Gold Rate: ಮತ್ತಷ್ಟು ಇಳಿಕೆಯಾದ ಬಂಗಾರದ ಬೆಲೆ, ಚಿನ್ನ ಕೊಳ್ಳೋಕೆ ಇದೇ ರೈಟ್‌ ಟೈಂ!

ಬಂಗಾರದ ಬೆಲೆ ಈಗ ಕಳೆದ 2 ದಿನಗಳಿಂದ ಮತ್ತೆ ಇಳಿಕೆಯಾಗುತ್ತಿದೆ. ಇಂದು ದೇಶದಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಹಾಗಾದರೆ ಬೆಂಗಳೂರಿನಲ್ಲಿ ಎಷ್ಟಿದೆ ಚಿನ್ನ, ಬೆಳ್ಳಿ ಬೆಲೆ? ನಿಮ್ಮ ಊರಿನಲ್ಲಿ ಬೆಲೆ ಎಷ್ಟಾಗಿದೆ? ವಿವರಕ್ಕಾಗಿ ಈ ಸ್ಟೋರಿ ಓದಿ...

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    Gold Rate on Feb 18, 2022: ಕೇಂದ್ರ ಬಜೆಟ್‌ (Central Budget) ನಂತರ ಏರಿಕೆಯ ಹಾದಿಯಲ್ಲಿದ್ದ ಬಂಗಾರದ (Gold) ಬೆಲೆ (Rate) ಈಗ ಕಳೆದ 2 ದಿನಗಳಿಂದ ಮತ್ತೆ ಇಳಿಕೆಯಾಗುತ್ತಿದೆ. ಇಂದು ದೇಶದಲ್ಲಿ ಚಿನ್ನದ ಬೆಲೆಯಲ್ಲಿ (Gold Price) ಇಳಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಸಹ ಚಿನ್ನದ ಬೆಲೆಯಲ್ಲಿ ಕಡಿಮೆಯಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,200 ರೂ. ಇತ್ತು. ಇಂದು 400 ರೂ. ಇಳಿಕೆಯಾಗಿ 45,800 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 50,400 ರೂ. ಇತ್ತು. ಇಂದು 430 ರೂ. ಕಡಿಮೆಯಾಗಿ 49,970 ರೂ. ಆಗಿದೆ. ಇನ್ನು, ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ದರ ಎಷ್ಟಿದೆ ಎಂಬುದನ್ನು ವಿವರವಾಗಿ ನೋಡೋಣ..

    ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?

    ನೀವು ಚಿನ್ನ ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ, ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) 50,400 ರೂ. ಇತ್ತು.

    ಇಂದು 430 ರೂ. ಕಡಿಮೆಯಾಗಿ 49,970 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 46,200 ರೂ. ಇತ್ತು. ಇಂದು 400 ರೂ. ಇಳಿಕೆಯಾಗಿ 45,800 ರೂ. ಆಗಿದೆ. ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ಮಂಗಳೂರಿನಲ್ಲೂ ಇದೇ ಬೆಲೆ ಇದೆ.

    ಚಿನ್ನದ ಮೇಲೆ ಹೆಚ್ಚಾಗುತ್ತಲೇ ಇರುತ್ತದೆ ಜನರ ಒಲವು

    ದೇಶದಲ್ಲಿ ಆಭರಣ ಪ್ರಿಯರ ಜನಸಂಖ್ಯೆಗೇನೂ ಕೊರತೆ ಇಲ್ಲ. ಚಿನ್ನ ಖರೀದಿ, ವಹಿವಾಟು ಹೆಚ್ಚು ನಡೆಯುತ್ತಲೇ ಇರುತ್ತದೆ. ಇನ್ನು ಹಲವರು ಆಪತ್ಕಾಲದಲ್ಲಿ ಚಿನ್ನ ಅಡ ಇಡಲು ಅಥವಾ ಮಾರಲು ಬೇಕಾಗುತ್ತದೆಂದು ಸಹ ಅದರ ಮೇಲೆ ಹೂಡಿಕೆ ಮಾಡುತ್ತಾರೆ. ಚಿನ್ನವನ್ನು ಬಾಂಡ್‌ ರೂಪದಲ್ಲೂ ಖರೀದಿಸಲಾಗುತ್ತದೆ.

    ಇದನ್ನೂ ಓದಿ: Business Idea: ಕಡಿಮೆ ಹೂಡಿಕೆಯಲ್ಲಿ ಸಣ್ಣ ವ್ಯಾಪಾರ: ಆದ್ರೆ ತಿಂಗಳಿಗೆ 40,000 ರೂ.ವರೆಗೆ ಲಾಭ

    ದೇಶದ ಇತರೇ ನಗರಗಳಲ್ಲಿ ಎಷ್ಟಿದೆ ಬೆಲೆ?

    ಇನ್ನು, ದೇಶದ ಇತರೆ ನಗರಗಳಾದ ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆ, ಕೊಯಮತ್ತೂರು, ಮಧುರೈನಲ್ಲಿ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 50 ಸಾವಿರದಿಂದ 51 ಸಾವಿರದ ಆಸುಪಾಸಿನಲ್ಲೇ ಇದೆ.

    ಮಹಾನಗರಗಳಲ್ಲಿ ಬಂಗಾರದ ಬೆಲೆ ಎಷ್ಟಿದೆ?

    ಈ ಮಧ್ಯೆ, ದೇಶದ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈನಲ್ಲಿ 51,380 ರೂ. ಇದ್ದರೆ, ರಾಷ್ಟ್ರ ರಾಜಧಾನಿ ದೆಹಲಿ, ಮುಂಬೈ ಹಾಗೂ ಕೋಲ್ಕತ್ತದಲ್ಲಿ 24 ಕ್ಯಾರೆಟ್‌ ಬಂಗಾರದ ಬೆಲೆ 49,970 ರೂ. ಆಗಿದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಶಿಕ್‌ನಲ್ಲೂ 24 ಕ್ಯಾರೆಟ್‌ ಚಿನ್ನದ ಬೆಲೆ 50 ಸಾವಿರದ ಆಸುಪಾಸಿನಲ್ಲೇ ಇದೆ.

    ಬೆಳ್ಳಿ ದರ:

    ದೇಶದಲ್ಲಿಂದು ಚಿನ್ನದ ಬೆಲೆ ಇಳಿಕೆಯಾಗಿದ್ದರೂ ಬೆಳ್ಳಿ ದರ (Silver Rate) ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 63,000 ರೂ. ಇತ್ತು. ಇಂದು 400 ರೂ. ಏರಿಕೆಯಾಗಿ 63,400 ರೂ. ಆಗಿದೆ.

    ಆದರೆ, ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ 68,000 ರೂ. ಆಗಿದೆ. ಇದೇ ರೀತಿ ಚೆನ್ನೈ, ಹೈದರಾಬಾದ್, ಕೇರಳ, ವಿಜಯವಾಡ, ವಿಶಾಖಪಟ್ಟಣಂ, ಕೊಯಮತ್ತೂರು, ಮಧುರೈನಲ್ಲಿ ಸಹ 1 ಕೆಜಿ ಬೆಳ್ಳಿಯ ಬೆಲೆ 68,000 ರೂ. ಆಗಿದೆ.

    ಇದನ್ನೂ ಓದಿ: RBI: ಠೇವಣಿದಾರರಿಗೆ ಗುಡ್ ನ್ಯೂಸ್, ಸಾಲಗಾರರಿಗೆ ಕಹಿ ಸುದ್ದಿ; ಇಲ್ಲಿದೆ ಸಂಪೂರ್ಣ ಮಾಹಿತಿ

    ಇನ್ನು, ಮೆಟ್ರೋಪಾಲಿಟನ್‌ ನಗರಗಳಾದ ದೆಹಲಿ, ಮುಂಬೈ ಹಾಗೂ ಕೋಲ್ಕತ್ತದಲ್ಲಿ 63,400 ರೂ. ಆಗಿದೆ. ಒಟ್ಟಾರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಮುಂದುವರಿದಿದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ.

    ಬೆಲೆಯಲ್ಲಿ ಏರಿಕೆ-ಇಳಿಕೆ ಆಗಬಹುದು

    ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಸೇರಿ ಹಲವು ಕಾರಣಗಳಿಂದ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ಷೇರು ಮಾರುಕಟ್ಟೆಯ ಪ್ರಭಾವದಿಂದಲೂ ಚಿನ್ನದ ಬೆಲೆ ಏರಿಕೆ - ಇಳಿಕೆಯಾಗಬಹುದು.
    Published by:Annappa Achari
    First published: