Gold Price: ಇಂದು ಚಿನ್ನ, ಬೆಳ್ಳಿ ಮತ್ತಷ್ಟು ತುಟ್ಟಿ! ನಿಮ್ಮೂರಲ್ಲಿ ಗೋಲ್ಡ್, ಸಿಲ್ವರ್ ರೇಟ್ ಎಷ್ಟು?

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಆಭರಣ ಚಿನ್ನದ ಬೆಲೆ (ಹತ್ತು ಗ್ರಾಂ) ರೂ. 47,750 ಆಗಿದ್ದರೆ, 22 ಕ್ಯಾರಟ್ ಆಭರಣ ಚಿನ್ನದ ಬೆಲೆ ರೂ. 47,750 ಆಗಿದೆ. ಹಾಗಿದ್ರೆ ನಿಮ್ಮ ಊರಿನಲ್ಲಿ ಬೆಳ್ಳಿ ಹಾಗೂ ಬಂಗಾರದ ಬೆಲೆ ಎಷ್ಟಿದೆ? ಓದಿ ತಿಳಿದುಕೊಳ್ಳಿ...

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    Gold and Silver Price, March 23, 2022: ಮಾರುಕಟ್ಟೆಯಲ್ಲಿ ಒಂದೆಡೆ ಇಂಧನ ಬೆಲೆಗಳಲ್ಲಿ (Fuel Rate) ಏರಿಕೆಯಾಗಿದ್ದರೆ ಇನ್ನೊಂದೆಡೆ ಚಿನ್ನ (Gold) ಹಾಗೂ ಬೆಳ್ಳಿ ದರಗಳಲ್ಲಿ (Silver Price) ಮತ್ತೆ ಏರಿಕೆಯಾಗಿದೆ. ನಿನ್ನೆಗೆ ಹೋಲಿಸಿದರೆ ಪ್ರತಿ ಗ್ರಾಂ ಆಭರಣ (Jewellery) ಚಿನ್ನದ ಬೆಲೆಯಲ್ಲಿ 35 ರೂ. ಏರಿಕೆ ಕಂಡುಬಂದಿದೆ. ರಷ್ಯಾ-ಉಕ್ರೇನ್ ಯುದ್ಧದ (Russia-Ukraine War) ಪರಿಣಾಮ ಕೇವಲ ಕಚ್ಚಾ ತೈಲದ ಮೇಲೆಯಲ್ಲದೆ ಜಾಗತಿಕವಾಗಿ ಚಿನ್ನ-ಬೆಳ್ಳಿ ದರಗಳ ಮೇಲೆಯೂ ಬೀಳುತ್ತಿದೆ. ಕಳೆದ ಎರಡ್ಮೂರು ದಿನಗಳಿಂದ ಚಿನ್ನದ ಬೆಲೆಗಳಲ್ಲಿ ವ್ಯತ್ಯಾಸವಾಗುತ್ತಲೇ ಇತ್ತು. ದೇಶದಲ್ಲಿ ಒಂದು ಗ್ರಾಂ ಆಭರಣ ಚಿನ್ನದ ಬೆಲೆ ಇಂದು ರೂ. 4,775 ಆಗಿದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಇಂದು 22 ಕ್ಯಾರಟ್ ಆಭರಣ ಚಿನ್ನದ ಬೆಲೆ (ಹತ್ತು ಗ್ರಾಂ) ರೂ. 47,750 ಆಗಿದ್ದರೆ, 22 ಕ್ಯಾರಟ್ ಆಭರಣ ಚಿನ್ನದ ಬೆಲೆ (ಹತ್ತು ಗ್ರಾಂ) ರೂ. 47,750 ಆಗಿದೆ.

    .ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರಗಳ ಕುರಿತು  ತಿಳಿದುಕೊಳ್ಳೋಣ ಬನ್ನಿ…

    ಒಂದು ಗ್ರಾಂ (1GM)

    22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,775

    24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,210

    ಎಂಟು ಗ್ರಾಂ (8GM)

    22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 38,200

    24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,680

    ಹತ್ತು ಗ್ರಾಂ (10GM)

    22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 47,750

    24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 52,100

    ನೂರು ಗ್ರಾಂ (100GM)

    22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,77,500

    24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,21,000

    ಇದನ್ನೂ ಓದಿ: Petrol Price Today: ಎಲ್ಲೆಡೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ, ಹಲವು ನಗರಗಳಲ್ಲಿ 1 ರೂ.ಹೆಚ್ಚಳ

    ಬೆಂಗಳೂರು ಹಾಗೂ ಇತರೇ ನಗರಗಳಲ್ಲಿ ಚಿನ್ನದ ಬೆಲೆ

    ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಆಭರಣ ಚಿನ್ನದ ಬೆಲೆ (ಹತ್ತು ಗ್ರಾಂ) ರೂ. 47,750 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ.48,280, ರೂ. 47,750, ರೂ. 47,750 ಆಗಿದೆ. ದೆಹಲಿಯಲ್ಲಿ ಚಿನ್ನದ ಬೆಲೆ ಇಂದು ರೂ. 47,750 ಆಗಿದೆ.

    ಬೆಳ್ಳಿ ದರ

    ನಿನ್ನೆಗೆ ಹೋಲಿಸಿದರೆ ಇಂದು ಭಾರತದಲ್ಲಿ ಬೆಳ್ಳಿ ದರದಲ್ಲಿ ಅತ್ಯಲ್ಪ ಏರಿಕೆ ಕಂಡುಬಂದಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನೆ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ.

    ಬೆಂಗಳೂರು ಹಾಗೂ ಇತರೆಡೆ ಬೆಳ್ಳಿ ದರ

    ಇಂದು, ಬೆಂಗಳೂರಿನಲ್ಲಿ ಬೆಳ್ಳಿಯ ದರದಲ್ಲಿ ನಿನ್ನೆಗೆ ಹೋಲಿಸಿದರೆ ಸ್ವಲ್ಪ ಏರಿಕೆ ಕಂಡುಬಂದಿದೆ ಹಾಗೂ 10gm, 100gm, 1000gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 734, ರೂ. 7,340 ಹಾಗೂ ರೂ. 73,400 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ 73,400 ಆಗಿದ್ದರೆ ದೆಹಲಿಯಲ್ಲಿ 68,900 ಮುಂಬೈನಲ್ಲಿ 68,900 ಹಾಗೂ ಕೋಲ್ಕತ್ತದಲ್ಲೂ ರೂ. 68,900 ಗಳಾಗಿದೆ.

    ಇದನ್ನೂ ಓದಿ: Bank Holidays in April: ಏಪ್ರಿಲ್ ತಿಂಗಳಲ್ಲಿ ಬ್ಯಾಂಕ್​ಗಳಿಗೆ ಎಷ್ಟು ದಿನ ರಜೆಯಿದೆ? ಇಲ್ಲಿ ಚೆಕ್ ಮಾಡಿ

    ಒಟ್ಟಾರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಮುಂದುವರಿದಿದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಸೇರಿ ಹಲವು ಕಾರಣಗಳಿಂದ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ಷೇರು ಮಾರುಕಟ್ಟೆಯ ಪ್ರಭಾವದಿಂದಲೂ ಚಿನ್ನದ ಬೆಲೆ ಏರಿಕೆ - ಇಳಿಕೆಯಾಗಬಹುದು.
    Published by:Annappa Achari
    First published: