Gold-Silver Price: ಬಂಪರ್ ಸುದ್ದಿ, 1 ಗ್ರಾಂ ಚಿನ್ನದ ಬೆಲೆಯಲ್ಲಿ ಊಹಿಸದಷ್ಟು ಇಳಿಕೆ: ಒಡವೆ ಖರೀದಿಸೋರಿಗೆ ಲಕ್ಕಿ ಡೇ

ಇಂದು ಒಂದು ಗ್ರಾಂ ಚಿನ್ನದ ಬೆಲೆ 4,658 ರೂಪಾಯಿ ಇಂದು ಆಗಿದೆ. 22 ಕ್ಯಾರೆಟ್​ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 32 ರೂಪಾಯಿಗಳು ಕಡಿತಗೊಂಡಿದೆ. ನಿನ್ನೆಯ ಬೆಲೆಗೆ ಹೋಲಿಕೆ ಮಾಡಿದರೆ 10 ಗ್ರಾಂ ಚಿನ್ನದ ಮೇಲೆ 370 ರೂ. ಕಡಿತಗೊಂಡಿದೆ.

ಚಿನ್ನಾಭರಣ

ಚಿನ್ನಾಭರಣ

  • Share this:
ಇಂದು ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ (Gold Price) 4,690 ರೂ. ಇದ್ದದ್ದು, ಇಂದು ಒಂದು ಗ್ರಾಂ ಚಿನ್ನದ ಬೆಲೆ 4,658 ರೂಪಾಯಿ ಇಂದು ಆಗಿದೆ. 22 ಕ್ಯಾರೆಟ್​ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ (Gold Price) 32 ರೂಪಾಯಿಗಳು ಕಡಿತಗೊಂಡಿದೆ. ನಿನ್ನೆಯ ಬೆಲೆಗೆ ಹೋಲಿಕೆ ಮಾಡಿದರೆ 10 ಗ್ರಾಂ ಚಿನ್ನದ ಮೇಲೆ 370 ರೂ. ಕಡಿತಗೊಂಡಿದೆ. ಆದರೆ ಭಾರತವು ಚಿನ್ನದ ಮೇಲಿನ ಆಮದು ಸುಂಕ ಹೆಚ್ಚಿಸುತ್ತಿದ್ದು ಮುಂಬರುವ ದಿನಗಳಲ್ಲಿ ಚಿನ್ನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಹಾಗಾಗಿ ಚಿನ್ನ ಇನ್ನಷ್ಟು ದುಬಾರಿ ಆಗೋ ಮುಂಚೆ ಅದನ್ನು ಈಗಲೇ ಖರೀದಿಸುವುದು ಉತ್ತಮ. ಕಳೆದ ಕೆಲ ಸಮಯದಿಂದ ಚಿನ್ನದ ಬೆಲೆಗಳಲ್ಲಿ ಅಲ್ಪ ಪ್ರಮಾಣದ ಏರಿಳಿತಗಳು ಆಗುತ್ತಲೇ ಇದ್ದು ಇದಕ್ಕೆ ಪ್ರಮುಖ ಕಾರಣ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉಂಟಾಗುತ್ತಿರುವ ಮಾರುಕಟ್ಟೆ ಸಂಬಂಧಿತ ವಿದ್ಯಮಾನಗಳು, ಹಣದುಬ್ಬರ ಹಾಗೂ ಕಚ್ಚಾ ತೈಲದಲ್ಲಾಗಿರುವ ಬೆಲೆ ಏರಿಕೆ ಹಾಗೂ ಇತರೆ ಜಾಗತಿಕ ಅಂಶಗಳೇ ಆಗಿವೆ.

ಮಾರುಕಟ್ಟೆಯಲ್ಲಿ ಇಂದಿನ ಬಂಗಾರದ ದರಗಳ ಕುರಿತು ಒಂದು ನೋಟ ಬೀರೋಣ.

ಒಂದು ಗ್ರಾಂ (1GM)
22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,568
24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,082

ಎಂಟು ಗ್ರಾಂ (8GM)
22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 37,264
24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,656

ಹತ್ತು ಗ್ರಾಂ (10GM)
22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 46,580
24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 50,830

ನೂರು ಗ್ರಾಂ (100GM)
22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,65,800
24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 4,08,200

ಇದನ್ನೂ ಓದಿ: Petrol-Diesel Price Today: ವೀಕೆಂಡ್ ಗುಡ್​ನ್ಯೂಸ್! 10 ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ ಇಳಿಕೆ, ಹಲವೆಡೆ ಸ್ಥಿತಿ

ಚಿನ್ನಕ್ಕೆ ಎಲ್ಲಾ ದೇಶಗಳಲ್ಲೂ ಮಾನ್ಯತೆ

ಇನ್ನೂ, ಈ ಬಂಗಾರದ ಮೌಲ್ಯ ಜಾಗತಿಕ ಮಾರುಕಟ್ಟೆಯಲ್ಲೂ ಅಪಾರವಾಗಿದೆ. ಸಾಕಷ್ಟು ದೇಶಗಳು ವಿದೇಶಿ ವಿನಿಮಯ ರೂಪದಲ್ಲಿ ಚಿನ್ನದ ಸಂಗ್ರಹ ಹೊಂದಿರುವುದು ಎಲ್ಲರಿಗೂ ಗೊತ್ತೆ ಇದೆ, ಏಕೆಂದರೆ ಚಿನ್ನ ಎಲ್ಲ ದೇಶಗಳಲ್ಲೂ ಮಾನ್ಯತೆ ಪಡೆದಿದ್ದು ಎಲ್ಲರಿಂದಲೂ ಸ್ವೀಕರಿಸಲ್ಪಡುತ್ತದೆ. ಅದರಲ್ಲೂ ವಿಶೇಷವಾಗಿ ಭಾರತ ದೇಶ ಎಂದರೆ ಕೇಳಬೇಕೆ? ಮೊದಲಿನಿಂದಲೂ ಭಾರತದಲ್ಲಿ ಬಂಗಾರಕ್ಕಿರುವ ವಿಶೇಷತೆಯೇ ಬೇರೆ. ಮದುವೆಯಿಂದ ಹಿಡಿದು ಅನೇಕ ಇತರೆ ಶುಭ ಕಾರ್ಯಗಳಲ್ಲಿ ಭಾರತೀಯರು ಬಂಗಾರವನ್ನು ಯಥೇಚ್ಛವಾಗಿ ಬಳಸುತ್ತಾರೆ. ಅದರಲ್ಲೂ ನವಜಾತ ಶಿಶು ಇರಲಿ ಅಥವಾ ಹೊಸದಾಗಿ ಮದುವೆ ಮಾಡಿಕೊಂಡ ದಂಪತಿಗಳಿರಲಿ ಅವರಲ್ಲಿ ಬಂಗಾರದ ಯಾವುದಾದರೂ ವಸ್ತು ಅಥವಾ ಸಿಂಗಾರದ ಸಾಮಾನು ಇದ್ದೆ ಇರುತ್ತದೆ.

ಬಂಗಾರ ಒಂದು ಉತ್ತಮ ಹೂಡಿಕೆ

ಕಳೆದ ಹಲವು ವರ್ಷಗಳಿಂದ ಚಿನ್ನವು ಹಣದುಬ್ಬರದ ವಿರುದ್ಧ ಒಂದು ರಕ್ಷಣಾತ್ಮಕ ಬೇಲಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಬಹುದು. ಹೂಡಿಕೆದಾರರು ಚಿನ್ನವನ್ನು ಪ್ರಮುಖ ಹೂಡಿಕೆಯ ವಸ್ತುವನ್ನಾಗಿ ನೋಡುತ್ತಿದ್ದಾರೆ. ಹಾಗಾಗಿ, ಚಿನ್ನವು ಮಾರುಕಟ್ಟೆಯಲ್ಲಿ ಒಂದು ಉತ್ತಮ ಹೂಡಿಕೆಯ ವಸ್ತುವಾಗಿ ಗುರುತಿಸಿಕೊಂಡಿದೆ. ಇಂದು ಚಿನ್ನದ ಹೂಡಿಕೆ ಬಹು ಸುರಕ್ಷಿತ ಹೂಡಿಕೆ ಎಂದೇ ಹಲವು ತಜ್ಞರು ಹೇಳುತ್ತಾರೆ. ಹಾಗಾಗಿ ಅದರಲ್ಲೂ ವಿಶೇಷವಾಗಿ ಭಾರತೀಯರಿಗೆ ಚಿನ್ನದ ಆಕರ್ಷಣೆ ತುಸು ಹೆಚ್ಚೇ ಎಂದು ಹೇಳಬಹುದು.

ವಿ.ಸೂ: ಇಲ್ಲಿ ಕೊಡಲಾದ ಎಲ್ಲ ದರಗಳು ಮಾರುಕಟ್ಟೆಯ ಬೆಲೆಗಳನ್ನು ಪ್ರತಿನಿಧಿಸುತ್ತವೆ ಹಾಗೂ ಜಿಎಸ್ಟಿ, ಟಿಸಿಎಸ್ ಹಾಗೂ ಇನ್ನಿತರೆ ಇರಬಹುದಾದ ಶುಲ್ಕಗಳನ್ನು ಒಳಗೊಂಡಿಲ್ಲ. ಹೆಚ್ಚು ನಿಖರ ಬೆಲೆಗಳಿಗಾಗಿ ನಿಮ್ಮ ಹತ್ತಿರದ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸಿ.
Published by:Kavya V
First published: