Gold And Silver Price On April 18, 2022: ನಿನ್ನೆಯ ಮಾರುಕಟ್ಟೆ (Market) ಬೆಲೆಯನ್ನು (Rate) ಇಂದು ಹಾಗೆಯೇ ಉಳಿಸಿಕೊಂಡ ಚಿನ್ನ (Gold) ಮತ್ತು ಬೆಳ್ಳಿ (Silver). ಹಾಗೇ ನೋಡಿದರೆ ಒಂದು ವಾರದ ಅವಧಿಯ ಹಿಂದಿನ ಬೆಲೆ ಗಮನಿಸಿದರೆ ಚಿನ್ನದ ಬೆಲೆಯಲ್ಲಿ (Gold Price) ಹೆಚ್ಚಳವಾಗಿರುವುದರಲ್ಲಿ ಸಂಶಯವೇ ಇಲ್ಲ. ಆದಾಗ್ಯೂ ಕಳೆದ ಎರಡು ದಿನಗಳಲ್ಲಿ ಸ್ವಲ್ಪ ಸ್ಥಿರತೆ ಕಂಡು ಬಂದಿದ್ದು ನಿನ್ನೆಯ ಬೆಲೆಗೆ ಹೋಲಿಸಿದರೆ ಇಂದು ಚಿನ್ನದ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡುಬಂದಿಲ್ಲ. ಕಳೆದ ಒಂದು ತಿಂಗಳಿಗಿಂತಲೂ ಅಧಿಕ ಸಮಯದಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉಂಟಾಗುತ್ತಿರುವ ಕಚ್ಚಾ ತೈಲದ (Crude oil) ಬೆಲೆ ಏರಿಕೆ ಮತ್ತು ಮುಂದುವರೆದಿರುವ ರಷ್ಯಾ-ಉಕ್ರೇನ್ ಯುದ್ಧದ (Russia Ukraine War) ಪರಿಣಾಮವು ಜಾಗತಿಕ ಮಟ್ಟದಲ್ಲಿ ಚಿನ್ನ ಹಾಗೂ ಬೆಳ್ಳಿ ದರಗಳ ಮೇಲೆ ಬೀರುತ್ತಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನ ಹಾಗೂ ಬೆಳ್ಳಿ ದರಗಳು ಒಂದು ರೀತಿಯಲ್ಲಿ ಕಣ್ಣು ಮುಚ್ಚಾಲೆ ಆಟ ಆಡುತ್ತಿದ್ದರೂ ಕಳೆದ ಎರಡು ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಸ್ಥಿರತೆ ಕಂಡು ಬಂದಿದೆ.
ಭಾರತದಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ?
ಇಂದಿಗೂ ಭಾರತದ ಮಾರುಕಟ್ಟೆಗಳಲ್ಲಿ ಬಂಗಾರ ಖರೀದಿ ಎಂಬುದು ಬಹು ಸಾಮಾನ್ಯ ಸಂಗತಿಯಾಗಿದ್ದು ದಿನದಲ್ಲೇ ಕೋಟ್ಯಂತರ ರೂಪಾಯಿಗಳಷ್ಟು ವ್ಯವಹಾರವನ್ನು ಬಂಗಾರ ಹೊಂದಿದೆ. ಇನ್ನು ಪೆಟ್ರೋಲ್ ಡೀಸೆಲ್ ಗಳಂತೆ ಬಂಗಾರದ ಬೆಲೆಗಳಲ್ಲೂ ಆಗಾಗ ವ್ಯತ್ಯಾಸಗಳು ಆಗುತ್ತಲೇ ಇರುತ್ತವೆ. ಇಂದು ಭಾರತದ ಮಾರುಕಟ್ಟೆಯಲ್ಲಿ ಬಂಗಾರದ (22 ಕ್ಯಾರೆಟ್) ದರದಲ್ಲಿ ನಿನ್ನೆಗೆ ಹೋಲಿಸಿದರೆ ಬದಲಾವಣೆ ಕಂಡುಬಂದಿಲ್ಲ. ದೇಶದಲ್ಲಿ ಇಂದು ಒಂದು ಗ್ರಾಂ ಆಭರಣ ಚಿನ್ನದ ಬೆಲೆ ಇಂದು ರೂ. 4,955 ಆಗಿದೆ.
ಒಂದು ಗ್ರಾಂ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,955
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,406
ಎಂಟು ಗ್ರಾಂ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 39,640
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 43,248
ಇದನ್ನೂ ಓದಿ: ಪೆಟ್ರೋಲ್-ಡೀಸೆಲ್ ಉಳಿಸಲು 2 ದಿನ ಸರ್ಕಾರಿ ರಜೆ! ನೇಪಾಳ ಸರ್ಕಾರಕ್ಕೆ ಹೀಗೊಂದು ಸಲಹೆ
ಹತ್ತು ಗ್ರಾಂ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 49,550
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 54,060
ನೂರು ಗ್ರಾಂ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,95,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,40,600
ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ
ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 49,550 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ.50,140, ರೂ. 49,550, ರೂ. 49,550 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 49,550 ರೂ. ಆಗಿದೆ.
ಇಂದಿನ ಬೆಳ್ಳಿ ದರ
ನಿನ್ನೆಗೆ ಹೋಲಿಸಿದರೆ ಇಂದು ಭಾರತದಲ್ಲಿ ಬೆಳ್ಳಿ ದರದಲ್ಲಿ ಕುಸಿತವಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನೆ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ.
ಬೆಂಗಳೂರಿನಲ್ಲಿ ಎಷ್ಟಿದೆ ಸಿಲ್ವರ್ ರೇಟ್?
ಇಂದು, ಬೆಂಗಳೂರಿನಲ್ಲಿ 10gm, 100gm, 1000gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 691, ರೂ. 6,910 ಹಾಗೂ ರೂ. 69,100 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 74,200 ಆಗಿದ್ದರೆ ದೆಹಲಿಯಲ್ಲಿ ರೂ. 69,100 ಮುಂಬೈನಲ್ಲಿ ರೂ. 69,100 ಹಾಗೂ ಕೊಲ್ಕತ್ತದಲ್ಲೂ ರೂ. 69,100 ಗಳಾಗಿದೆ.
ಇದನ್ನೂ ಓದಿ: Libya Oil: ತೈಲ ಉತ್ಪಾದನೆ ಬಂದ್, ತೈಲ ಬೆಲೆ ಏರಿಕೆ ಸಾಧ್ಯತೆ; ಲಿಬಿಯಾದಲ್ಲಿ ಜೋರಾಗುತ್ತಿದೆ ಗಲಾಟೆ
ಒಟ್ಟಾರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಮುಂದುವರಿದಿದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಸೇರಿ ಹಲವು ಕಾರಣಗಳಿಂದ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ಷೇರು ಮಾರುಕಟ್ಟೆಯ ಪ್ರಭಾವದಿಂದಲೂ ಚಿನ್ನದ ಬೆಲೆ ಏರಿಕೆ - ಇಳಿಕೆಯಾಗಬಹುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ