Gold Silver Price: ಗಮನಿಸಿ, ಇದು ಚಿನ್ನದಂಥಾ ಸುದ್ದಿ; ಎರಡನೇ ದಿನವೂ ಇಳಿಕೆಯಾದ ದರ

ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ.

ಚಿನ್ನಾಭರಣ

ಚಿನ್ನಾಭರಣ

  • Share this:
Gold And Silver Price: ಕಳೆದ ಮೂರು ದಿನಗಳಿಂದ ಏರಿಕೆಯಾಗಿದ್ದ ಚಿನ್ನ ನಿನ್ನೆ ಇಳಿಕೆಯಾಗಿತ್ತು. ಇಂದೂ ಕೂಡ ಗ್ರಾಹಕರಿಗೆ ಖುಷಿ ನೀಡುವಂತಹ ದಿನವೇ ಆಗಿದ್ದು, ಬಂಗಾರದ ಬೆಲೆ (Gold Price) ಮತ್ತೆ ಇಳಿಕೆಯಾಗಿದೆ. ನಿನ್ನೆ ಒಂದು ಒಂದು ಗ್ರಾಂ ಚಿನ್ನದ ಬೆಲೆ 4,658 ರೂಪಾಯಿಗೆ ಇಳಿಕೆ ಆಗಿತ್ತು. ಇಂದು ಸಹ ಇಳಿಕೆಯಾಗಿರುವ ಬಂಗಾರದ ಬೆಲೆ ಒಂದು ಗ್ರಾಂಗೆ 4,645 ರೂಪಾಯಿ ಆಗಿದೆ. ಭಾರತವು ಚಿನ್ನದ ಮೇಲಿನ ಆಮದು ಸುಂಕ (Import Tax) ಹೆಚ್ಚಿಸುತ್ತಿದ್ದು ಮುಂಬರುವ ದಿನಗಳಲ್ಲಿ ಚಿನ್ನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಹಾಗಾಗಿ ಚಿನ್ನ ಇನ್ನಷ್ಟು ದುಬಾರಿ ಆಗೋ ಮುಂಚೆ ಅದನ್ನು ಈಗಲೇ ಖರೀದಿಸುವುದು ಉತ್ತಮ. ಕಳೆದ ಕೆಲ ಸಮಯದಿಂದ ಚಿನ್ನದ ಬೆಲೆಗಳಲ್ಲಿ ಅಲ್ಪ ಪ್ರಮಾಣದ ಏರಿಳಿತಗಳು ಆಗುತ್ತಲೇ ಇದ್ದು ಇದಕ್ಕೆ ಪ್ರಮುಖ ಕಾರಣ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ (International Market) ಉಂಟಾಗುತ್ತಿರುವ ಮಾರುಕಟ್ಟೆ ಸಂಬಂಧಿತ ವಿದ್ಯಮಾನಗಳು, ಹಣದುಬ್ಬರ ಹಾಗೂ ಕಚ್ಚಾ ತೈಲದಲ್ಲಾಗಿರುವ ಬೆಲೆ (Crude Oil Price) ಏರಿಕೆ ಹಾಗೂ ಇತರೆ ಜಾಗತಿಕ ಅಂಶಗಳೇ ಆಗಿವೆ.

ಕಳೆದ ಹಲವು ವರ್ಷಗಳಿಂದ ಚಿನ್ನವು ಹಣದುಬ್ಬರದ ವಿರುದ್ಧ ಒಂದು ರಕ್ಷಣಾತ್ಮಕ ಬೇಲಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಬಹುದು. ಹೂಡಿಕೆದಾರರು ಚಿನ್ನವನ್ನು ಪ್ರಮುಖ ಹೂಡಿಕೆಯ ವಸ್ತುವನ್ನಾಗಿ ನೋಡುತ್ತಿದ್ದಾರೆ. ಹಾಗಾಗಿ, ಚಿನ್ನವು ಮಾರುಕಟ್ಟೆಯಲ್ಲಿ ಒಂದು ಉತ್ತಮ ಹೂಡಿಕೆಯ ವಸ್ತುವಾಗಿ ಗುರುತಿಸಿಕೊಂಡಿದೆ. ಇಂದು ಚಿನ್ನದ ಹೂಡಿಕೆ ಬಹು ಸುರಕ್ಷಿತ ಹೂಡಿಕೆ ಎಂದೇ ಹಲವು ತಜ್ಞರು ಹೇಳುತ್ತಾರೆ. ಹಾಗಾಗಿ ಅದರಲ್ಲೂ ವಿಶೇಷವಾಗಿ ಭಾರತೀಯರಿಗೆ ಚಿನ್ನದ ಆಕರ್ಷಣೆ ತುಸು ಹೆಚ್ಚೇ ಎಂದು ಹೇಳಬಹುದು.

ಆರ್ಥಿಕ ಸಂಕಷ್ಟದ ಕಾಲದಲ್ಲಿ ಕೈಯನ್ನು ಹಿಡಿಯುವ ನಂಬಿಕಸ್ಥ ಗೆಳೆಯ ಎಂದು ನಂಬಲಾಗಿರುವ ಚಿನ್ನವು ಈಗ ಹೂಡಿಕೆಯ ವಸ್ತುವಾಗಿಯೂ ಪ್ರಾಮುಖ್ಯತೆ ಪಡೆದಿದೆ. ಹಾಗಾಗಿ, ನಮ್ಮ ದೇಶದಲ್ಲಷ್ಟೆ ಅಲ್ಲ, ಜಗತ್ತಿನಾದ್ಯಂತ ಬಂಗಾರಕ್ಕೆ ಇರುವ ಬೇಡಿಕೆ ಅಷ್ಟಿಷ್ಟಲ್ಲ.

ಇದನ್ನೂ ಓದಿ:  Business Idea: ಈ ಬೆಳೆ ಬೆಳೆದ್ರೆ ಮೂರೇ ತಿಂಗಳಲ್ಲಿ ನೀವು ಲಕ್ಷಾಧಿಪತಿ ಆಗ್ತಿರಿ; ಇಲ್ಲಿದೆ ಕೃಷಿ ಐಡಿಯಾ

ಭಾರತದ ಮಾರುಕಟ್ಟೆಗಳಲ್ಲಿ ಇಂದು ಚಿನ್ನ ಖರೀದಿ ಸಹಜ ಸಂಗತಿಯಾಗಿದ್ದು ದಿನದಲ್ಲೇ ಕೋಟ್ಯಂತರ ರೂಪಾಯಿಗಳಷ್ಟು ವ್ಯವಹಾರವನ್ನು ಈ ವ್ಯವಹಾರ ಹೊಂದಿದೆ. ಬೆಂಗಳೂರಿನಲ್ಲಿ ಇಂದು ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆ ರೂ. 46,500 ಆಗಿದೆ.

ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರಗಳ ಕುರಿತು ಒಂದು ನೋಟ ಬೀರೋಣ.

ಒಂದು ಗ್ರಾಂ (1GM)
22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,645
24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,068

ಎಂಟು ಗ್ರಾಂ (8GM)
22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 37,160
24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,544

ಹತ್ತು ಗ್ರಾಂ (10GM)
22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 46,450
24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 50,680

ನೂರು ಗ್ರಾಂ (100GM)
22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,64,500
24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,06,800

ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,500 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 47,350 ರೂ. 46,450, ರೂ. 46,450 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 46,450 ರೂ. ಆಗಿದೆ.

ಬೆಳ್ಳಿ ದರ

ಚಿನ್ನದಂತೆ ಸಾಮಾನ್ಯವಾಗಿ ಬೆಳ್ಳಿ ದರಗಳಲ್ಲೂ ವ್ಯತ್ಯಾಸ ಆಗುತ್ತಲೇ ಇರುತ್ತದೆ. ಇಂದು ಭಾರತದ ಮಾರುಕಟ್ಟೆಯಲ್ಲಿ ಬೆಳ್ಳಿ ದರ ಒಂದು ಕೆಜಿಗೆ ಬೆಳ್ಳಿ ಬೆಲೆ 54,600 ರೂ. ಆಗಿದ್ದು, ಒಂದು ಕೆಜಿ ಬೆಳ್ಳಿ ಮೇಲೆ 100 ರೂ ಅಧಿಕವಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನೆ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ.

ಇದನ್ನೂ ಓದಿ:  Boycott Flipkart: ಬಾಯ್​ಕಾಟ್ ಫ್ಲಿಪ್​ಕಾರ್ಟ್ ಕ್ಯಾಂಪೇನ್; ನಟ ಸುಶಾಂತ್ ಸಿಂಗ್ ರಜಪೂತ್​ ಅಭಿಮಾನಿಗಳಿಂದ ಜೋರಾದ ಕೂಗು​

ಬೆಂಗಳೂರಿನಲ್ಲಿ ಬೆಳ್ಳಿ ದರ

ಬೆಂಗಳೂರಿನಲ್ಲೂ ಬೆಳ್ಳಿ ದರದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ. ನಗರದಲ್ಲಿ ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ದರಗಳು ಕ್ರಮವಾಗಿ ರೂ. 600, ರೂ. 6,000 ಹಾಗೂ ರೂ. 60,000 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 60,000 ಆಗಿದ್ದರೆ ದೆಹಲಿಯಲ್ಲಿ ರೂ. 54,600 ಮುಂಬೈನಲ್ಲಿ ರೂ. 54,600 ಹಾಗೂ ಕೊಲ್ಕತ್ತದಲ್ಲೂ ರೂ. 54,600 ಗಳಾಗಿದೆ.

ವಿ.ಸೂ: ಇಲ್ಲಿ ಕೊಡಲಾದ ಎಲ್ಲ ದರಗಳು ಮಾರುಕಟ್ಟೆಯ ಬೆಲೆಗಳನ್ನು ಪ್ರತಿನಿಧಿಸುತ್ತವೆ ಹಾಗೂ ಜಿಎಸ್ಟಿ, ಟಿಸಿಎಸ್ ಹಾಗೂ ಇನ್ನಿತರೆ ಇರಬಹುದಾದ ಶುಲ್ಕಗಳನ್ನು ಒಳಗೊಂಡಿಲ್ಲ. ಹೆಚ್ಚು ನಿಖರ ಬೆಲೆಗಳಿಗಾಗಿ ನಿಮ್ಮ ಹತ್ತಿರದ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸಿ.
Published by:Mahmadrafik K
First published: