Gold Price Today: ಮತ್ತೆ ಏರಿಕೆ ಆಗುತ್ತಿದೆ ಚಿನ್ನದ ಬೆಲೆ: ಇಂದೇ ಖರೀದಿಸಿ, ಇಲ್ಲಿದೆ ಇವತ್ತಿನ ದರ

ನೀವು ಚಿನ್ನ ಖರೀದಿಗೆ ಹೋಗುತ್ತಿದ್ರೆ ಇವತ್ತಿನ ಬೆಲೆ ಎಷ್ಟಿದೆ ಎಂಬುದನ್ನು ತಿಳಿದುಕೊಳ್ಳಲೇಬೇಕು. ಇದರಿಂದ ಚಿನ್ನ (Gold) ಖರೀದಿ ಸುಲಭವಾಗಲಿದೆ. ಕಳೆದೊಂದು ವಾರದಿಂದ ಚಿನ್ನದ ಬೆಲೆ ಸಾಕಷ್ಟು ಏರಿಳಿತ ಕಾಣುತ್ತಿದೆ. ಇವತ್ತಿನ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.

ಚಿನ್ನ

ಚಿನ್ನ

  • Share this:

Gold Rate on Dec 6, 2021: ದೇಶದಲ್ಲಿಂದು ಚಿನ್ನದ ಬೆಲೆ (Gold Price) ಏರಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಇಂದು ಚಿನ್ನದ ಬೆಲೆ ಏರಿಕೆಯಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,500 ರೂ. ಇತ್ತು.ಇಂದು 10 ರೂ. ಬೆಲೆ ಹೆಚ್ಚಾಗಿದ್ದು, 46,510 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 47,500 ರೂ. ಇತ್ತು. ಇಂದು 10 ರೂ. ಬೆಲೆ ಏರಿಕೆಯಾಗಿ 47,510 ರೂ.ಆಗಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ಇಂದು 48,830 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ 44,760 ರೂ. ಇದೆ. ಹಾಗೆಯೇ ಮೈಸೂರು ಹಾಗೂ ಮಂಗಳೂರಿನಲ್ಲೂ ಇದೇ ಬೆಲೆ ಇದೆ.


ಭಾರತದಲ್ಲಿ ಹೆಚ್ಚು ಜನಸಂಖ್ಯೆ ಇರುವ ಹಾಗೆ ಆಭರಣ ಪ್ರಿಯರ ಜನಸಂಖ್ಯೆಯೂ ಕಡಿಮೆ ಏನಿಲ್ಲ. ಈ ಹಿನ್ನೆಲೆ ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 48 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.


ಚೆನ್ನೈನಲ್ಲಿ 49,220 ರೂ. ಇದ್ದರೆ, ಮುಂಬೈನಲ್ಲಿ 47,510 ರೂ., ದೆಹಲಿಯಲ್ಲಿ 51,170 ರೂ. ಹಾಗೂ ಕೋಲ್ಕತ್ತದಲ್ಲಿ 49,560 ರೂ. ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಶಿಕ್‌ನಲ್ಲೂ ಹೆಚ್ಚೂ ಕಡಿಮೆ 48 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.


ಇದನ್ಣೂ ಓದಿ:  PF ಖಾತೆದಾರರಿಗೆ ಸಿಗಲಿದೆ ₹ 1 ಲಕ್ಷದ ನೆರವು: ಹಣ ಹಿಂಪಡೆಯುವ ವಿಧಾನ ಇಲ್ಲಿದೆ

ನಗರದಿಂದ ನಗರಕ್ಕೆ ಚಿನ್ನದ ಬೆಲೆ ವ್ಯತ್ಯಾಸ 

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.


ಇಂದಿನ ಬೆಳ್ಳಿ ದರ:


ಬಂಗಾರದ ಬೆಲೆ ದೇಶದಲ್ಲಿ ಏರಿಕೆಯಾಗಿದ್ದರೆ, ಬೆಳ್ಳಿ ದರ (Silver Rate) ದೇಶದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 61,600 ರೂ. ಇತ್ತು. ಇಂದು ಸಹ ಅದೇ ಬೆಲೆ ಇದೆ. ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 61,600 ರೂ. ಆಗಿದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 65,500 ರೂ. ಆಗಿದೆ. ಇನ್ನು, ಮುಂಬೈ, ದೆಹಲಿ ಹಾಗೂ ಕೋಲ್ಕತ್ತದಲ್ಲಿ ಸಹ 61,600 ರೂ. ದರ ಇದೆ.


ಇದನ್ನೂ ಓದಿ:  ಕಡಿಮೆ ದರದಲ್ಲಿ ಮನೆ ಖರೀದಿಗೆ ಅವಕಾಶ ನೀಡಲಿದೆ Bank Of Baroda: ನೀವು ಮಾಡಬೇಕಾಗಿರೋದು ಇಷ್ಟೇ

ಹೂಡಿಕೆಗೆ ಬೆಳ್ಳಿ ಜನಪ್ರಿಯ ವಸ್ತು

ಬೆಂಗಳೂರು ದಕ್ಷಿಣ ಭಾರತದಲ್ಲಿ ಬೆಳ್ಳಿಯಂತಹ ಲೋಹದ ಎರಡನೇ ಅತಿ ದೊಡ್ಡ ಮಾರುಕಟ್ಟೆಯಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಖರೀದಿಸಲು ಯೋಜಿಸುವಾಗ, ಬ್ರ್ಯಾಂಡೆಡ್‌ ಆಭರಣಗಳನ್ನು ಮಾರಾಟ ಮಾಡುವ ಪ್ರಮಾಣೀಕೃತ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸುವುದು ಉತ್ತಮ. ಬೆಂಗಳೂರಿನಲ್ಲಿ ಹೂಡಿಕೆ ಉದ್ದೇಶಗಳಿಗಾಗಿ ಬೆಳ್ಳಿ ಅತ್ಯಂತ ಜನಪ್ರಿಯ ವಸ್ತು.


ಷೇರು ಮಾರುಕಟ್ಟೆಯ ಮೇಲೆ ಪರಿಣಾಮ

ಕೊರೋನಾ ವೈರಸ್ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್‌ಡೌನ್‌ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್‌ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.


ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.

Published by:Mahmadrafik K
First published: