ಕೊಯಮತ್ತೂರು, ಮಧುರೈ, ಚಂಡೀಗಢ, ಸೂರತ್‌, ನಾಶಿಕ್‌ನಲ್ಲೂ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 52 ಸಾವಿರದ ಆಸುಪಾಸಿನಲ್ಲೇ ಇದೆ.

    ದೇಶದಲ್ಲಿ ಇಂದಿನ ಬೆಳ್ಳಿ ದರ ಎಷ್ಟು?

    ದೇಶದಲ್ಲಿಂದು ಚಿನ್ನದ ಬೆಲೆ ಯತಾಸ್ತಿತಿ ಕಾಯ್ದುಕೊಂಡಿದ್ದರೆ ಬೆಳ್ಳಿ ದರ (Silver Rate) ದಲ್ಲಿ ಭಾರಿ ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 72,100 ರೂ. ಇತ್ತು. ಇಂದು 5,300 ರೂ. ಕಡಿಮೆಯಾಗಿ 66,800 ರೂ. ಆಗಿದೆ.

    ರಾಜ್ಯದಲ್ಲಿ ಬೆಳ್ಳಿ ಬೆಲೆಯಲ್ಲಿ ಇಳಿಕೆ

    ಇನ್ನು, ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ ಸಹ ಬೆಳ್ಳಿಯ ದರದಲ್ಲಿ ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಯ ಬೆಲೆ 72,100 ರೂ. ಇದ್ದರೆ, ಇಂದು 800 ರೂ. ಇಳಿಕೆಯಾಗಿ 71,300 ರೂ. ಆಗಿದೆ.

    ಇತರೇ ಮಹಾನಗರಗಳಲ್ಲಿ ಸಿಲ್ವರ್ ರೇಟ್

    ಈ ಮಧ್ಯೆ, ರಾಷ್ಟ್ರ ರಾಜಧಾನಿ ದೆಹಲಿ, ವಾಣಿಜ್ಯ ರಾಜಧಾನಿ ಮುಂಬೈ ಹಾಗೂ ಕೋಲ್ಕತ್ತದಲ್ಲಿ 1 ಕೆಜಿ ಬೆಳ್ಳಿಯ ದರ 66,800 ರೂ. ಆಗಿದೆ. ಇದೇ ರೀತಿ ಚೆನ್ನೈ, ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣಂ, ಕೊಯಮತ್ತೂರು, ಮಧುರೈ, ಕೇರಳ, ಭುವನೇಶ್ವರದಲ್ಲಿ ಸಹ 1 ಕೆಜಿ ಬೆಳ್ಳಿಯ ಬೆಲೆ 71,300 ರೂ. ಇದೆ.

    ಇದನ್ನೂ ಓದಿ: Bank Holidays in April: ಬ್ಯಾಂಕ್​ಗಳಿಗೆ ಸರಣಿ ರಜೆ! ನಿಮ್ಮೂರಲ್ಲಿ ಯಾವಾಗ ಬ್ಯಾಂಕ್ ಮುಚ್ಚಿರುತ್ತೆ?

    ಒಟ್ಟಾರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಮುಂದುವರಿದಿದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಸೇರಿ ಹಲವು ಕಾರಣಗಳಿಂದ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ಷೇರು ಮಾರುಕಟ್ಟೆಯ ಪ್ರಭಾವದಿಂದಲೂ ಚಿನ್ನದ ಬೆಲೆ ಏರಿಕೆ - ಇಳಿಕೆಯಾಗಬಹುದು.
    Published by:Annappa Achari
    First published: