Gold And Silver Price Today: ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌: ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ

Gold Rate on Feb 15, 2022: ಫೆಬ್ರವರಿ ತಿಂಗಳಲ್ಲಿ ಏರಿಕೆಯಲ್ಲಿದ್ದ ಬಂಗಾರದ ಬೆಲೆ ಇಂದು ದಿಢೀರನೇ ಭಾರೀ ಇಳಿಕೆಯಾಗಿದೆ. ಒಂದು ವಾರದಿಂದ ಸತತವಾಗಿ ಬಂಗಾರ, ಬೆಳ್ಳಿ (Silver Price) ದರ ಏರುತ್ತಲೇ ಇತ್ತು. ಆದರೆ, ಇಂದು ದೇಶದಲ್ಲಿ ಚಿನ್ನದ ಬೆಲೆಯಲ್ಲಿ (Gold Price) ಭಾರಿ ಇಳಿಕೆ ಕಂಡಿದೆ

ಚಿನ್ನಾಭರಣ

ಚಿನ್ನಾಭರಣ

  • Share this:
Gold Rate on Feb 15, 2022: ಫೆಬ್ರವರಿ ತಿಂಗಳಲ್ಲಿ ಏರಿಕೆಯಲ್ಲಿದ್ದ ಬಂಗಾರದ ಬೆಲೆ ಇಂದು ದಿಢೀರನೇ ಭಾರೀ ಇಳಿಕೆಯಾಗಿದೆ. ಒಂದು ವಾರದಿಂದ ಸತತವಾಗಿ ಬಂಗಾರ, ಬೆಳ್ಳಿ (Silver Price) ದರ ಏರುತ್ತಲೇ ಇತ್ತು. ಆದರೆ, ಇಂದು ದೇಶದಲ್ಲಿ ಚಿನ್ನದ ಬೆಲೆಯಲ್ಲಿ (Gold Price) ಭಾರಿ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ (Bengaluru) ಸಹ ಚಿನ್ನದ ಬೆಲೆಯಲ್ಲಿ ಕಡಿಮೆಯಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,810 ರೂ. ಇತ್ತು. ಇಂದು 510 ರೂ. ಕಡಿಮೆಯಾಗಿ 46,300 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 51,060 ರೂ. ಇತ್ತು. ಇಂದು 510 ರೂ. ಇಳಿಕೆಯಾಗಿ 50,510 ರೂ. ಆಗಿದೆ. ಇನ್ನು, ಬೆಂಗಳೂರು ಸೇರಿ ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ದರ ಎಷ್ಟಿದೆ ಎಂಬುದನ್ನು ವಿವರವಾಗಿ ನೋಡೋಣ..

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?

ನೀವು ಚಿನ್ನ ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ, ಹಾಗಾದ್ರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) 51,060 ರೂ. ಇತ್ತು. ಇಂದು 510 ರೂ. ಇಳಿಕೆಯಾಗಿ 50,510 ರೂ. ಆಗಿದೆ.

ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ46,810 ರೂ. ಇತ್ತು. ಇಂದು 510 ರೂ. ಕಡಿಮೆಯಾಗಿ 46,300 ರೂ. ಆಗಿದೆ. ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ಮಂಗಳೂರಿನಲ್ಲೂ ಇದೇ ಬೆಲೆ ಇದೆ.

ಇದನ್ನೂ ಓದಿ:  Financial Tips: ಭವಿಷ್ಯದ ಚಿಂತೆ ಕಾಡ್ತಿದೆಯೇ? ಹಾಗಾದ್ರೆ ನಿಮ್ಮ ಸಂಗಾತಿ ಜೊತೆ ಸೇರಿ ಹೀಗೆ ಪ್ಲಾನ್ ಮಾಡಿ

ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಹೆಚ್ಚಳ

ಭಾರತ ಆಭರಣ ಪ್ರಿಯರಿಗೆ ಹೆಸರುವಾಸಿಯಾಗಿದೆ. ದೇಶದಲ್ಲಿ ಚಿನ್ನ ಖರೀದಿ, ವಹಿವಾಟು ಹೆಚ್ಚು ನಡೆಯುತ್ತಲೇ ಇರುತ್ತದೆ. ಇನ್ನು ಹಲವರು ಆಪತ್ಕಾಲದಲ್ಲಿ ಚಿನ್ನ ಅಡ ಇಡಲು ಅಥವಾ ಮಾರಲು ಬೇಕಾಗುತ್ತದೆಂದು ಸಹ ಅದರ ಮೇಲೆ ಹೂಡಿಕೆ ಮಾಡುತ್ತಾರೆ. ಹಾಗೆ, ಚಿನ್ನ ಸ್ವಲ್ಪ ಕಡಿಮೆ ಬೆಲೆಯಲ್ಲಿದ್ದಾಗ ಖರೀದಿಸಿ ನಂತರ ಬೆಲೆ ಹೆಚ್ಚಾದಾಗ ಮಾರುವವರು ಅಂದರೆ ಚಿನ್ನದ ಮೇಲೆ ಹೂಡಿಕೆದಾರರ ಸಂಖ್ಯೆಯೂ ಹೆಚ್ಚುತ್ತಿದೆ ಎನ್ನಲಾಗಿದೆ. ಚಿನ್ನವನ್ನು ಬಾಂಡ್‌ ರೂಪದಲ್ಲೂ ಖರೀದಿಸಲಾಗುತ್ತಿದೆ.

ಇನ್ನು, ದೇಶದ ಇತರೆ ನಗರಗಳಾದ ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆ, ಕೊಯಮತ್ತೂರು, ಮಧುರೈನಲ್ಲಿ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 50 ಸಾವಿರದಿಂದ 51 ಸಾವಿರದ ಆಸುಪಾಸಿನಲ್ಲೇ ಇದೆ.

ಈ ಮಧ್ಯೆ, ದೇಶದ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈನಲ್ಲಿ 51,220 ರೂ. ಇದ್ದರೆ, ಮುಂಬೈ, ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಕೋಲ್ಕತ್ತದಲ್ಲಿ 24 ಕ್ಯಾರೆಟ್‌ ಬಂಗಾರದ ಬೆಲೆ 50,510 ರೂ. ಆಗಿದೆ.

ಇದೇ ರೀತಿ ಚಂಡೀಗಢ, ಸೂರತ್‌, ನಾಶಿಕ್‌ನಲ್ಲೂ 24 ಕ್ಯಾರೆಟ್‌ ಚಿನ್ನದ ಬೆಲೆ 50 ಸಾವಿರದ ಆಸುಪಾಸಿನಲ್ಲೇ ಇದೆ.

ಬೆಳ್ಳಿ ದರ:

ದೇಶದಲ್ಲಿಂದು ಚಿನ್ನದ ಬೆಲೆ ಇಳಿಕೆಯಾಗಿದ್ದರೂ ಬೆಳ್ಳಿ ದರ (Silver Rate) ಏರಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 63,000 ರೂ. ಇತ್ತು. ಇಂದು 800 ರೂ. ಏರಿಕೆಯಾಗಿ 63,800 ರೂ. ಆಗಿದೆ.

ಇದನ್ನೂ ಓದಿ:  Railway Station: ದೇಶದ 30 ರೈಲು ನಿಲ್ದಾಣಗಳಲ್ಲಿ ಆರಂಭವಾಗಲಿದೆ ವಿಶೇಷ ಸೌಲಭ್ಯ

ಆದರೆ, ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ 68,600 ರೂ. ಆಗಿದೆ. ಇದೇ ರೀತಿ ಚೆನ್ನೈ, ಹೈದರಾಬಾದ್, ಕೇರಳ, ವಿಜಯವಾಡ, ವಿಶಾಖಪಟ್ಟಣಂ, ಕೊಯಮತ್ತೂರು, ಮಧುರೈನಲ್ಲಿ ಸಹ 1 ಕೆಜಿ ಬೆಳ್ಳಿಯ ಬೆಲೆ 68,600 ರೂ. ಆಗಿದೆ.

ಇನ್ನು, ಮೆಟ್ರೋಪಾಲಿಟನ್‌ ನಗರಗಳಾದ ದೆಹಲಿ, ಮುಂಬೈ ಹಾಗೂ ಕೋಲ್ಕತ್ತದಲ್ಲಿ 63,800 ರೂ. ಆಗಿದೆ.

ಒಟ್ಟಾರೆ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಮುಂದುವರಿದಿದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ.

ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಸೇರಿ ಹಲವು ಕಾರಣಗಳಿಂದ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ.
Published by:Mahmadrafik K
First published: