Gold-Silver Price Today: ಬೆಲೆಯಲ್ಲಿ ಸ್ಥಿರತೆ ಕಾಯ್ದುಕೊಂಡ ಚಿನ್ನ, ಅಲ್ಪ ಏರಿಕೆ ಕಂಡ ಬೆಳ್ಳಿ ದರ!

Gold and Silver Price on September 13, 2022: ನಮ್ಮ ದೇಶದಲ್ಲಷ್ಟೆ ಅಲ್ಲ, ಜಗತ್ತಿನಾದ್ಯಂತ ಬಂಗಾರಕ್ಕೆ ಇರುವ ಬೇಡಿಕೆ ಅಷ್ಟಿಷ್ಟಲ್ಲ. ಭಾರತದ ಮಾರುಕಟ್ಟೆಗಳಲ್ಲಿ ಇಂದು ಚಿನ್ನ ಖರೀದಿ ಸಹಜ ಸಂಗತಿಯಾಗಿದ್ದು ದಿನದಲ್ಲೇ ಕೋಟ್ಯಂತರ ರೂಪಾಯಿಗಳಷ್ಟು ವ್ಯವಹಾರವನ್ನು ಈ ವ್ಯವಹಾರ ಹೊಂದಿದೆ. ಬೆಂಗಳೂರಿನಲ್ಲಿ ಇಂದು ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 46,800 ಆಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ಬೆಂಗಳೂರು(ಸೆ.13): ನಿನ್ನೆಗೆ ಹೋಲಿಸಿದರೆ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ ಸ್ಥಿರವಾಗಿದೆ ಅಂತ ಹೇಳಬಹುದು. ಅಲ್ಲದೆ ಕಳೆದ ಕೆಲ ದಿನಗಳಲ್ಲಿ ಆಗುತ್ತಿರುವ ಏರಿಳಿತವನ್ನು ಗಮನಿಸಿದರೆ ಸದ್ಯ ಇದು ಚಿನ್ನ ಕೊಳ್ಳಲು ಉತ್ತಮ ಸಮಯವೆಂದೇ ಎನ್ನಬಹುದು. ಈ ಬಂಗಾರದ ಮೌಲ್ಯ (Gold Rate) ಜಾಗತಿಕ ಮಾರುಕಟ್ಟೆಯಲ್ಲೂ ಅಪಾರವಾಗಿದೆ. ಸಾಕಷ್ಟು ದೇಶಗಳು ವಿದೇಶಿ ವಿನಿಮಯ ರೂಪದಲ್ಲಿ ಚಿನ್ನದ ಸಂಗ್ರಹ ಹೊಂದಿರುವುದು ಎಲ್ಲರಿಗೂ ಗೊತ್ತೆ ಇದೆ, ಏಕೆಂದರೆ ಚಿನ್ನ ಎಲ್ಲ ದೇಶಗಳಲ್ಲೂ ಮಾನ್ಯತೆ ಪಡೆದಿದ್ದು ಎಲ್ಲರಿಂದಲೂ ಸ್ವೀಕರಿಸಲ್ಪಡುತ್ತದೆ.

    ಆರ್ಥಿಕ ಸಂಕಷ್ಟದ ಕಾಲದಲ್ಲಿ ಕೈಯನ್ನು ಹಿಡಿಯುವ ನಂಬಿಕಸ್ಥ ಗೆಳೆಯ ಎಂದು ನಂಬಲಾಗಿರುವ ಚಿನ್ನವು ಈಗ ಹೂಡಿಕೆಯ ವಸ್ತುವಾಗಿಯೂ ಪ್ರಾಮುಖ್ಯತೆ ಪಡೆದಿದೆ. ಹಾಗಾಗಿ, ನಮ್ಮ ದೇಶದಲ್ಲಷ್ಟೆ ಅಲ್ಲ, ಜಗತ್ತಿನಾದ್ಯಂತ ಬಂಗಾರಕ್ಕೆ ಇರುವ ಬೇಡಿಕೆ ಅಷ್ಟಿಷ್ಟಲ್ಲ. ಭಾರತದ ಮಾರುಕಟ್ಟೆಗಳಲ್ಲಿ ಇಂದು ಚಿನ್ನ ಖರೀದಿ ಸಹಜ ಸಂಗತಿಯಾಗಿದ್ದು ದಿನದಲ್ಲೇ ಕೋಟ್ಯಂತರ ರೂಪಾಯಿಗಳಷ್ಟು ವ್ಯವಹಾರವನ್ನು ಈ ವ್ಯವಹಾರ ಹೊಂದಿದೆ. ಬೆಂಗಳೂರಿನಲ್ಲಿ ಇಂದು ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 46,800 ಆಗಿದೆ.

    ಇದನ್ನೂ ಓದಿ: Bank Charges: ಬ್ಯಾಂಕ್​​ ಗ್ರಾಹಕರಿಗೆ ಎಚ್ಚರ, ಈ ಸೇವೆಗಳಿಗೆಲ್ಲಾ ಹೆಚ್ಚಿನ ಶುಲ್ಕ !

    ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರಗಳ ಕುರಿತು ಒಂದು ನೋಟ ಬೀರೋಣ.

    ಒಂದು ಗ್ರಾಂ (1GM)

    22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,675

    24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,100

    ಎಂಟು ಗ್ರಾಂ (8GM)

    22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 37,400

    24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,800

    ಹತ್ತು ಗ್ರಾಂ (10GM)

    22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 46,750

    24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,000

    ನೂರು ಗ್ರಾಂ (100GM)

    22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,67,500

    24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,10,000

    ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,800 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 47,450, ರೂ. 46,750, ರೂ. 46,750 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 46,900 ರೂ. ಆಗಿದೆ.

    ಬೆಳ್ಳಿ ದರ

    ಒಂದೆಡೆ ಚಿನ್ನದ ಬೆಲೆ ಸ್ಥಿರವಾಗಿದ್ದರೆ ಇನ್ನೊಂದೆಡೆ ಇಂದು ಬೆಳ್ಳಿ ದರವು ಅಲ್ಪ ಏರಿಕೆ ಕಂಡಿದೆ. ನಿನ್ನೆಗೆ ಹೋಲಿಸಿದರೆ ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ 20 ಪೈಸೆಗಳಷ್ಟು ಏರಿಕೆಯಾಗಿದೆ. ಚಿನ್ನದಂತೆ ಸಾಮಾನ್ಯವಾಗಿ ಬೆಳ್ಳಿ ದರಗಳಲ್ಲೂ ವ್ಯತ್ಯಾಸ ಆಗುತ್ತಲೇ ಇರುತ್ತದೆ. ಆದಾಗ್ಯೂ, ಕಳೆದ ತಿಂಗಳಿನಲ್ಲಿ ಅಂದರೆ ಆಗಸ್ಟ್ 13 ರಂದು ಬೆಳ್ಳಿಯ ಗರಿಷ್ಠ ಬೆಲೆ ಪ್ರತಿ ಕೆಜಿಗೆ ರೂ. 59,800 ಕ್ಕೆ ತಲುಪಿತ್ತು ಹಾಗೂ ಆಗಸ್ಟ್ 31 ರಂದು ಕನಿಷ್ಠ ಬೆಲೆ ರೂ. 50,800ಕ್ಕೆ ಕುಸಿದಿತ್ತು. ಬೆಳ್ಳಿ ದರ ಇಂದು ಪ್ರತಿ ಕೆಜಿಗೆ ರೂ. 55,200 ಗಳಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನೆ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ.

    ಇದನ್ನೂ ಓದಿ: Health Insurance: ಆರೋಗ್ಯ ವಿಮೆ ಖರೀದಿಸುತ್ತಿದ್ದೀರಾ? ಈ ಸಣ್ಣ ತಪ್ಪು ಮಾತ್ರ ಮಾಡ್ಬೇಡಿ, ಆಮೇಲೆ ನಿಮ್ಗೆ ಪ್ರಾಬ್ಲಂ!

    ಬೆಂಗಳೂರು ನಗರದಲ್ಲಿ ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ದರಗಳು ಕ್ರಮವಾಗಿ ರೂ. 614, ರೂ. 6,140 ಹಾಗೂ ರೂ. 61,400 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 61,400 ಆಗಿದ್ದರೆ ದೆಹಲಿಯಲ್ಲಿ ರೂ. 55,200 ಮುಂಬೈನಲ್ಲಿ ರೂ. 55,200 ಹಾಗೂ ಕೊಲ್ಕತ್ತದಲ್ಲೂ ರೂ. 55,200 ಗಳಾಗಿದೆ.

    ವಿ.ಸೂ: ಇಲ್ಲಿ ಕೊಡಲಾದ ಎಲ್ಲ ದರಗಳು ಮಾರುಕಟ್ಟೆಯ ಬೆಲೆಗಳನ್ನು ಪ್ರತಿನಿಧಿಸುತ್ತವೆ ಹಾಗೂ ಜಿಎಸ್‍ಟಿ, ಟಿಸಿಎಸ್ ಹಾಗೂ ಇನ್ನಿತರೆ ಇರಬಹುದಾದ ಶುಲ್ಕಗಳನ್ನು ಒಳಗೊಂಡಿಲ್ಲ. ಹೆಚ್ಚು ನಿಖರ ಬೆಲೆಗಳಿಗಾಗಿ ನಿಮ್ಮ ಹತ್ತಿರದ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸಿ.
    Published by:Precilla Olivia Dias
    First published: